ಅಂಕೋಲಾ | ಅಡುಗೆ ಎಣ್ಣೆ ಸಾಗಿಸುತ್ತಿದ್ದ ಲಾರಿ ಪಲ್ಟಿ; ನೂರಾರು ಲೀಟರ್ ಎಣ್ಣೆ ರಸ್ತೆ ಪಾಲು

Date:

ಅಂಕೋಲಾ ತಾಲ್ಲೂಕಿನ ಹಾರವಾಡ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡುಗೆ ಎಣ್ಣೆ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರ ಪರಿಣಾಮವಾಗಿ ನೂರಾರು ಲೀಟರ್ ಖಾದ್ಯ ತೈಲ ರಸ್ತೆಗೆ ಚೆಲ್ಲಿ, ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು.

- Advertisement -

ಶನಿವಾರ ತಡರಾತ್ರಿ ಸುಮಾರು 11:30ರ ಸುಮಾರಿಗೆ ಹುಬ್ಬಳ್ಳಿಯಿಂದ ಗೋವಾದತ್ತ ಸಾಗುತ್ತಿದ್ದ ಪ್ರಿಯಾ ಆಯಿಲ್ ಕಂಪನಿಗೆ ಸೇರಿದ ಗೂಡ್ಸ್ ಲಾರಿ ಹಾರವಾಡ ಬಳಿ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿಯ ಬದಿಗೆ ಉರುಳಿದೆ. ಲಾರಿ ಮಗುಚಿ ಬಿದ್ದ ಪರಿಣಾಮ ಅದರಲ್ಲಿದ್ದ ಎಣ್ಣೆಯ ಡ್ರಮ್‌ಗಳು ಒಡೆದು ಹೋಗಿ, ರಸ್ತೆಯ ತುಂಬಾ ಎಣ್ಣೆ ಹರಡಿತು. ಇದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಅದೃಷ್ಟವಶಾತ್, ಲಾರಿ ಚಾಲಕ ಮತ್ತು ಸಹಾಯಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಸುದ್ದಿ ಓದಿದ್ದೀರಾ? ಯಲ್ಲಾಪುರ | ಕಟಾವು ಹಂತದಲ್ಲಿರುವ ಭತ್ತಕ್ಕೆ ಕೀಟಗಳ ಬಾಧೆ; ರೈತರು ಕಂಗಾಲು

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಅಂಕೋಲಾ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು, ಸಂಚಾರ ಸುಗಮಗೊಳಿಸಲು ಕ್ರಮ ಕೈಗೊಂಡಿದ್ದಾರೆ. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...