ಅಂಕೋಲಾ | ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ ಮೇಲೆ ಮಾರಣಾಂತಿಕ ಹಲ್ಲೆ: ಸುಫಾರಿ ಶಂಕೆ, ನಾಲ್ವರ ವಶ

Date:

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿ ಗ್ರಾಮದ ಬಳಿ ಕಾಂಗ್ರೆಸ್ ಮುಖಂಡ ಹಾಗೂ ಗೃಹ ಸಚಿವರ ಆಪ್ತರೆನ್ನಲಾದ ಗೋಪಾಲಕೃಷ್ಣ ನಾಯಕ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ಭೀಕರ ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದೆ. ಈ ಘಟನೆಯು ಜಿಲ್ಲೆಯಾದ್ಯಂತ ತಲ್ಲಣ ಮೂಡಿಸಿದ್ದು, ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

- Advertisement -

ಘಟನೆಯ ವಿವರ: ಬುಧವಾರದಂದು ಗೋಪಾಲಕೃಷ್ಣ ನಾಯಕ ಅವರು ಸಂಚರಿಸುತ್ತಿದ್ದ ವೇಳೆ ಗೋವಾ ನೋಂದಣಿಯ ಕಾರಿನಲ್ಲಿ ಬಂದ ಸುಮಾರು ಆರು ಮಂದಿ ಅಪರಿಚಿತ ದುಷ್ಕರ್ಮಿಗಳು ಅವರನ್ನು ಹಿಂಬಾಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಅಪಾಯದ ಮುನ್ಸೂಚನೆ ಅರಿತ ನಾಯಕ ಅವರು ತಕ್ಷಣವೇ ಸಮೀಪದಲ್ಲಿದ್ದ ಬ್ಯಾಂಕ್‌ವೊಂದಕ್ಕೆ ನುಗ್ಗಿ ಪ್ರಾಣಾಪಾಯದಿಂದ ಪಾರಾಗಲು ಯತ್ನಿಸಿದ್ದಾರೆ. ಆದರೆ, ಅಷ್ಟರಲ್ಲೇ ದುಷ್ಕರ್ಮಿಗಳು ಅವರ ಮೇಲೆ ರಾಡ್ ಹಾಗೂ ಚಾಕುಗಳಿಂದ ಮನಸೋಇಚ್ಛೆ ದಾಳಿ ನಡೆಸಿದ್ದಾರೆ.

ದಾಳಿಯ ವೇಳೆ ಗೋಪಾಲಕೃಷ್ಣ ನಾಯಕ ಅವರ ತಲೆ ಹಾಗೂ ಹೊಟ್ಟೆಯ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಅವರ ಜೊತೆಗಿದ್ದ ಮತ್ತೊಬ್ಬ ವ್ಯಕ್ತಿಗೂ ಚಾಕು ಇರಿತವಾಗಿದೆ ಎಂದು ತಿಳಿದುಬಂದಿದೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಗಾಯಾಳುಗಳನ್ನು ತಕ್ಷಣವೇ ಅಂಕೋಲಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ತಲೆಯ ಗಾಯ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಹೊನ್ನಾವರಕ್ಕೆ ರವಾನಿಸಲಾಗಿದ್ದು, ಸದ್ಯ ವೈದ್ಯರು ಸ್ಕ್ಯಾನಿಂಗ್ ನಡೆಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕಾರವಾರ | 61ನೇ ಫೆಮಿನಾ ಮಿಸ್ ಇಂಡಿಯಾ ಫೈನಲ್‌ಗೆ ಲಗ್ಗೆ ಇಟ್ಟ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿ!

ವಿಷಯ ತಿಳಿಯುತ್ತಿದ್ದಂತೆಯೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ) ದೀಪನ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.

ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯ ಫಲವಾಗಿ ಮಾಜಾಳಿ ಚೆಕ್ ಪೋಸ್ಟ್ ಬಳಿ ಸಂಶಯಾಸ್ಪದವಾಗಿ ಓಡಾಡುತ್ತಿದ್ದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ವಶಕ್ಕೆ ಪಡೆದವರು ಬಿಹಾರ ಮೂಲದವರಾಗಿದ್ದು, ಈ ಕೃತ್ಯವು ಸುಫಾರಿ (ಹಣ ನೀಡಿ ನಡೆಸುವ ದಾಳಿ) ಆಧಾರಿತವಾಗಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ದಾಳಿಯ ಹಿಂದಿರುವ ನೈಜ ಸೂತ್ರಧಾರರು ಯಾರು ಮತ್ತು ಹಲ್ಲೆಗೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ‘ಕಬ್ಬದುಳುಮೆ’ ಕಾವ್ಯಲೋಕದ ಓದಿನ ಹೊಸಪರಿ

ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ ನಿರಂತರ ಬೇಸಾಯವಾದ...

ರಾಯಚೂರು | ಭೂಮಾಪಕ–ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ

ಭೂದಾಖಲೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಭೂಮಾಪಕರ ಹುದ್ದೆಗಳು ಹಾಗೂ ಕಂದಾಯ...

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಓರ್ವ ಸಾವು; ಸುರಕ್ಷತಾ ಲೋಪದ ಸಮಗ್ರ ತನಿಖೆಗೆ ಆಗ್ರಹ

ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (ಎಂಆರ್‌ಪಿಎಲ್) ಘಟಕದಲ್ಲಿ...