ಅಂಕೋಲಾ | ‘ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ’ ಘೋಷಣೆಯೊಂದಿಗೆ ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Date:

Advertisements

ದೇಶದಲ್ಲಿ ಮತ ಕದ್ದು ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇದನ್ನು ಜನಸಾಮಾನ್ಯರಿಗೆ ಮನದಟ್ಟು ಮಾಡುವ ಕೆಲಸವ‌ನ್ನು ಮಾಡಬೇಕು ಎಂದು ಅಂಕೋಲಾ ಪಟ್ಟಣದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು‌ ‘ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ’ ಘೋಷಣೆಯೊಂದಿಗೆ ಮತಗಳ್ಳತನ ವಿರುದ್ಧ ಪ್ರತಿಭಟನೆ ನಡೆಸಿದರು.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದ ನಾಡವರ ಸಭಾ ಭವನದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಜಿಲ್ಲಾ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್ ಮಾತನಾಡಿ, “ರಾಹುಲ್ ಗಾಂಧಿಯವರು ನಕಲಿ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿ, ಚುನಾವಣೆ ಆಯೋಗಕ್ಕೆ ದಾಖಲೆ ನೀಡುವಂತೆ ಕೇಳಿದರೆ ಆಯೋಗವು ದಾಖಲೆ ಅಳಿಸಿ ಹೋಗಿದೆಯೆಂದು ಹೇಳಿಕೆ ನೀಡುತ್ತ ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದೆ” ಎಂದು ಆರೋಪಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮಾತನಾಡಿ, “ಪಕ್ಷದ ಕಾರ್ಯಕರ್ತರು ಚುನಾವಣೆ ಸಂದರ್ಭಗಳಲ್ಲಿ ಸೈನಿಕರಂತೆ ಕೆಲಸ ಮಾಡಿದ್ದಾರೆ. ಕಾರ್ಯಕರ್ತರಿಗೆ ಹಾಗೂ ಮುಖಂಡರಿಗೆ ಪಕ್ಷದಿಂದ ದೊರೆಯಬೇಕಾದ ಗೌರವ ಸಿಕ್ಕೇ ಸಿಗುತ್ತದೆ” ಎಂದು ಹೇಳಿದರು. 

Advertisements

ಆಡಳಿತ ಸುಧಾರಣಾ ಆಯೋಗದ ಆರ್ ವಿ ದೇಶಪಾಂಡೆ ಮಾತನಾಡಿ, “ಸಂಘಟನೆ ಗಟ್ಟಿ ಇದ್ದಾಗ ಮಾತ್ರ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯ. ಕಾರ್ಯಕರ್ತರ ಹೃದಯದಲ್ಲಿ ಕೂತಾಗ ಮಾತ್ರ ನಾಯಕನಾಗಿ ಯಶಸ್ವಿಯಾಗಲು ಸಾಧ್ಯವಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ಗುಟ್ಟಹಳ್ಳಿ ಸರ್ಕಾರಿ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

ಶಿರಸಿ ಶಾಸಕ ಭೀಮಣ್ಣ ನಾಯ್ಕ ಮಾತನಾಡಿ, “ದೇಶದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯದಿದ್ದರೆ ಕಾಂಗ್ರೆಸ್ ಅಧಿಕಾರದಲ್ಲಿದ್ದ ಕಾಲದಲ್ಲಿ, ಬಿಜೆಪಿ ಜನರ ದಿಕ್ಕು ತಪ್ಪಿಸಿ, ಅಧಿಕಾರಕ್ಕೇರುವ ತಂತ್ರವನ್ನಷ್ಟೇ ಮಾಡುತ್ತಿದೆ” ಎಂದು ಆರೋಪಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಸಾಯಿ ಗಾಂವಕರ, ಮುಖಂಡರಾದ ಡಾ.ಅಂಜಲಿ ನಿಂಬಾಳ‌, ನಿವೇದಿತ್ ಆಳ್ವಾ, ಕೆ ಎಚ್‌ ಗೌಡ, ಶಾರದಾ ಶೆಟ್ಟಿ, ವಿ ಎಸ್‌ ಪಾಟೀಲ್‌, ರಮಾನಂದ ನಾಯಕ, ಗೋಪಾಲಕೃಷ್ಣ ನಾಯಕ, ಸುಜಾತಾ ಗಾಂವಕರ, ಬೀನಾ ವೈದ್ಯ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೊರಬ | 30 ಅಡಿ ಬಾವಿಗೆ ಬಿದ್ದ ಆಕಳು ರಕ್ಷಣೆ

ಸೊರಬ, ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿ ಬಾವಿಗೆ ಬಿದ್ದ ಆಕಳನ್ನು ಅಗ್ನಿಶಾಮಕದಳದ ಸಿಬ್ಬಂದಿ...

ಶಿವಮೊಗ್ಗ | ಹಳೆ ದ್ವೇಷ : ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

ಶಿವಮೊಗ್ಗ, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನಿಗೆ ಇನ್ನೊಬ್ಬ ಚಾಕುವಿನಿಂದ ಇರಿದು...

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

Download Eedina App Android / iOS

X