ಅಂಕೋಲಾ | ಕಸ್ತೂರಿ ರಂಗನ್ ವರದಿ ಪುನರ್ ಪರಿಶೀಲನೆಗೆ ಆಗ್ರಹ

Date:

ಅಂಕೋಲಾ: ಆದಿವಾಸಿ ಬುಡಕಟ್ಟು ಜನರು ಇಂದಿಗೂ ರಸ್ತೆ, ಕುಡಿಯುವ ನೀರು, ಆರೋಗ್ಯ, ಶಿಕ್ಷಣ ಹಾಗೂ ವಸತಿ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆಯಿಂದ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸುವ ಮುನ್ನ ಸರ್ಕಾರ ಅರಣ್ಯವಾಸಿಗಳ ಹಿತಾಸಕ್ತಿಯನ್ನು ಪರಿಗಣಿಸಿ ವರದಿಯನ್ನು ಕೂಲಂಕಷವಾಗಿ ಪುನರ್ ಪರಿಶೀಲಿಸಬೇಕು ಎಂದು ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ರಾಜ್ಯ ಸಹ ಸಂಚಾಲಕ ಶ್ರೀಧರ ನಾಡ ಒತ್ತಾಯಿಸಿದರು.

- Advertisement -

ಅವರು ಅಂಕೋಲಾದ ನಾಡವರ ಸಭಾಭವನದಲ್ಲಿ ನಡೆದ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಉತ್ತರ ಕನ್ನಡ ಜಿಲ್ಲಾ 4ನೇ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. “ಅಭಿವೃದ್ಧಿಯ ಜೊತೆಗೆ ಪರಿಸರ ಸಂರಕ್ಷಣೆಯೂ ಅಗತ್ಯ. ಒಂದನ್ನು ಬಿಟ್ಟು ಮತ್ತೊಂದನ್ನು ಸಾಧಿಸಲು ಸಾಧ್ಯವಿಲ್ಲ. ಆದರೆ ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಅರಣ್ಯವಾಸಿಗಳ ಬದುಕು ಹಾಗೂ ಹಕ್ಕುಗಳಿಗೆ ಧಕ್ಕೆಯಾಗಬಾರದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸರ್ಕಾರ ಕಸ್ತೂರಿ ರಂಗನ್ ವರದಿಯನ್ನು ಅರಣ್ಯವಾಸಿಗಳ ಹಿತದೃಷ್ಟಿಯಿಂದ ಪುನರ್ ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳಬೇಕು. ಅಲ್ಲದೆ, ಅರ್ಹ ಎಲ್ಲಾ ಅರಣ್ಯವಾಸಿಗಳಿಗೆ ಅರಣ್ಯ ಭೂಮಿ ಹಕ್ಕುಪತ್ರ ನೀಡಬೇಕು,” ಎಂದು ಅವರು ಹೇಳಿದರು.

ಸಮ್ಮೇಳನದಲ್ಲಿ ರಾಜ್ಯ ಸಮಿತಿ ಸಹ ಸಂಚಾಲಕ ಎಸ್.ವೈ. ಗುರುಶಾಂತ್, ಕೃಷ್ಣಪ್ಪ ಕೊಂಚಾಡಿ, ರೈತ ಸಂಘದ ಜಿಲ್ಲಾ ಅಧ್ಯಕ್ಷ ಶಾಂತಾರಾಮ ನಾಯಕ, ಕಾರ್ಮಿಕ ಮುಖಂಡೆ ಯಮುನಾ ಗಾಂವ್ಕರ್, ಸಾಹಿತಿ ಮಾಸ್ತಿ ಗೌಡ ಹೊನ್ನಾವರ ಹಾಗೂ ಸಿದ್ದಿ ಸಮಾಜದ ಮುಖಂಡ ಜಾನ್ ಬಿಳ್ಕಿಕರ್ (ಯಲ್ಲಾಪುರ) ಅತಿಥಿಗಳಾಗಿ ಪಾಲ್ಗೊಂಡು ಆದಿವಾಸಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಅಗತ್ಯ ಮತ್ತು ಆದಿವಾಸಿಗಳ ವಿವಿಧ ಬೇಡಿಕೆಗಳ ಕುರಿತು ಮಾತನಾಡಿದರು.

ಇ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

ಹಾಲಕ್ಕಿ ಸಮಾಜದ ಮೀನಾಕ್ಷಿ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಿಲ್ಲಾ ಸಂಚಾಲಕ ಪ್ರೇಮಾನಂದ ವೇಳಿಪ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ನಾಗೇಶ ಗೌಡ ಸ್ವಾಗತಿಸಿದರು. ಲಕ್ಷ್ಮಿ ಸಿದ್ದಿ ವಂದಿಸಿದರು. ಸಮ್ಮೇಳನದಲ್ಲಿ ವಿವಿಧ ಸಂಘಟನೆಗಳ ಪ್ರಮುಖರಾದ ತಿಮ್ಮಪ್ಪ ಗೌಡ, ಗೌರೀಶ ನಾಯಕ, ಸಂತೋಷ ನಾಯ್ಕ, ಮೀನಾ ಗೌಡ, ವೆಂಕಟರಮಣ ಗೌಡ, ಮಾದೇವ ಗೌಡ, ನಾಗಪ್ಪ ಸಿದ್ದಿ, ಯಶವಂತ ವೇಳಿಪ, ಲಕ್ಷ್ಮಣ ಗಾಂವ್ಕರ್, ಗೋವಿಂದ ಮಾಸ್ತಿ ಮುಕ್ರಿ, ಪುರುಷೋತ್ತಮ ಮರಾಠಿ, ಗೋಪಾಲ ಹಸ್ಲರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ನೂತನ ಜಿಲ್ಲಾ ಸಮಿತಿ ರಚನೆ: ಸಮ್ಮೇಳನದಲ್ಲಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಉತ್ತರ ಕನ್ನಡ ಜಿಲ್ಲಾ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಪ್ರೇಮಾನಂದ ವೇಳಿಪ, ಉಪಾಧ್ಯಕ್ಷರಾಗಿ ಲಕ್ಷ್ಮಣ ಗಾಂವ್ಕರ್, ವೆಂಕಟರಮಣ ಗೌಡ, ನಾಗಪ್ಪ ಸಿದ್ದಿ ಹಾಗೂ ಶಾಂತಾರಾಮ ನಾಯಕ, ಕಾರ್ಯದರ್ಶಿಯಾಗಿ ಲಕ್ಷ್ಮಿ ಸಿದ್ದಿ, ಸಹ ಕಾರ್ಯದರ್ಶಿಗಳಾಗಿ ಮಾದೇವ ಗೌಡ ಮತ್ತು ದಾಕ್ಷಾಯಿಣಿ ಸಿದ್ದಿ ಹಾಗೂ ಖಜಾಂಚಿಯಾಗಿ ರಾಜೇಶ್ ಗಾವಡಾ ಆಯ್ಕೆಯಾದರು.

ಸಮಿತಿ ಸದಸ್ಯರಾಗಿ ಶೀಲಾ ಆಶಿಸ್ ಸಿದ್ದಿ, ಗಣಪತಿ ಸಿದ್ದಿ, ಗೋಪಾಲ ಪರಮ ಹಸ್ಲರ್, ಪುರುಷೋತ್ತಮ ಮರಾಠಿ ಹಾಗೂ ಮಾಸ್ತಿ ಗೌಡ ಆಯ್ಕೆಯಾದರು. ಗೌರವ ಸಲಹೆಗಾರರಾಗಿ ಯಮುನಾ ಗಾಂವ್ಕರ್ ಅವರನ್ನು ಸಮ್ಮೇಳನದಲ್ಲಿ ಆಯ್ಕೆ ಮಾಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...