ಶಹಾಪುರದಲ್ಲಿ ಎಸ್‌ಐಆರ್ ವಿರೋಧಿ ಹೋರಾಟದ ಕಹಳೆ; ಬೈಕ್ ರ‍್ಯಾಲಿ ಮೂಲಕ ಜನಜಾಗೃತಿ

Date:

ಎಸ್‌ಐಆರ್ (ವಿಶೇಷ ತೀವ್ರ ಪರಿಷ್ಕರಣೆ) ವಿರೋಧಿ ಜನಜಾಗೃತಿ ಜಾಥಾ ಸೋಮವಾರ ಯಾದಗಿರಿ ಜಿಲ್ಲೆಯ ಶಹಾಪುರ ನಗರಕ್ಕೆ ಆಗಮಿಸಿದ್ದು, ವಿವಿಧ ಪ್ರಗತಿಪರ ಸಂಘಟನೆಗಳು ಹಾಗೂ ಜಾತ್ಯತೀತ ಪಕ್ಷಗಳ ಮುಖಂಡರು ಭರ್ಜರಿ ಸ್ವಾಗತ ಕೋರಿದರು.

- Advertisement -

ನಗರದ ಅಂಬೇಡ್ಕರ್ ಪ್ರತಿಮೆ ಬಳಿ ಜಾಥಾವನ್ನು ಬರಮಾಡಿಕೊಂಡ ಕಾರ್ಯಕರ್ತರು, ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಎಸ್‌ಐಆರ್ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಬೈಕ್ ರ‍್ಯಾಲಿ ಮೂಲಕ ಬಸವೇಶ್ವರ ವೃತ್ತದವರೆಗೆ ಸಂಚರಿಸಿದರು. ಈ ವೇಳೆ ಸಾರ್ವಜನಿಕರಿಗೆ ಎಸ್‌ಐಆರ್ ಕುರಿತ ಕರಪತ್ರಗಳನ್ನು ಹಂಚಿ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚೀನಾದ ಅತಿಕ್ರಮಣಕ್ಕೆ ಅಡ್ಡ ಬಿದ್ದು, ಸಿಟ್ಟಿಗೆ ಅಣೆಕಟ್ಟು ಕಟ್ಟಲು...

ಕೇಂದ್ರದಲ್ಲಿ ಹಾಗೂ ಅರುಣಾಚಲ ಪ್ರದೇಶದಲ್ಲಿ- ಎರಡೂ ಕಡೆ ಬಿಜೆಪಿ ಸರ್ಕಾರವಿದೆ. ಡಬಲ್ ಎಂಜಿನ್ ಸರ್ಕಾರವಿದ್ದರೂ, ಅತ್ತ ಚೀನಾದ ಅತಿಕ್ರಮಣಕ್ಕೆ ಖಡಕ್ ಉತ್ತರವನ್ನೂ ನೀಡುತ್ತಿಲ್ಲ, ಇತ್ತ ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿ ಸ್ಥಳೀಯ ಅಸ್ಮಿತೆಯನ್ನು ಗೌರವಿಸುತ್ತಲೂ...

ಬಾಗಲಕೋಟೆ | ಓದುಗರಿಲ್ಲದೆ ಧೂಳು ಹಿಡಿಯುತ್ತಿರುವ ಪುಸ್ತಕಗಳು; ಡಿಜಿಟಲ್...

ಸಾರ್ವಜನಿಕರ ತೆರಿಗೆ ಹಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚ ಮಾಡಿ ನಿರ್ಮಿಸಲಾದ ಆಧುನಿಕ ಡಿಜಿಟಲ್ ಗ್ರಂಥಾಲಯವೊಂದು ಸಾರ್ವಜನಿಕರ ಬಳಕೆಗೆ ಸಿಗದೆ ಮೂಲೆಗುಂಪಾಗಿರುವ ಘಟನೆ ಬಾಗಲಕೋಟೆಯಲ್ಲಿ ಬೆಳಕಿಗೆ ಬಂದಿದೆ. ಓದುಗರ ಹಾಗೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ನೆರವಾಗಬೇಕಿದ್ದ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು;...

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನೀಡಬೇಕೆಂದು ಆಗ್ರಹಿಸಿ ಆರಂಭವಾದ ಹೋರಾಟ...

ಕಾರ್ಯಕ್ರಮದಲ್ಲಿ ಮಾತನಾಡಿದ ಎದ್ದೇಳು ಕರ್ನಾಟಕ ವಲಯ ಸಂಚಾಲಕ ಲಕ್ಷ್ಮಣ ಮಂಡಲಗೇರಾ, ‘ಎಸ್‌ಐಆರ್ ಪ್ರಕ್ರಿಯೆಯನ್ನು ದುರುದ್ದೇಶಪೂರಿತ ರಾಜಕೀಯ ಕ್ರಮ ಎಂದು ಟೀಕಿಸಿದರು. ಚುನಾವಣೆಯಲ್ಲಿ ಪಕ್ಷಗಳ ಗೆಲುವು-ಸೋಲು ಸಾಮಾನ್ಯವಾದರೂ, ಮತದಾನದ ಹಕ್ಕಿನ ಮೇಲೆ ಪರಿಣಾಮ ಬೀರಿದರೆ ಸಾಮಾನ್ಯ ಜನರ ಬದುಕು ಮತ್ತು ಸಂವಿಧಾನಬದ್ಧ ಹಕ್ಕುಗಳಿಗೆ ಧಕ್ಕೆ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು. ಈ ಹಿನ್ನೆಲೆಯಲ್ಲಿ ಜನರ ಹಕ್ಕುಗಳನ್ನು ರಕ್ಷಿಸಲು ರಾಜ್ಯ ಸರ್ಕಾರ ದಿಟ್ಟ ಕ್ರಮಗಳನ್ನು ಕೈಗೊಳ್ಳಬೇಕೆಂದು’ ಆಗ್ರಹಿಸಿದರು.

IMG 20260615 WA1617

‘ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟವರನ್ನು ಸರ್ಕಾರಿ ಸೌಲಭ್ಯಗಳಿಂದಲೂ ವಂಚಿಸುವ ಕುರಿತು ಕೆಲವು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಕೇಳಿಬರುತ್ತಿರುವ ಹೇಳಿಕೆಗಳು ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾಗಿದ್ದು, ದೇಶದ ನಾಗರಿಕರನ್ನು ವಿಭಜಿಸುವ ಪ್ರಯತ್ನವಾಗಿದೆ ಎಂದು ಅವರು ಆರೋಪಿಸಿದರು. ಪ್ರಜಾಪ್ರಭುತ್ವದ ಮೂಲ ಆಶಯಗಳಿಗೆ ಧಕ್ಕೆ ಉಂಟಾಗುತ್ತಿರುವ ಈ ಬೆಳವಣಿಗೆಗಳ ಬಗ್ಗೆ ಸುಪ್ರೀಂ ಕೋರ್ಟ್ ಸಹ ಸೂಕ್ತ ಗಮನ ಹರಿಸಬೇಕೆಂದು’ ಹೇಳಿದರು.

ಕರ್ನಾಟಕ ವಿದ್ಯಾರ್ಥಿ ಸಂಘಟನೆ ಮುಖಂಡ ದುರ್ಗೇಶ್ ಬರಗೂರು ಮಾತನಾಡಿ, ‘ಕರ್ನಾಟಕವು ಸಂತರು, ಶರಣರು ಹಾಗೂ ಸೂಫಿಗಳ ಸಹಬಾಳ್ವೆಯ ಪರಂಪರೆಯನ್ನು ಹೊಂದಿರುವ ನಾಡಾಗಿದೆ. ಧರ್ಮದ ಆಧಾರದಲ್ಲಿ ಸಮಾಜವನ್ನು ವಿಭಜಿಸುವ ಹಾಗೂ ಪ್ರಜಾಪ್ರಭುತ್ವದ ಅಡಿಪಾಯವನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನಗಳನ್ನು ರಾಜ್ಯದ ಜನತೆ ಒಪ್ಪುವುದಿಲ್ಲ ಎಂದರು. ಇದೇ ಉದ್ದೇಶದಿಂದ ವಿವಿಧ ಪ್ರಗತಿಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳು ಸೇರಿ “ಎಸ್‌ಐಆರ್ ವಿರೋಧಿ ಕರ್ನಾಟಕ” ಎಂಬ ವಿಶಾಲ ವೇದಿಕೆಯನ್ನು ನಿರ್ಮಿಸಿವೆ’ ಎಂದು ತಿಳಿಸಿದರು.

ದಸಂಸ ಯುವ ಮುಖಂಡ ಶರಣು ದೋರನಹಳ್ಳಿ ಮಾತನಾಡಿ, ‘ಮತದಾನದ ಹಕ್ಕು ಸಂವಿಧಾನ ನೀಡಿರುವ ಅಮೂಲ್ಯ ಹಕ್ಕಾಗಿದ್ದು, ಅದನ್ನು ಉಳಿಸಿಕೊಳ್ಳಲು ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗಗಳು ಹಾಗೂ ಶೋಷಿತ ಸಮುದಾಯಗಳು ಒಗ್ಗಟ್ಟಾಗಿ ಹೋರಾಟ ನಡೆಸಬೇಕಾಗಿದೆ’ ಎಂದು ಕರೆ ನೀಡಿದರು.

ಕಾರ್ಯಕ್ರಮದ ಸಮಾರೋಪದಲ್ಲಿ ಮಾತನಾಡಿದ ಜೆ.ಎಂ. ವೀರಸಂಗಯ್ಯ, ‘ಜೂನ್ 13ರಿಂದ 18ರವರೆಗೆ ರಾಜ್ಯದ ಐದು ಮಾರ್ಗಗಳಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಅಭಿಯಾನ ನಡೆಯುತ್ತಿದ್ದು, ಇದರ ಸಮಾರೋಪವಾಗಿ ಜೂನ್ 20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ “ಎಸ್‌ಐಆರ್ ವಿರೋಧಿ ಬೃಹತ್ ಪ್ರತಿರೋಧ ಸಮಾವೇಶ” ಆಯೋಜಿಸಲಾಗಿದೆ’ ಎಂದು ತಿಳಿಸಿದರು. ಪ್ರಜಾಪ್ರಭುತ್ವ ಹಾಗೂ ಮತದಾನದ ಹಕ್ಕು ರಕ್ಷಣೆಗಾಗಿ ರಾಜ್ಯದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಅವರು ಮನವಿ ಮಾಡಿದರು.

IMG 20260615 WA1619

ಇದೆ ವೇಳೆ ಶ್ರೀಶೈಲ ಹೊಸಮನಿ, ಸೈಯಾದ್ ಖಾಲಿದ್, ಶಿವಣ್ಣ ಹಿಜೇರಿ, ಎದ್ದೇಳು ಕರ್ನಾಟಕ ಪ್ರತಿನಿಧಿ ಚನ್ನಮ್ಮ ವಿಶ್ವ ನಾಟೇಕರ್ ಮರೆಪ್ಪ ಜಾಲಿಮಂಚಿ ಸ್ವಾಗತಿಸಿದರು, ಕಾರ್ಯಕ್ರಮವನ್ನು ನಿರೂಪಿಸಿದರು.

ಇದನ್ನು ಓದಿದ್ದೀರಾ? ಯಾದಗಿರಿ | ಜೂನ್ 20ರಂದು ಫ್ರೀಡಂ ಪಾರ್ಕ್‌ನಲ್ಲಿ ಎಸ್‌ಐಆರ್ ವಿರೋಧಿ ಬೃಹತ್ ಜನಜಾಗೃತಿ ಸಮಾವೇಶಕ್ಕೆ ಕರೆ

ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಪೂಜಾರಿ, ಶಿವು ಪೋತೆ, ಬಸವರಾಜ ಗುಡಿಮನಿ, ನಿಂಗಪ್ಪ ನಾಟೇಕರ್, ಬಸವರಾಜ ಚಿಪ್ಪರ್, ಅಯ್ಯಪ್ಪ ಗೊಂದೆನೂರ್, ವಿಶ್ವ ಬೀರನೂರ್, ಬಲಭೀಮ ಬೇವಿನಹಳ್ಳಿ, ಶರಣಪ್ಪ ಅನ್ವಾರ್, ಲಕ್ಷ್ಮಣ ಹಳಿಸಾಗರ್, ಸುನೀಲ್ ಗೋಗಿ, ಅಶೋಕ, ಪರಶುರಾಮ ಕಾಂಬಳೆ, ಚಂದ್ರಶೇಖರ ಬೇವಿನಹಳ್ಳಿ, ಸಂತೋಷ ಗೋಗಿ,

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ SIR | ಬದುಕಿದ್ದರೂ ಮತದಾರರ ಪಟ್ಟಿಯಲ್ಲಿ ಅಸ್ತಿತ್ವವೇ ಇಲ್ಲ; ಅರ್ಹರ ಮತದಾನದ ಹಕ್ಕಿಗೆ ಕತ್ತರಿ!

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಅರ್ಹ ನಾಗರಿಕನಿಗೂ ಲಭಿಸಿರುವ ಅತ್ಯಂತ ಮಹತ್ವದ ಹಕ್ಕು...

ಹಾವೇರಿ | ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಮನೆ ಕಬ್ಬು ಬೆಳೆಗಾರರು ಮುತ್ತಿಗೆ

ಕಬ್ಬು ಬೆಳೆಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸಬೇಕೆಂದು ಆಗ್ರಹಿಸಿ ಕಳೆದ...

ಕೊಡಗು ಅಭಿವೃದ್ಧಿ ವಿಚಾರಗಳ ಕುರಿತು ಯುವ ಸಂಸತ್‌ನಲ್ಲಿ ಚರ್ಚೆ

ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಕೃಷಿ ಕ್ಷೇತ್ರಕ್ಕೆ ಎದುರಾಗಿರುವ ಹಿನ್ನಡೆ, ಮಾನವ-ವನ್ಯಜೀವಿ...

ಕಾರ್ಖಾನೆಗಳ ವಿಸ್ತರಣೆಗೆ ವಿರೋಧ: ಕೊಪ್ಪಳ-ಭಾಗ್ಯನಗರ ಬಂದ್‌ಗೆ ಉತ್ತಮ ಸ್ಪಂದನೆ

ತಾಲ್ಲೂಕು ವ್ಯಾಪ್ತಿಯಲ್ಲಿ ಪರಿಸರಕ್ಕೆ ಕಾರ್ಖಾನೆಗಳು ಮಾಲಿನ್ಯ ಉಂಟು ಮಾಡುತ್ತಿರುವ ನಡುವೆಯೇ ಮತ್ತಷ್ಟು...