ಅಂಕೋಲಾ | ಉಪನ್ಯಾಸಕನಿಂದ ಲೈಂಗಿಕ ಕಿರುಕುಳ ಆರೋಪ; ಪೋಷಕರಿಂದ ಕಾಲೇಜಿಗೆ ಮುತ್ತಿಗೆ

Date:

ಅಂಕೋಲಾ ತಾಲ್ಲೂಕಿನ ಪೂಜಗೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿ ಪೋಷಕರು ಕಾಲೇಜಿಗೆ ಮುತ್ತಿಗೆ ಹಾಕಿ ಭಾರಿ ಪ್ರತಿಭಟನೆ ನಡೆಸಿದ ಘಟನೆ ಮಂಗಳವಾರ ನಡೆದಿದೆ.

- Advertisement -

ಕಾಲೇಜಿನಲ್ಲಿ ಪಾಠ ಮಾಡುವ ವೇಳೆ ವಿದ್ಯಾರ್ಥಿನಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ್ದು, ಆಕೆಯ ಮೊಬೈಲ್‌ಗೆ ಪದೇ ಪದೇ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ ಎಂದು ಆರೋಪಿಸಿ ಉಪನ್ಯಾಸಕ ರಾಮಚಂದ್ರ ಅಂಕೋಲೆಕರ್ ವಿರುದ್ದ  ವಿದ್ಯಾರ್ಥಿನಿ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಎಐ ಕರಾಳ ಮುಖ: ಮುಂದಿನ ಹತ್ತು ವರ್ಷಗಳಲ್ಲಿ ನಾಗರಿಕತೆಗೆ...

ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ ವಿನಾಶಕ್ಕಾಗಿಯಲ್ಲ. ಅಷ್ಟಕ್ಕೂ ಮುಂದಿನ ಒಂದು ದಶಕವು ಮಾನವ ನಾಗರಿಕತೆಯ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ನಿರ್ಣಾಯಕ ಅವಧಿಯಾಗಲಿದೆ ಎಂಬುದು ಖಚಿತ. ಸಾಕಷ್ಟು...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ದೂರು ದಾಖಲಾದರೂ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರು ಆಕ್ರೋಶ ವ್ಯಕ್ತಪಡಿಸಿ ಕಾಲೇಜು ಎದರು ಪ್ರತಿಭಟನೆ ನಡೆಸಿದ್ದಾರೆ. ಉಪನ್ಯಾಸಕನನ್ನು ತಕ್ಷಣ ಅಮಾನತು ಮಾಡುವಂತೆ, ಜೊತೆಗೆ ಅವರಿಗೆ ಬೆಂಬಲವಾಗಿ ನಿಂತಿರುವ ಕಾಲೇಜಿನ ಪ್ರಾಂಶುಪಾಲೆಯನ್ನು ತನಿಖೆ ಪೂರ್ಣಗೊಳ್ಳುವವರೆಗೆ ಬೇರೆಡೆ ವರ್ಗಾಯಿಸುವಂತೆ ಪ್ರತಿಭಟನೆಕಾರರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕಾರವಾರ | ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ರಹಿತ ₹1 ಕೋಟಿ ಹಣ ಪತ್ತೆ; ಇಬ್ಬರು ಪೊಲೀಸರ ವಶಕ್ಕೆ

ಪ್ರತಿಭಟನೆಯಿಂದ ಕಾಲೇಜು ಆವರಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು. ಸ್ಥಳಕ್ಕೆ ಅಂಕೋಲಾ ಪೊಲೀಸರು ಭೇಟಿ ನೀಡಿ ಪೋಷಕರ ಮನವೊಲಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಈ ಬಾರಿ ಕಬ್ಬಿಗೆ ಟನ್‌ಗೆ ₹ 5,500 ದರ ನಿಗದಿಗೆ ರೈತ ಸಂಘದ ಅಧ್ಯಕ್ಷ ಚೂನಪ್ಪ‌ಪೂಜಾರಿ ಆಗ್ರಹ

"ಮಳೆ‌ ಕೊರತೆಯಿಂದ‌ ಎಲ್ಲ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಈ ಬಾರಿ...

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...

ಹಾವೇರಿ | ವಿರೋಧ ಪಕ್ಷದ ರೀತಿಯಲ್ಲಿ‌ ಕೆಲಸ ಮಾಡೋಣ : ಉಡಚಪ್ಪ ಮಾಳಗಿ ಕರೆ

ಜಿಲ್ಲೆಯಲ್ಲಿ‌ ವಿರೋಧ ಪಕ್ಷವೇ ಇಲ್ಲ. ಇಲ್ಲ ಅನೇಕ ಸಮಸ್ಯೆಗಳು ಇವೆ. ದಲಿತರ...