ಅಂಕೋಲಾ | ಭೀಕರ ಸರಣಿ ಅಪಘಾತ: 12 ವಿದೇಶಿಗರು ಸೇರಿ 28 ಮಂದಿಗೆ ಗಾಯ, ಹೆದ್ದಾರಿ ಸಂಚಾರ ಅಸ್ತವ್ಯಸ್ತ

Date:

ಅಂಕೋಲಾ: ರಾಷ್ಟ್ರೀಯ ಹೆದ್ದಾರಿ 52ರ ಅಂಕೋಲಾ ತಾಲೂಕಿನ ಸುಂಕಸಾಳ ಸಮೀಪ ಗುರುವಾರ ಬೆಳಿಗ್ಗೆ ಲಾರಿ ಹಾಗೂ ಎರಡು ಖಾಸಗಿ ಬಸ್‌ಗಳ ನಡುವೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ 12 ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು 28 ಮಂದಿ ಗಾಯಗೊಂಡಿದ್ದಾರೆ.

- Advertisement -

ಗಾಯಾಳುಗಳ ಪೈಕಿ ಎಂಟು ವಿದೇಶಿ ಪ್ರಜೆಗಳ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ತುರ್ತು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಅಪಘಾತದ ವಿವರ: ಹುಬ್ಬಳ್ಳಿಯತ್ತ ತೆರಳುತ್ತಿದ್ದ ಲಾರಿ ಮತ್ತು ಹಂಪಿಯಿಂದ ಗೋವಾಕ್ಕೆ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ನಡುವೆ ಮೊದಲು ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತದ ಬೆನ್ನಲ್ಲೇ ಬಸ್‌ನ ಹಿಂಬದಿಯಿಂದ ಬರುತ್ತಿದ್ದ ಮತ್ತೊಂದು ಖಾಸಗಿ ಬಸ್ ಕೂಡ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ.

1000537174

ಅಪಘಾತದ ತೀವ್ರತೆಗೆ ಮೂರೂ ವಾಹನಗಳು ಸಂಪೂರ್ಣವಾಗಿ ಜಖಂಗೊಂಡಿದ್ದು, ಬಸ್‌ಗಳ ಮುಂಭಾಗ ನುಜ್ಜುಗುಜ್ಜಾಗಿದೆ. ಇಬ್ಬರು ಬಸ್ ಚಾಲಕರು ಕ್ಯಾಬಿನ್‌ನೊಳಗೆ ಸಿಲುಕಿಕೊಂಡಿದ್ದು, ಅವರ ಕಾಲುಗಳಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ.

ಈ ಸುದ್ದಿ ಓದಿದ್ದೀರಾ? ಶಿರಸಿ | ಹೆಗಡೆಕಟ್ಟಾ ಯುವಕನ ಅಪ್ರತಿಮ ಸಾಧನೆ: 25ರ ಹರೆಯದಲ್ಲೇ ಸಿವಿಲ್ ನ್ಯಾಯಾಧೀಶರಾಗಿ ಸುಮಂತ್ ಆಯ್ಕೆ

ಘಟನೆ ನಡೆದ ತಕ್ಷಣ ಸ್ಥಳೀಯ ಸಾರ್ವಜನಿಕರು ಹಾಗೂ ಅಂಕೋಲಾ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡರು. ವಾಹನದೊಳಗೆ ಸಿಲುಕಿದ್ದ ಚಾಲಕರು ಹಾಗೂ ಗಾಯಾಳುಗಳನ್ನು ಹರಸಾಹಸಪಟ್ಟು ಹೊರತೆಗೆಯಲಾಯಿತು.

ಮೊದಲು ಎಲ್ಲರನ್ನೂ ಅಂಕೋಲಾ ತಾಲೂಕು ಆಸ್ಪತ್ರೆಗೆ ಕರೆದೊಯ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಯಿತು. ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದವರನ್ನು ತಕ್ಷಣವೇ ಸುಸಜ್ಜಿತ ಖಾಸಗಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಹೆದ್ದಾರಿಯ ಮಧ್ಯಭಾಗದಲ್ಲೇ ಅಪಘಾತ ಸಂಭವಿಸಿದ್ದರಿಂದ ಸುಮಾರು ಐದು ಗಂಟೆಗಳ ಕಾಲ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿತ್ತು. ಇದರಿಂದಾಗಿ ಅರಬೈಲ್ ಘಟ್ಟ ಪ್ರದೇಶದವರೆಗೆ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.

ನಂತರ ಸುಂಕಸಾಳ ಹೊರಠಾಣೆ ಸಿಬ್ಬಂದಿ ಹಾಗೂ ಅಂಕೋಲಾ ಪೊಲೀಸರು ಕ್ರೇನ್ ಮೂಲಕ ವಾಹನಗಳನ್ನು ತೆರವುಗೊಳಿಸಿ, ಸಂಚಾರ ಸುಗಮಗೊಳಿಸಿದರು. ಈ ಘಟನೆ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...