ಎಸ್‌ಐಆರ್ ವಿರೋಧಿ ಒಕ್ಕೂಟದಿಂದ ಜೂ.17ರಂದು ಚಾಮರಾಜನಗರದಲ್ಲಿ ಜನಜಾಗೃತಿ ಜಾಥಾ

Date:

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಜೂ.20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆಯಲಿರುವ ರಾಜ್ಯಮಟ್ಟದ ಪ್ರತಿಭಟನೆಗೆ ಬೆಂಬಲ ಸೂಚಿಸುವ ಉದ್ದೇಶದಿಂದ ಜೂ.17ರಂದು ಚಾಮರಾಜನಗರದಲ್ಲಿ ಜನಜಾಗೃತಿ ಜಾಥಾ ಆಯೋಜಿಸಲಾಗಿದೆ ಎಂದು ಎಸ್‌ಐಆರ್ ವಿರೋಧಿ ಕರ್ನಾಟಕ ಒಕ್ಕೂಟದ ಮುಖಂಡರು ತಿಳಿಸಿದರು.

- Advertisement -

ಚಾಮರಾಜನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಸ್‌ಐಆರ್ ವಿರೋಧಿ ಕರ್ನಾಟಕದ ಮುಖಂಡರು ಹಾಗೂ ಹಿರಿಯ ಸಾಹಿತಿ ಕೆ. ವೆಂಕಟರಾಜು, ಎಸ್‌ಐಆರ್ ಪ್ರಕ್ರಿಯೆಯ ವಿರುದ್ಧ ರಾಜ್ಯದ ಜನಾಭಿಪ್ರಾಯವನ್ನು ವ್ಯಕ್ತಪಡಿಸುವ ನಿಟ್ಟಿನಲ್ಲಿ ಜೂ.20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಈ ಪ್ರತಿಭಟನೆಗೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷವೂ ಬೆಂಬಲ ಸೂಚಿಸಿದ್ದು, ಜಿಲ್ಲೆಯ ಸಮಾನಮನಸ್ಕ ಸಂಘಟನೆಗಳ ಮುಖಂಡರು, ಜಾತ್ಯತೀತ ಪಕ್ಷಗಳ ನಾಯಕರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.

ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗಳನ್ನು ನಡೆಸುವ ಮೂಲಕ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಕೈಗೊಳ್ಳಲಾಗಿದೆ. ಅದರ ಭಾಗವಾಗಿ ಜೂ.17ರಂದು ಚಾಮರಾಜನಗರದಲ್ಲಿ ಜಾಥಾ ನಡೆಯಲಿದ್ದು, ವಿಶೇಷ ಪ್ರಚಾರ ವಾಹನದ ಮೂಲಕ ಎಸ್‌ಐಆರ್ ಕುರಿತ ಸಂದೇಶಗಳನ್ನು ಸಾರ್ವಜನಿಕರಿಗೆ ತಲುಪಿಸಲಾಗುವುದು ಎಂದು ತಿಳಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಕರ್ ಮಾತನಾಡಿ, ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ ಯಶಸ್ವಿಯಾಗಲು ವಿವಿಧ ಸಂಘಟನೆಗಳ ಮುಖಂಡರನ್ನು ಒಗ್ಗೂಡಿಸಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕು, ಜನಜಾಗೃತಿ ಜಾಥಾದ ಉದ್ದೇಶವನ್ನು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಿಸಲು ಕನ್ನಡ ಪರ ಸಂಘಟನೆಗಳು, ದಲಿತ ಸಂಘಟನೆಗಳು ಹಾಗೂ ಇತರ ಸಮಾನ ಮನಸ್ಕ ಸಂಘಟನೆಗಳ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಅವರನ್ನು ಜಾಥಾದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಪ್ರೇರೇಪಿಸಬೇಕೆಂದು ಸಲಹೆ ನೀಡಿದರು.

ಜಾಥಾಕ್ಕೆ ಹೆಚ್ಚಿನ ಜನಬೆಂಬಲ ದೊರಕುವಂತೆ ಮಾಡಲು ವಿವಿಧ ಸಂಘಟನೆಗಳ ಸಹಭಾಗಿತ್ವ ಅತ್ಯಂತ ಅಗತ್ಯವಾಗಿದೆ. ಸಂಘಟಿತ ಹೋರಾಟದ ಮೂಲಕ ಮಾತ್ರ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಾಧ್ಯವಾಗುತ್ತದೆ. ಜೂನ್.17ರಂದು ಚಾಮರಾಜನಗರಕ್ಕೆ ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ ಆಗಮಿಸುತ್ತಿರುವ ಕುರಿತು ಸಾರ್ವಜನಿಕರಿಗೆ ಸಮಗ್ರ ಮಾಹಿತಿ ನೀಡಬೇಕು. ಜಾಥಾದ ಉದ್ದೇಶ, ಕಾರ್ಯಕ್ರಮದ ರೂಪುರೇಷೆ ಹಾಗೂ ಮತದಾರರ ಹಕ್ಕುಗಳ ರಕ್ಷಣೆಯ ಅಗತ್ಯತೆಯನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಉಳಿಸುವ ನಿಟ್ಟಿನಲ್ಲಿ ಎಲ್ಲ ವರ್ಗದ ಜನರು ಜಾಥಾಕ್ಕೆ ಬೆಂಬಲ ಸೂಚಿಸಿ ಭಾಗವಹಿಸಬೇಕು ಎಂದ ಕರೆ ನೀಡಿದರು.

ಬಿಎಸ್ಪಿ ಮುಖಂಡ ನಾಗಯ್ಯ ಮಾತನಾಡಿ, ಜಿಲ್ಲೆಯಲ್ಲಿ ಈಗಾಗಲೇ ಸುಮಾರು ಶೇ.90ರಷ್ಟು ಮತದಾರರ ಮ್ಯಾಪಿಂಗ್ ಕಾರ್ಯ ಪೂರ್ಣಗೊಂಡಿರುವ ಮಾಹಿತಿ ಇದೆ. ಉಳಿದ ಮತದಾರರ ಮ್ಯಾಪಿಂಗ್ ಕಾರ್ಯವೂ ಶೀಘ್ರವಾಗಿ ಪೂರ್ಣಗೊಳ್ಳಬೇಕಾಗಿದೆ. ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ?ಕೊಡಗು | ಎಸ್‌ಐಆರ್ ವಿರೋಧಿ ಜಾಗೃತಿ ಅಭಿಯಾನ: ಮತದಾನ ಹಕ್ಕು ರಕ್ಷಣೆಗೆ ಆಗ್ರಹ

ಎಸ್‌ಐಆರ್ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ತಡೆಯುವುದು ಸಾಧ್ಯವಿಲ್ಲದಿದ್ದರೂ, ಮತದಾರರ ಪಟ್ಟಿ ಪರಿಷ್ಕರಣೆ ಪಾರದರ್ಶಕವಾಗಿ ಹಾಗೂ ನ್ಯಾಯಸಮ್ಮತವಾಗಿ ನಡೆಯಬೇಕಾಗಿದೆ. ಪ್ರತಿಯೊಬ್ಬ ಅರ್ಹ ಮತದಾರರ ಮತದಾನದ ಹಕ್ಕು ರಕ್ಷಣೆ ಆಗುವಂತೆ ಕ್ರಮ ಕೈಗೊಳ್ಳುವುದು ಅತ್ಯಂತ ಮುಖ್ಯವಾಗಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?SIR ವಿರೋಧಿ ಜಾಥಾಕ್ಕೆ ಮಂಡ್ಯದಲ್ಲಿ ಬೆಂಬಲ: ಜೂನ್ 20ರ ಪ್ರತಿರೋಧ ಸಮಾವೇಶಕ್ಕೆ ಕರೆ

ಪತ್ರಿಕಾಗೋಷ್ಠಿಯಲ್ಲಿ ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಅಬ್ರಾರ್ ಅಹಮದ್, ಕೆ.ಎಂ. ರೂಪೇಶ್, ಆರ್. ಮಹೇಶ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಓವರ್‌ಪಾಸ್‌ ಉದ್ಘಾಟನೆಯಾದರೂ ಸರ್ವಿಸ್‌ ರಸ್ತೆಗೆ ಮುಕ್ತಿ ಸಿಕ್ಕಿಲ್ಲ; ಧೂಳಿನಿಂದ ವಾಹನ ಸವಾರರಿಗೆ ಸಂಕಷ್ಟ

ಉಡುಪಿ ನಗರದ ಕರಾವಳಿ ಜಂಕ್ಷನ್‌ನಿಂದ ಕಿನ್ನಿಮೂಲ್ಕಿವರೆಗಿನ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿರುವ ಸರ್ವಿಸ್‌...

ಯಲ್ಲಾಪುರ | ವನ್ಯಜೀವಿಗಳ ಅಂಗಾಂಗ ವಶ ಪ್ರಕರಣ: ಸಮಗ್ರ ತನಿಖೆಗೆ ಸೋಮೇಶ್ವರ ನಾಯ್ಕ ಆಗ್ರಹ

ಯಲ್ಲಾಪುರ ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ವನ್ಯಜೀವಿಗಳ ಅಂಗಾಂಗಗಳನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ ಹಲವು...

ಬಾಗೇಪಲ್ಲಿ | ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಚಿಕ್ಕಬಳ್ಳಾಪುರ ಜಿಲ್ಲೆಯ ಕೃಷ್ಣೇಗೌಡ ಆಯ್ಕೆ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಗಣ್ಯರಿಗೆ ಕರ್ನಾಟಕ ಸರ್ಕಾರ ನೀಡುವ...