ಹೊನ್ನಾವರದಲ್ಲಿ ಮತ್ತೆ ಗುಡ್ಡ ಕುಸಿತ; ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತ

Date:

ಹೊನ್ನಾವರ: ತಾಲೂಕಿನ ರಾಮತೀರ್ಥ ತಿರುವಿನ ಸಮೀಪ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಗುಡ್ಡದ ಒಂದು ಭಾಗ ಕುಸಿದು ರಸ್ತೆಯ ಮೇಲೆ ಮಣ್ಣು ಬಿದ್ದ ಪರಿಣಾಮ, ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು.

- Advertisement -

ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯ ಪರಿಣಾಮ ಗುಡ್ಡದ ಮಣ್ಣು ಸಡಿಲಗೊಂಡಿದ್ದು, ಏಕಾಏಕಿ ರಸ್ತೆಯ ಮೇಲೆ ಉರುಳಿ ಬಿದ್ದಿದೆ ಎಂದು ತಿಳಿದುಬಂದಿದೆ. ಘಟನೆ ನಡೆದ ವೇಳೆ ರಸ್ತೆಯಲ್ಲಿ ಯಾವುದೇ ವಾಹನಗಳು ಸಂಚರಿಸದಿದ್ದರಿಂದ ಸಂಭವಿಸಬಹುದಾಗಿದ್ದ ಅಪಾಯ ಅದೃಷ್ಟವಶಾತ್ ತಪ್ಪಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಮಳೆಯ ಅಬ್ಬರ: ದೇವಿಮನೆ ಘಟ್ಟದಲ್ಲಿ ಭೂಕುಸಿತ, ಹಾರವಾಡದಲ್ಲಿ ಕಡಲ ಕೊರೆತ ತೀವ್ರ

ಮಳೆ ಮಾತ್ರವಲ್ಲದೆ ಹೆದ್ದಾರಿ ಅಗಲೀಕರಣ ಕಾಮಗಾರಿ ವೇಳೆ ಗುಡ್ಡವನ್ನು ಅವೈಜ್ಞಾನಿಕವಾಗಿ ಕತ್ತರಿಸಿರುವುದೂ ಇಂತಹ ಘಟನೆಗಳು ಮರುಕಳಿಸಲು ಪ್ರಮುಖ ಕಾರಣವಾಗಿದೆ. ಕಾಮಗಾರಿ ನಡೆಸಿದ ಐಆರ್‌ಬಿ (IRB) ಸಂಸ್ಥೆಯ ನಿರ್ಲಕ್ಷ್ಯದಿಂದಲೇ ಈ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಮಣ್ಣು ರಸ್ತೆಗೆ ಬಿದ್ದ ಹಿನ್ನೆಲೆಯಲ್ಲಿ ಹೆದ್ದಾರಿಯ ಒಂದು ಬದಿಯಲ್ಲಿ ವಾಹನ ಸಂಚಾರ ಕೆಲಕಾಲ ಸ್ಥಗಿತಗೊಂಡಿತ್ತು. ಮಾಹಿತಿ ಪಡೆದ ಹೆದ್ದಾರಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಯಂತ್ರಗಳ ಸಹಾಯದಿಂದ ಮಣ್ಣನ್ನು ತೆರವುಗೊಳಿಸಿ ಸಂಚಾರವನ್ನು ಪುನಃ ಆರಂಭಿಸಿದರು.

ಆದರೆ ಮಳೆ ಮುಂದುವರಿದಿರುವುದರಿಂದ ಹಾಗೂ ಗುಡ್ಡದ ಮೇಲ್ಭಾಗದಲ್ಲಿ ಇನ್ನೂ ಬಿರುಕುಗಳು ಕಂಡುಬರುತ್ತಿರುವ ಕಾರಣ ಮತ್ತೊಮ್ಮೆ ಭೂಕುಸಿತ ಸಂಭವಿಸುವ ಆತಂಕ ವ್ಯಕ್ತವಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸದ್ಯ ಆ ಮಾರ್ಗದಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಜಾರಿಗೊಳಿಸಲಾಗಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ರಾಜ್ಯ ಸಂಪುಟದಲ್ಲಿ ಮಹಿಳಾ ಪ್ರಾತಿನಿಧ್ಯದ ಚರ್ಚೆ: ಅನ್ನಪೂರ್ಣ ಹೆಸರು ಮುನ್ನೆಲೆಗೆ!

ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸಚಿವ ಸ್ಥಾನಗಳು ಖಾಲಿ ಉಳಿದಿದ್ದು,...

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...