ಅನ್ನ ಭಾಗ್ಯ | ಓಪನ್‌ ಮಾರ್ಕೆಟ್‌ನಲ್ಲಿ ಅಕ್ಕಿಗಾಗಿ ಟೆಂಡರ್‌ ಕರೆಯುತ್ತೇವೆ: ಸಿಎಂ ಸಿದ್ದರಾಮಯ್ಯ

Date:

  • 5 ಕೆಜಿ ಅಕ್ಕಿ ಬದಲಾಗಿ ಹಣ ನೀಡಲು ಸದ್ಯ ತೀರ್ಮಾನಿಸಲಾಗಿದೆ
  • ಬಡವರ ಪರವಾಗಿ ರೂಪಿಸಿದ ಯೋಜನೆಯನ್ನು ಕೇಂದ್ರ ಧಿಕ್ಕರಿಸಿದೆ

ಅನ್ನ ಭಾಗ್ಯ ಯೋಜನೆಯಡಿ ಘೋಷಿಸಿದಂತೆ ತಲಾ 10 ಕೆಜಿ ಅಕ್ಕಿ ಕೊಡಲು ನಾವು ಈಗಲೂ ಸಿದ್ಧರಿದ್ದೇವೆ. ಆದರೆ ಕೇಂದ್ರ ಸರ್ಕಾರ ನಾವು ದುಡ್ಡು ಕೊಡುತ್ತೇವೆ ಎಂದರೂ ಅಕ್ಕಿ ಕೊಡುತ್ತಿಲ್ಲ. ಹೀಗಾಗಿ ಓಪನ್‌ ಮಾರ್ಕೆಟ್‌ನಲ್ಲಿ ನಾವು ಟೆಂಡರ್‌ ಕರೆಯುತ್ತಿದ್ದೇವೆ. ಅಲ್ಲಿವರೆಗೂ ಉಳಿದ 5 ಕೆಜಿ ಅಕ್ಕಿ ಬದಲಾಗಿ ಹಣ ನೀಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಜನರಿಗೆ ನಾವು ಜುಲೈನಿಂದ ಅಕ್ಕಿ ಕೊಡುವುದಾಗಿ ಪ್ರಾಮಿಸ್ ಮಾಡಿದ್ದೇವೆ. ಆದರೆ, ಅಗತ್ಯವಿರುವಷ್ಟು ಅಕ್ಕಿ ನಮಗೆ ಸಿಗುತ್ತಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ನಾವು ಮನವಿ ಮಾಡಿದರೂ ಅವರು ಸೂಕ್ತವಾಗಿ ಸ್ಪಂದಿಸದೇ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಭಾರತೀಯ ಆಹಾರ ನಿಗಮ (ಎಫ್‌ಸಿಐ) ಮೊದಲು ಅಕ್ಕಿ ಕೊಡುವುದಾಗಿ ಹೇಳಿ, ನಂತರ ಅಕ್ಕಿ ಕೊಡುವುದಿಲ್ಲ ಎಂದು ತಿಳಿಸಿತು. ನಂತರ ನಾನು ಅಮಿತ್ ಶಾ ಅವರನ್ನು ಭೇಟಿಯಾದೆ. ನಮ್ಮ ಆಹಾರ ಇಲಾಖೆ ಸಚಿವರು ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್‌ ಅವರನ್ನು ಭೇಟಿ ಮಾಡಿದರೂ ಅಕ್ಕಿ ಕೊಡಲು ಮುಂದೆ ಬರಲಿಲ್ಲ” ಎಂದು ಕಿಡಿ ಕಾರಿದರು.

ಈ ಸುದ್ದಿ ಓದಿದ್ದೀರಾ? ವಿದ್ಯಾರ್ಥಿನಿ ಬರೆದ ಸಾಮಾಜಿಕ ಕಳಕಳಿ ಪತ್ರಕ್ಕೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

“ದಾಸ್ತಾನು ಇಲ್ಲದೇ ಹೋದರೆ ಪರವಾಗಿಲ್ಲ. ಆದ್ರೆ ದಾಸ್ತಾನು ಇಟ್ಟುಕೊಂಡು ಅಕ್ಕಿಯನ್ನು ಕೇಂದ್ರ ಸರ್ಕಾರ ಕೊಡುತ್ತಿಲ್ಲ. ಖಾಸಗಿಯವರಿಗೆ ಅಕ್ಕಿ ಮಾರಾಟ ಮಾಡಲು ಕೇಂದ್ರ ಅನುಮತಿ ನೀಡಿದೆ. ಆದರೆ ರಾಜ್ಯಗಳು ಮಾತ್ರ ಭಾಗಿಯಾಗದಂತೆ ನೋಡಿಕೊಂಡಿದೆ. ಇದರ ಅರ್ಥವೇನು? ಉದ್ದೇಶಪೂರ್ವಕವಾಗಿ ಅಕ್ಕಿ ವಿತರಿಸದೇ ಇರುವುದು. ಬಡವರ ಪರವಾಗಿ ರೂಪಿಸಿದ ಯೋಜನೆಗಳನ್ನು ಧಿಕ್ಕರಿಸುವುದು” ಎಂದು ಹರಿಹಾಯ್ದರು.

“ಕೇಂದ್ರ ಸರ್ಕಾರದ ನಡೆ ಜನಸಾಮಾನ್ಯರಿಗೆ ಮಾಡುತ್ತಿರುವ ದ್ರೋಹವಾಗಿದೆ. ಯಡಿಯೂರಪ್ಪ ಮತ್ತು ಬೊಮ್ಮಾಯಿ ಅವರು ಅಕ್ಕಿ ಕೊಡಿ ಎಂದು ನಮ್ಮನ್ನು ಕೇಳುತ್ತಿದ್ದಾರೆ. ದಯವಿಟ್ಟು ಬಡವರಿಗಾಗಿ ರೂಪಿಸಿರುವ ಅನ್ನ ಭಾಗ್ಯ ಯೋಜನೆಗೆ ಅಕ್ಕಿ ಕೊಡುವಂತೆ ಕೇಂದ್ರವನ್ನು ಕೋರಲಿ. ಅಕ್ಕಿ ಸಿಗದಿದ್ದರೆ ದುಡ್ಡು ಕೊಡಿ ಎಂದಿದ್ದರು. ಈಗ ದುಡ್ಡು ಕೊಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಅಕ್ಕಿ ವ್ಯವಸ್ಥೆ ಮಾಡಿಕೊಂಡು ಆಹಾರ ಧಾನ್ಯ ವಿತರಿಸುತ್ತೇವೆ” ಎಂದರು.

ನೇರವಾಗಿ ಡಿಬಿಟಿ ಮೂಲಕ ಹಣ

“ನಮ್ಮ ಸರ್ಕಾರ ನೀಡಿದ ಅನ್ನಭಾಗ್ಯ ಭರವಸೆಯಂತೆ 10 ಕೆಜಿ ಆಹಾರಧಾನ್ಯವನ್ನು ಜುಲೈ1 ರಿಂದ ನೀಡಬೇಕಾಗಿದೆ. ರಾಜ್ಯ ಸರ್ಕಾರಕ್ಕೆ ಅಕ್ಕಿ ಲಭ್ಯವಾಗುವವರೆಗೆ ಪ್ರತಿ ಕೆಜಿ ಅಕ್ಕಿಗೆ 34 ರೂ. ನಂತೆ 5 ಕೆಜಿ ಅಕ್ಕಿಯ ಮೊತ್ತ ರೂ.170 ನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಡಿಬಿಟಿ ಮಾಡಲು ತೀರ್ಮಾನಿಸಲಾಗಿದೆ” ಎಂದರು.

“ರಾಜ್ಯಕ್ಕೆ ಅಕ್ಕಿ ದಾಸ್ತಾನು ದೊರೆತ ತಕ್ಷಣದಿಂದ ಹಣದ ಬದಲು ಅಕ್ಕಿಯನ್ನು ಬಿಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರಿಗೆ ವಿತರಿಸಲಾಗುವುದು. ರಾಜ್ಯದ ಜನರಿಗೆ ನಮ್ಮ ಸರ್ಕಾರ ನೀಡಿರುವ ಗ್ಯಾರೆಂಟಿಯಿಂದ ಹಿಂದೆ ಸರಿಯಬಾರದೆಂಬ ಉದ್ದೇಶದಿಂದ ಸಚಿವ ಸಂಪುಟದಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ವಿವರಿಸಿದರು.

“ಎನ್‌ಸಿಎಫ್‌, ನಫೆಡ್, ಕೇಂದ್ರೀಯ ಭಂಡಾರ ಈ ಮೂರು ಸಂಸ್ಥೆಗಳು ಅಕ್ಕಿ ಪೂರೈಸುತ್ತವೆ. ಆದರೆ, ನಮಗೆ ಅಕ್ಕಿ ವಿತರಣೆಗೆ ಸೂಚಿಸಿರುವ ದರ ಹೆಚ್ಚಾಗಿದೆ. ಎನ್‌ಸಿಎಫ್‌ ನವರು 32.94 ಪೈಸೆ ಸೂಚಿಸಿದ್ದು, ನಾವು 32.24 ರೂ.ಗಳಿಗೆ ನೀಡಬೇಕೆಂದು ಕೋರಿದ್ದೇವೆ. ಮುಕ್ತ ಮಾರುಕಟ್ಟೆಯಲ್ಲಿ ಅಕ್ಕಿ ಖರೀದಿಸಲು ಪಾರದರ್ಶಕವಾಗಿ ಟೆಂಡರ್ ಕರೆಯಲಾಗುತ್ತಿದೆ” ಎಂದು ತಿಳಿಸಿದರು.

ಬಿಜೆಪಿ ಸವಾಲನ್ನು ಸರಿಗಟ್ಟಿದ ಸಿಎಂ

ರಾಜ್ಯ ಸರ್ಕಾರ ಬಡವರು ಮತ್ತು ಮಧ್ಯಮ ವರ್ಗದವರಿಗೆ ಅಕ್ಕಿ ಕೊಡಲು ಶ್ರಮಿಸುತ್ತಿದ್ದಾಗ ಬಿಜೆಪಿಯು ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರವನ್ನು ಆಡಿಕೊಂಡಿತ್ತು. ಅಕ್ಕಿ ಕೊಡಲು ಸಾಧ್ಯವಾಗದಿದ್ದರೆ ಅಕ್ಕಿ ಮೊತ್ತದ ಹಣ ಕೊಡಿ ಎನ್ನುವ ಸವಾಲನ್ನು ಸರ್ಕಾರದ ಮುಂದೆ ಇಟ್ಟಿತ್ತು. ಈ ಸವಾಲನ್ನು ಸರಿಗಟ್ಟಿದ ಸರ್ಕಾರ ಅಕ್ಕಿ ಬದಲಿಗೆ ಅಕ್ಕಿ ಮೊತ್ತದ ಹಣವನ್ನು ನೇರವಾಗಿ ಅರ್ಹ ಫಲಾನುಭವಿಗಳ ಖಾತೆಗೆ ಹಾಕುವ ನಿರ್ಧಾರ ತೆಗೆದುಕೊಂಡು ಬಿಜೆಪಿಯ ಬತ್ತಳಿಕೆಯನ್ನು ಬರಿದು ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...