ಅಂಕೋಲಾ | ಕಸ್ತೂರಿ ರಂಗನ್ ವರದಿ ಕುರಿತ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸುವಂತೆ ರೈತ ಸಂಘದ ಒತ್ತಾಯ

Date:

ಅಂಕೋಲಾ: ಪಶ್ಚಿಮಘಟ್ಟ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಗೆ ಸೇರಿಸುವ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿರುವ ಕರಡು ಅಧಿಸೂಚನೆಗೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಬೇಕು ಹಾಗೂ ಕಸ್ತೂರಿ ರಂಗನ್ ವರದಿಯನ್ನು ವೈಜ್ಞಾನಿಕವಾಗಿ ಮರುಪರಿಶೀಲಿಸಲು ಒತ್ತಾಯಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಅಂಕೋಲಾ ತಾಲೂಕು ಸಮಿತಿ ಆಗ್ರಹಿಸಿದೆ.

- Advertisement -

ಈ ಕುರಿತು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿರುವ ಸಂಘ, ವಿಶೇಷ ವಿಧಾನಸಭಾ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಕುರಿತು ಸಮಗ್ರ ಚರ್ಚೆ ನಡೆಸಿ, ರಾಜ್ಯದ ಜನರ ಹಿತದೃಷ್ಟಿಯಿಂದ ಸೂಕ್ತ ನಿರ್ಣಯ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಕಸ್ತೂರಿ ರಂಗನ್ ವರದಿ ಜಾರಿಯಾಗುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟ ಪ್ರದೇಶದಲ್ಲಿ ವಾಸಿಸುತ್ತಿರುವ ಸುಮಾರು 40 ಲಕ್ಷ ಜನರಲ್ಲಿ ಆತಂಕ ಮೂಡಿದೆ. ವರದಿ ಜಾರಿಯಿಂದ ಜನರ ಜೀವನೋಪಾಯ ಹಾಗೂ ಹಿತಾಸಕ್ತಿಗೆ ಧಕ್ಕೆಯಾಗದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ರೈತ ಸಂಘ ಮನವಿಯಲ್ಲಿ ತಿಳಿಸಿದೆ.

ಕಸ್ತೂರಿ ರಂಗನ್ ನೇತೃತ್ವದ ಉನ್ನತ ಮಟ್ಟದ ಸಮಿತಿ 2013ರಲ್ಲಿ ಪಶ್ಚಿಮಘಟ್ಟ ಸಂರಕ್ಷಣೆ ಕುರಿತು ವರದಿ ಸಲ್ಲಿಸಿತ್ತು. ದೇಶದ ಆರು ರಾಜ್ಯಗಳ ಸುಮಾರು 56 ಸಾವಿರ ಚದರ ಕಿ.ಮೀ. ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಗುರುತಿಸಲು ವರದಿಯಲ್ಲಿ ಶಿಫಾರಸು ಮಾಡಲಾಗಿದ್ದು, ಅದರಲ್ಲಿ ಕರ್ನಾಟಕದ 20,668 ಚದರ ಕಿ.ಮೀ. ಪ್ರದೇಶ ಸೇರಿದೆ.

ಈ ಸುದ್ದಿ ಓದಿದ್ದೀರಾ ? ಉತ್ತರ ಕನ್ನಡ | ಪ್ರಜಾ ಸೇವಾ ಆಂದೋಲನಕ್ಕೆ ಉತ್ತಮ ಸ್ಪಂದನೆ: ವಿವಿಧ ಇಲಾಖೆಗಳಿಗೆ 1,383 ಅರ್ಜಿಗಳ ಸಲ್ಲಿಕೆ

ಇದೀಗ ಕೇಂದ್ರ ಸರ್ಕಾರ ಜುಲೈ 27ರಂದು ಹೊರಡಿಸಿರುವ ಏಳನೇ ಕರಡು ಅಧಿಸೂಚನೆಯಡಿ ಕರ್ನಾಟಕದ ಬೆಳಗಾವಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಮೈಸೂರು, ಶಿವಮೊಗ್ಗ ಹಾಗೂ ಉಡುಪಿ ಜಿಲ್ಲೆಗಳ 39 ತಾಲೂಕುಗಳ 1,449 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶದ ವ್ಯಾಪ್ತಿಗೆ ಸೇರಿಸಲು ಗುರುತಿಸಲಾಗಿದೆ.

ಕರಡು ಅಧಿಸೂಚನೆಯನ್ವಯ ಗಣಿಗಾರಿಕೆ, ಕಲ್ಲು ಗಣಿಗಾರಿಕೆ, ಮರಳು ಗಣಿಗಾರಿಕೆ, ಉಷ್ಣ ವಿದ್ಯುತ್ ಸ್ಥಾವರಗಳು ಹಾಗೂ ನಿರ್ದಿಷ್ಟ ಮಿತಿಗಿಂತ ಹೆಚ್ಚಿನ ಕಟ್ಟಡ ಮತ್ತು ಟೌನ್‌ಶಿಪ್ ಅಭಿವೃದ್ಧಿ ಚಟುವಟಿಕೆಗಳ ಮೇಲೆ ನಿಯಂತ್ರಣ ಜಾರಿಯಾಗುವ ಸಾಧ್ಯತೆಯಿದೆ. ಕೃಷಿ, ನೆಡುತೋಪು ಸೇರಿದಂತೆ ಜನರ ದೈನಂದಿನ ಜೀವನಾಧಾರ ಚಟುವಟಿಕೆಗಳ ಮೇಲೂ ಪರಿಣಾಮ ಬೀರಬಹುದೆಂಬ ಆತಂಕವನ್ನು ರೈತ ಸಂಘ ವ್ಯಕ್ತಪಡಿಸಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರದ ಕರಡು ಅಧಿಸೂಚನೆಗೆ ರಾಜ್ಯ ಸರ್ಕಾರ ತನ್ನ ಆಕ್ಷೇಪಣೆಯನ್ನು ಸಲ್ಲಿಸಬೇಕು. ಅಲ್ಲದೆ, ವಿಶೇಷ ವಿಧಾನಸಭಾ ಅಧಿವೇಶನದಲ್ಲಿ ವಿಷಯವನ್ನು ಸೂಕ್ತ ರೀತಿಯಲ್ಲಿ ಚರ್ಚಿಸಿ, ಕಸ್ತೂರಿ ರಂಗನ್ ವರದಿಯನ್ನು ವೈಜ್ಞಾನಿಕ ನೆಲೆಯಲ್ಲಿ ಮರುಪರಿಶೀಲಿಸುವಂತೆ ಒತ್ತಾಯಿಸಿ ನಿರ್ಣಯ ಕೈಗೊಳ್ಳಬೇಕು ಎಂದು ಸಂಘ ಆಗ್ರಹಿಸಿದೆ.

ಹೋರಾಟದ ನೇತೃತ್ವವನ್ನು ರೈತ ಸಂಘದ ತಾಲೂಕು ಸಮಿತಿ ಅಧ್ಯಕ್ಷ ಗೌರೀಶ ನಾಯಕ, ಕಾರ್ಯದರ್ಶಿ ಸಂತೋಷ ನಾಯ್ಕ ಹಾಗೂ ಪದಾಧಿಕಾರಿಗಳಾದ ಉದಯ ನಾಯ್ಕ ಹೊಸಗದ್ದೆ, ವೆಂಕಟರಮಣ ಗೌಡ, ಮಾದೇವ ಗೌಡ, ಮೀನಾಕ್ಷಿ ಗೌಡ, ಗುರು ನಾಯ್ಕ ಅಗಸೂರ ಮತ್ತು ಸಂದೀಪ್ ನಾಯ್ಕ ಸುಂಕಸಾಳ ವಹಿಸಿದ್ದರು.

ಶಾಂತಾರಾಮ ನಾಯಕ ಅವರು ಪ್ರತಿಭಟನೆ‌ ಉದ್ದೇಶಿಸಿ ಮಾತನಾಡಿದರು ಹಾಗೂ ನಾಗರಾಜ ಹೆಗಡೆ ಕೊಡ್ಲಗದ್ದೆ, ಬಾಲಚಂದ್ರ ಶೆಟ್ಟಿ, ರಮಾನಂದ ಅಚವೆ, ಜ್ಯೋತಿ ನಾಯ್ಕ, ವಿಠ್ಠಲ ಗೌಡ, ಕೇಶವ ನಾಯಕ, ಚಂದ್ರು ಗೌಡ ಶಿರಗುಂಜಿ, ಶಿವರಾಮ ಪಟಗಾರ ಬ್ರಹ್ಮೂರು ಸೇರಿದಂತೆ ನೂರಾರು ಜನರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ತಿರಂಗಾ ಯಾತ್ರೆ: ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಒತ್ತಾಯ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ...

ಉಡುಪಿ | ಭೂಗತ ಪಾತಕಿ ಹೇಮಂತ್ ಪೂಜಾರಿ ಜೊತೆ ಸೇರಿ ಉದ್ಯಮಿಗಳಿಗೆ ಬೆದರಿಕೆ ಪ್ರಕರಣ: ಆರೋಪಿ ಸೆರೆ

ಭೂಗತ ಪಾತಕಿ ಹೇಮಂತ್ ಪೂಜಾರಿ ಜೊತೆ ಸೇರಿಕೊಂಡು ಜಿಲ್ಲೆಯ ಉದ್ಯಮಿ ಹಾಗೂ...

ಉಡುಪಿ | ಮಲಬಾರ್ ಗೋಲ್ಡ್‌ನಲ್ಲಿ ‘ಆರ್ಟಿಸ್ಟ್ರಿ’ ಆಭರಣ ಪ್ರದರ್ಶನಕ್ಕೆ ಚಾಲನೆ

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನ ಉಡುಪಿ ಶಾಖೆಯಲ್ಲಿ ಆಯೋಜಿಸಲಾಗಿರುವ ‘ಆರ್ಟಿಸ್ಟ್ರಿ’ ಕಲಾತ್ಮಕ...

ಗದಗ | ಪಶ್ಚಿಮ ಪದವೀಧರರ  ಚುನಾವಣೆ; ಜಿಲ್ಲೆಯಲ್ಲಿ ಶೇ. 77.66  ರಷ್ಟು ಮತದಾನ ದಾಖಲು

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತದಾನವು ಅಕ್ಟೋಬರ್ 23...