1.50 ಲಕ್ಷ ಟನ್‌ ಅಕ್ಕಿ ಕೊಡಲು ಛತ್ತೀಸಗಢ್ ಸರ್ಕಾರ ಒಪ್ಪಿದೆ: ಡಾ.ಜಿ ಪರಮೇಶ್ವರ್

Date:

  • ‘ಅಗತ್ಯದಷ್ಟು ಅಕ್ಕಿ ಯಾವುದೇ ಒಂದು ರಾಜ್ಯದಿಂದ ಸಿಗುತ್ತಿಲ್ಲ‘
  • ‘ನಮ್ಮ ರೈತರಲ್ಲಿ ಅಕ್ಕಿ ಇದ್ದರೆ ಖರೀದಿ ಮಾಡಲಾಗುವುದು’

ಅನ್ನ ಭಾಗ್ಯ ಯೋಜನೆ ಅನುಷ್ಠಾನಕ್ಕೆ ಬೇಕಾದ ಅಕ್ಕಿ ಖರೀದಿ ಬಗ್ಗೆ ಬೇರೆ ರಾಜ್ಯಗಳೊಂದಿಗೆ ಮಾತುಕತೆ ನಡೆಸಿದ್ದ ಸರ್ಕಾರದ ಮನವಿಗೆ ಛತ್ತೀಸಗಢ್ ಸರ್ಕಾರ ಸ್ಪಂದಿಸಿದ್ದು, ಕರ್ನಾಟಕಕ್ಕೆ ಅಕ್ಕಿ ಕೊಡಲು ಮುಂದೆ ಬಂದಿದೆ.

- Advertisement -

ಈ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಸೋಮವಾರ ತುಮಕೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಅನ್ನ ಭಾಗ್ಯ ಯೋಜನೆಗೆ ಬೇಕಾದ 1.50 ಲಕ್ಷ ಟನ್‌ ಅಕ್ಕಿ ಕೊಡಲು ಛತ್ತೀಸಗಢ್ ಸರ್ಕಾರ ಒಪ್ಪಿಗೆ ಸೂಚಿಸಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಅನ್ನ ಭಾಗ್ಯ ಯೋಜನೆಗೆ ಅಗತ್ಯದಷ್ಟು ಅಕ್ಕಿ ಯಾವುದೇ ಒಂದು ರಾಜ್ಯದಿಂದ ಸಿಗುತ್ತಿಲ್ಲ. ಹಲವು ರಾಜ್ಯಗಳನ್ನು ಸಂಪರ್ಕಿಸಲಾಗಿದ್ದು, ಎಲ್ಲಿ ಅಕ್ಕಿ ಸಿಕ್ಕರೂ ಖರೀದಿಸಲಾಗುವುದು. ನಮ್ಮ ರೈತರ ಬಳಿ ಇದ್ದರೂ ಖರೀದಿ ಮಾಡಲಾಗುವುದು. ಈಗ ಛತ್ತೀಸಗಢ್ ಸರ್ಕಾರ ಅಕ್ಕಿ ಕೊಡಲು ಒಪ್ಪಿಗೆ ಸೂಚಿಸಿದೆ. ಅಲ್ಲಿಂದ ಸಾಗಣೆ ಮಾಡಲು ಮುಂದಿನ ಕ್ರಮ ಕೈಗೊಳ್ಳಲಾಗುತ್ತಿದೆ” ಎಂದರು.

“ಅನ್ನ ಭಾಗ್ಯ ಯೋಜನೆಯಲ್ಲಿ ಅಕ್ಕಿ ಜತೆಗೆ ಜೋಳ, ರಾಗಿ ಸಹ ಕೊಡಲಾಗುವುದು. ಬಡವರ ಯೋಜನೆ ಮುಂದುವರಿಸುತ್ತೇವೆ. ಯಾವುದೇ ಕಾರಣಕ್ಕೂ ಅನ್ನ ಭಾಗ್ಯ ಯೋಜನೆ ನಿಲ್ಲಿಸುವುದಿಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಅನ್ನ ಭಾಗ್ಯ | ರಾಜ್ಯದ ಜೋಳ, ರಾಗಿ, ಕುಚಲಕ್ಕಿ ಹಾಗೂ ಸಿರಿಧಾನ್ಯ ಖರೀದಿಸಿ ಹಂಚಿ: ರೈತ ಸಂಘಗಳ ಮನವಿ

ಇದೇ ವೇಳೆ ಅಕ್ಕಿ ಕೊಡಲು ನಿರಾಕರಿಸಿರುವ ಕೇಂದ್ರ ಸರ್ಕಾರದ ನಡೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿ, “ಭಾರತ ಆಹಾರ ನಿಗಮದವರು(ಎಫ್‌ಸಿಐ) ಮೊದಲು ಅಕ್ಕಿ ಕೊಡಲು ಒಪ್ಪಿಕೊಂಡು ನಂತರ ನಿರಾಕರಿಸಿದರು. ಎಫ್‌ಸಿಐಗೆ ಈ ರೀತಿ ಸೂಚನೆ ಕೊಟ್ಟವರು ಯಾರು?” ಎಂಬುದು ರಾಜ್ಯದ ಜನತೆಗೂ ತಿಳಿಯಲಿ ಎಂದರು.

“ವಿದ್ಯುತ್‌ ದರ ಹೆಚ್ಚಳ ಬಗ್ಗೆ ಪ್ರತಿಕ್ರಿಯಿಸಿ, ಹಿಂದಿನ ಬಿಜೆಪಿ ಸರ್ಕಾರ ವಿದ್ಯುತ್‌ ದರ ಹೆಚ್ಚಳ ಮಾಡಿದೆ. ಇದರಿಂದ ಕೈಗಾರಿಕೆಗಳ ಮೇಲೂ ಹೆಚ್ಚು ಹೊರೆ ಬಿದ್ದಿದೆ. ಈ ಬಗ್ಗೆ ಸರ್ಕಾರ ಯೋಚಿಸುತ್ತಿದ್ದು, ಉದ್ಯಮಿಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುತ್ತೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ವಿರುದ್ಧ ಕಾಂಗ್ರೆಸ್ ಆಕ್ರೋಶ; ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...