ಹುಣಸೂರು | ಕೊಟ್ಟಿಗೆ ಕಾವಲು ಹಾಡಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಕಾರ್ಯಕ್ರಮ

Date:

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ನಡೆಯುತ್ತಿರುವ ರಾಜ್ಯವ್ಯಾಪಿ ಜನಜಾಗೃತಿ ಜಾಥಾದ ಅಂಗವಾಗಿ ಮೈಸೂರು ಜಿಲ್ಲೆಯ ಹುಣುಸೂರು ತಾಲ್ಲೂಕಿನ ಕೊಟ್ಟಿಗೆ ಕಾವಲು ಹಾಡಿಯಲ್ಲಿ ಜನರಿಗೆ ಎಸ್‌ಐಆರ್ ಕುರಿತು ಮಾಹಿತಿ ನೀಡಲಾಯಿತು.

- Advertisement -

ಕಾರ್ಯಕ್ರಮದಲ್ಲಿ ಮಾತನಾಡಿದ ಡೀಡ್ ಸಂಸ್ಥೆಯ ನಿರ್ದೇಶಕ ಶ್ರೀಕಾಂತ್, “ಭಾರತದ ಸಂವಿಧಾನವು ‘ವಿ ದ ಪೀಪಲ್ ಆಫ್ ಇಂಡಿಯಾ’ ಎಂಬ ತತ್ವದ ಮೇಲೆ ನಿರ್ಮಾಣವಾಗಿದೆ. ಆದಿವಾಸಿಗಳು, ದಲಿತರು ಹಾಗೂ ದಮನಿತ ಸಮುದಾಯಗಳ ಮತದಾನದ ಹಕ್ಕಿಗೆ ಧಕ್ಕೆಯಾಗುವ ಯಾವುದೇ ಕ್ರಮವನ್ನು ನಾವು ಒಪ್ಪುವುದಿಲ್ಲ. ಎಸ್‌ಐಆರ್ ಪ್ರಕ್ರಿಯೆ ಮೂಲಕ ಜನರ ಪ್ರಜಾಸತ್ತಾತ್ಮಕ ಹಕ್ಕುಗಳಿಗೆ ಅನ್ಯಾಯವಾಗುವ ಸಾಧ್ಯತೆ ಇರುವುದರಿಂದ ಅದನ್ನು ನಾವು ತೀವ್ರವಾಗಿ ವಿರೋಧಿಸುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಜಾಗೃತಿ ಕಾರ್ಯಕ್ರಮದಲ್ಲಿ ಎಸ್‌ಐಆರ್‌ನ ಪರಿಣಾಮಗಳು, ಮತದಾರರ ಹಕ್ಕುಗಳ ಮಹತ್ವ ಹಾಗೂ ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ನಾಗರಿಕರ ಪಾತ್ರ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಈ ಸುದ್ದಿ ಓದಿದ್ದೀರಾ?ಎಸ್‌ಐಆರ್ ವಿರೋಧಿಸಿ ಹುಣಸೂರಿನಲ್ಲಿ ಜನಜಾಗೃತಿ ಜಾಥಾ: ಮತದಾನದ ಹಕ್ಕು ಕಸಿಯುವ ಪ್ರಯತ್ನ ಎಂದು ಆಕ್ರೋಶ

ಕಾರ್ಯಕ್ರಮದಲ್ಲಿ ಡೀಡ್ ಸಂಸ್ಥೆಯ ಶ್ರೀಕಾಂತ್, ಜಿವಿಕ ಉಮೇಶ್, ಶಿವಕುಮಾರ್, ಜನಶಕ್ತಿಯ ಹೇಮಂತ್ ಕುಮಾರ್, ಕೆವಿಎಸ್‌ನ ಯಮನೂರಪ್ಪ, ಸವಿತಾ ಪಿ.ಬಿ. ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...