ಅಂಕೋಲಾ | ವಿಶ್ವಜಿತ್ ನಾಯಕಗೆ ಭಾರತ ವೆಟರನ್ಸ್ ಕ್ರಿಕೆಟ್ ತಂಡದ ನಾಯಕತ್ವ

Date:

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಕ್ರಿಕೆಟ್ ಆಟಗಾರ ವಿಶ್ವಜಿತ್ ನಾಯಕ ಅವರು ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ವೆಟರನ್ಸ್ ಕ್ರಿಕೆಟ್ ಟೂರ್ನಿಗೆ ಆಯ್ಕೆಯಾಗಿರುವ 50+ ಭಾರತೀಯ ವೆಟರನ್ಸ್ ತಂಡದ ನಾಯಕರಾಗಿ ನೇಮಕಗೊಂಡಿದ್ದಾರೆ.

- Advertisement -


ಕ್ರಿಕೆಟ್ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಸಕ್ರಿಯರಾಗಿರುವ ವಿಶ್ವಜಿತ್ ನಾಯಕ ಅವರು ಟೆನ್ನಿಸ್ ಬಾಲ್ ಕ್ರಿಕೆಟ್ ಮೂಲಕ ತಮ್ಮ ಕ್ರೀಡಾ ಪಯಣ ಆರಂಭಿಸಿ ಬಳಿಕ ಲೆದರ್ ಬಾಲ್ ಕ್ರಿಕೆಟ್‌ನಲ್ಲಿಯೂ ಉತ್ತಮ ಸಾಧನೆ ಮಾಡಿದ್ದಾರೆ. ಕರಾವಳಿ ಭಾಗದಲ್ಲಿ ನಡೆದ ಅನೇಕ ಟೂರ್ನಿಗಳಲ್ಲಿ ಭಾಗವಹಿಸಿ ಗಮನಾರ್ಹ ಪ್ರದರ್ಶನ ನೀಡಿದ್ದ ಅವರು, ನಂತರ ವೆಟರನ್ಸ್ ಕ್ರಿಕೆಟ್‌ನಲ್ಲಿ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸುದ್ದಿ ಓದೀದ್ದಿರಾ? ಹಳಿಯಾಳ | ರೌಡಿಶೀಟರ್ ಹಲ್ಲೆ ಪ್ರಕರಣ: ಪಿಎಸ್‌ಐ ಅಮಾನತು, 8 ಸಿಬ್ಬಂದಿ ವರ್ಗಾವಣೆ


ರೋಟರಿ ಸಂಸ್ಥೆಯ ವಿವಿಧ ಕ್ರಿಕೆಟ್ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದ ವಿಶ್ವಜಿತ್ ಅವರು ದೇಶ ಹಾಗೂ ವಿದೇಶಗಳಲ್ಲೂ ಹಲವು ಪಂದ್ಯಾವಳಿಗಳಲ್ಲಿ ಆಡಿದ್ದಾರೆ. ಅವರ ನಿರಂತರ ಉತ್ತಮ ಪ್ರದರ್ಶನದ ಆಧಾರದಲ್ಲಿ ವೆಟರನ್ಸ್ ಕ್ರಿಕೆಟ್ ಇಂಡಿಯಾ (ವಿಸಿಐ) ಆಯ್ಕೆ ಸಮಿತಿಯು ಭಾರತ ತಂಡಕ್ಕೆ ಆಯ್ಕೆ ಮಾಡಿದ್ದು, ಇದೀಗ ತಂಡದ ನಾಯಕತ್ವದ ಜವಾಬ್ದಾರಿಯನ್ನೂ ವಹಿಸಿದೆ.

ಇಂಗ್ಲೆಂಡ್‌ನಲ್ಲಿ ಜೂನ್ 28ರಿಂದ ಜುಲೈ 7ರವರೆಗೆ ನಡೆಯಲಿರುವ ಟೂರ್ನಿಯಲ್ಲಿ ಭಾರತ, ಇಂಗ್ಲೆಂಡ್, ವೆಲ್ಸ್ ಹಾಗೂ ಜಿಂಬಾಬ್ವೆ ತಂಡಗಳು ಸ್ಪರ್ಧಿಸಲಿವೆ. ಈ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಮುನ್ನಡೆಸಲಿರುವ ವಿಶ್ವಜಿತ್ ನಾಯಕ ಅವರ ಆಯ್ಕೆಯಿಂದ ಅಂಕೋಲಾ ಸೇರಿದಂತೆ ಜಿಲ್ಲೆಯಲ್ಲಿ ಸಂತಸ ವ್ಯಕ್ತವಾಗಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ವಿಶ್ವಜಿತ್ ನಾಯಕ, ಗ್ರಾಮೀಣ ಮತ್ತು ಕರಾವಳಿ ಭಾಗಗಳಲ್ಲಿ ಸಾಕಷ್ಟು ಕ್ರೀಡಾ ಪ್ರತಿಭೆಗಳಿದ್ದು, ಅವರಿಗೆ ಸೂಕ್ತ ಅವಕಾಶ ಮತ್ತು ಪ್ರೋತ್ಸಾಹ ದೊರೆತರೆ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.
ವಿಶ್ವಜಿತ್ ನಾಯಕ ಅವರ ಈ ಸಾಧನೆಗೆ ಜಿಲ್ಲೆಯ ಕ್ರೀಡಾಭಿಮಾನಿಗಳು, ಸ್ನೇಹಿತರು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...