ಅಂಕೋಲಾ | ಅವರ್ಸಾ ಬಳಿ ಖಾಸಗಿ ಬಸ್ ಪಲ್ಟಿ; ಮರ ಅಡ್ಡ ಬಂದಿದ್ದರಿಂದ ತಪ್ಪಿದ ಭಾರೀ ಅನಾಹುತ

Date:

ಅಂಕೋಲಾ: ತಾಲೂಕಿನ ಅವರ್ಸಾ ಸಮೀಪದ ಕವಲಗದ್ದ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ–66ರಲ್ಲಿ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.

- Advertisement -

ಬೆಂಗಳೂರುದಿಂದ ಗೋವಾ ಕಡೆಗೆ ಸಂಚರಿಸುತ್ತಿದ್ದ ಸೀಬರ್ಡ್ ಸಂಸ್ಥೆಗೆ ಸೇರಿದ ಬಸ್ ಅಪಘಾತಕ್ಕೀಡಾಗಿದೆ. ನಿಯಂತ್ರಣ ಕಳೆದುಕೊಂಡ ಬಸ್ ರಸ್ತೆ ಬದಿಗೆ ಉರುಳಿದರೂ, ಸಮೀಪದಲ್ಲಿದ್ದ ಮರಕ್ಕೆ ಅಡ್ಡವಾಗಿ ನಿಂತಿದ್ದರಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಮಳೆಯ ಅಬ್ಬರ: ದೇವಿಮನೆ ಘಟ್ಟದಲ್ಲಿ ಭೂಕುಸಿತ, ಹಾರವಾಡದಲ್ಲಿ ಕಡಲ ಕೊರೆತ ತೀವ್ರ

ಅಪಘಾತ ಸಂಭವಿಸಿದ ವೇಳೆ ಬಸ್‌ನಲ್ಲಿ 15ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಘಟನೆಯಲ್ಲಿ ಬಹುತೇಕ ಎಲ್ಲರೂ ಸುರಕ್ಷಿತವಾಗಿ ಪಾರಾಗಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರ ನೆರವಿನಿಂದ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಬಸ್‌ನಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಿದ್ದ ಕಾರಣ ಹಾಗೂ ಬಸ್ ಮರಕ್ಕೆ ಸಿಲುಕಿ ನಿಂತ ಪರಿಣಾಮ ಹೆಚ್ಚಿನ ಪ್ರಾಣಹಾನಿ ಅಥವಾ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಕುರಿತು ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...