ಸಂವಿಧಾನ ವಿರೋಧಿ ಶಕ್ತಿಗಳು ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ: ಸಿದ್ದರಾಮಯ್ಯ

Date:

  • ‘ಸಂವಿಧಾನದ ಆಶಯ ಜನರು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ’
  • ‘ಮನುಸ್ಮೃತಿಯ ಜಾರಿ ಎಂದರೆ ಭಾರತೀಯರನ್ನು ಮತ್ತೆ ಗುಲಾಮಗಿರಿಗೆ ತಳ್ಳುವುದು’

ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಸಮಾಜ ಕಲ್ಯಾಣ ಇಲಾಖೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ವಿಧಾನಸೌಧದಲ್ಲಿ ಆಯೋಜಿಸಿದ್ದ ಭಾರತದ ಸಂವಿಧಾನ ಪೀಠಿಕೆಯ ಜಾಗತಿಕ ವಾಚನದ ಕಾರ್ಯಕ್ರಮವನ್ನು ಸಂವಿಧಾನ ಪೀಠಿಕೆ ಓದುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

“ಸಂವಿಧಾನದ ನಾಶ ಮತ್ತು ಮನುಸ್ಮೃತಿಯ ಜಾರಿ ಎಂದರೆ ಶೇ.90 ರಷ್ಟು ಭಾರತೀಯರನ್ನು ಮತ್ತೆ ಗುಲಾಮಗಿರಿಗೆ ತಳ್ಳುವುದಾಗಿದೆ. ಇದಕ್ಕಾಗಿ ಬಹಳ ಕುತಂತ್ರಗಳು ನಡೆಯುತ್ತಿವೆ. We the people of India ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ. ಸಂವಿಧಾನದ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ” ಎಂದರು.

Advertisements

“ಸಂವಿಧಾನದ ಸಮ ಸಮಾಜ ಮತ್ತು ಜಾತ್ಯತೀತ ತತ್ವದ ಆಶಯಗಳಂತೆಯೇ ನಮ್ಮ ಸರ್ಕಾರ ಸರ್ವರ ಏಳಿಗೆಯ ಕಾರ್ಯಕ್ರಮಗಳನ್ನು ಜಾರಿ ಮಾಡಿದೆ. ಜನರ ಹಣವನ್ನು ಮತ್ತೆ ಜನರ ಬದುಕಿಗೇ ಮರಳಿಸುವುದು ನಮ್ಮ ಕಾರ್ಯಕ್ರಮಗಳ ಉದ್ದೇಶವಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರ ಆತ್ಮಹತ್ಯೆ ತೀವ್ರ ಹೆಚ್ಚಳ; ಅನ್ನದಾತರ ಬದುಕಿಗೆ ಬೇಕಿದೆ ಭರವಸೆ

“ಸಂವಿಧಾನ ಜಾರಿಯಾದ ಬಳಿಕ ಭಾರತದಲ್ಲಿ ಅಧಿಕೃತವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಜಾರಿಯಾಯಿತು. ಬುದ್ಧ, ಬಸವ ಕಾಲದಿಂದಲೂ ಪ್ರಜಾಪ್ರಭುತ್ವ ವ್ಯವಸ್ಥೆ ನಮ್ಮ ನೆಲದಲ್ಲಿ ರೂಪುಗೊಂಡಿದೆ. ಸಂವಿಧಾನ ಜಾರಿ ಆಗುವ ಸಂದರ್ಭದಲ್ಲಿ ಪಾರ್ಲಿಮೆಂಟಿನಲ್ಲಿ ನಡೆದ ಚರ್ಚೆಗಳು ನಮ್ಮ ಸಂವಿಧಾನದ ಮಹತ್ವಕ್ಕೆ ಮತ್ತು ಸಂವಿಧಾನ ವಿರೋಧಿಗಳ ಮನಸ್ಥಿತಿಗೆ ಕನ್ನಡಿ ಹಿಡಿದಂತಿವೆ” ಎಂದರು.

ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಹೆಚ್‌ ಸಿ ಮಹದೇವಪ್ಪ, ಜಿ.ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ಮುನಿಯಪ್ಪ, ರಾಮಲಿಂಗಾರೆಡ್ಡಿ, ಶಿವರಾಜ್ ತಂಗಡಗಿ, ಮಂಕಾಳ ವೈದ್ಯ, ಸತೀಶ್ ಜಾರಕಿಹೊಳಿ, ಕೆ ಜೆ ಜಾರ್ಜ್, ಈಶ್ವರ್ ಖಂಡ್ರೆ, ವಿಧಾನಪರಿಷತ್ ಸಭಾಪತಿ ಹೊರಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಗೋವಿಂದರಾಜು, ವಿಧಾನ ಪರಿಷತ್ ಸದಸ್ಯ ಸುಧಾಮ್ ದಾಸ್ ಸೇರಿ 10 ಕ್ಕೂ ಹೆಚ್ಚು ಶಾಸಕರು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿ ಪೊಲೀಸ್ ಅಧಿಕಾರಿಗಳು ಹಾಗೂ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...