ಅಂಕೋಲಾ | ಹೆದ್ದಾರಿಯಲ್ಲಿ ಪಲ್ಟಿಯಾದ ಖಾಸಗಿ ಬಸ್; ಓರ್ವ ಪ್ರಯಾಣಿಕ ಸಾವು, 21 ಮಂದಿಗೆ ಗಾಯ

Date:

ಅಂಕೋಲಾ: ಹೈದರಾಬಾದ್‌ನಿಂದ ಗೋವಾ ಕಡೆಗೆ ತೆರಳುತ್ತಿದ್ದ ಸೀಬರ್ಡ್ ಸಂಸ್ಥೆಯ ಖಾಸಗಿ ಬಸ್ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಅಂಕೋಲ ತಾಲೂಕಿನ ಕಂಚಿನಬಾಗಿಲು–ಅಗಸೂರು ನಡುವಿನ ಪ್ರದೇಶದಲ್ಲಿ ನಡೆದಿದೆ.

- Advertisement -

ಲಭ್ಯ ಮಾಹಿತಿಯಂತೆ, ಬಸ್‌ನಲ್ಲಿ ಸುಮಾರು 36 ಮಂದಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಅಪಘಾತದಲ್ಲಿ 21 ಮಂದಿಗೆ ವಿವಿಧ ರೀತಿಯ ಗಾಯಗಳಾಗಿವೆ. ಇವರಲ್ಲಿ ಆರು ಮಂದಿಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗೆ ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಸುದ್ದಿ ಓದಿದ್ದೀರಾ? ಭಟ್ಕಳ | ಮುಖ್ಯಮಂತ್ರಿ ಆಯ್ಕೆ: ಹೈಕಮಾಂಡ್ ತೀರ್ಮಾನಕ್ಕೆ ಎಲ್ಲಾ ಶಾಸಕರು ಬದ್ಧ – ಸಚಿವ ಮಂಕಾಳ ವೈದ್ಯ

ಉಳಿದ ಗಾಯಾಳುಗಳಿಗೆ ಅಂಕೋಲಾ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಅಪಘಾತದ ವೇಳೆ ಗಂಭೀರವಾಗಿ ಗಾಯಗೊಂಡ ಹೈದರಾಬಾದ್ ಮೂಲದ ಶರಣಯ್ಯ (45) ಎಂಬವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ವಾಹನ ರಸ್ತೆ ಬದಿಗೆ ಉರುಳಿ ಬಿದ್ದಿದೆ ಎನ್ನಲಾಗಿದೆ. ಅಪಘಾತದ ನಂತರ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

ಘಟನಾ ಸ್ಥಳಕ್ಕೆ ಪೊಲೀಸರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ ಭೇಟಿ ನೀಡಿ, ಕ್ರೇನ್ ಸಹಾಯದಿಂದ ಬಸ್ ತೆರವುಗೊಳಿಸಿ ಸಂಚಾರವನ್ನು ಪುನಃ ಸುಗಮಗೊಳಿಸಿದರು. ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...