ಚಿಕ್ಕಬಳ್ಳಾಪುರ ಜಿಲ್ಲೆಯ ನೂತನ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಆ್ಯಂಟನಿ ಜಾನ್ ಜೆ.ಕೆ ಗುರುವಾರ ಅಧಿಕಾರ ಸ್ವೀಕರಿಸಿದರು.
ಜಿಲ್ಲೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ನಿರ್ಲಕ್ಷ್ಯ ಮಾಡುತ್ತಿದ್ದಲ್ಲಿ ಮತ್ತು ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಅಕ್ರಮಗಳನ್ನು ನಡೆಸಿ ಹಣ ದುರುಪಯೋಗಪಡಿಸಿದ್ದಲ್ಲಿ ಆ ಬಗ್ಗೆ ನಿರ್ದಿಷ್ಟ ಮಾಹಿತಿಯೊಂದಿಗೆ ಚಿಕ್ಕಬಳ್ಳಾಪುರ ಲೋಕಾಯುಕ್ತ ಕಚೇರಿಗೆ ಖುದ್ದಾಗಿ ಹಾಜರಾಗಿ ದೂರು ಅರ್ಜಿ ಹಾಗೂ ಸಂಬಂಧಪಟ್ಟ ದಾಖಲೆಗಳನ್ನು ನೀಡಬಹುದು.
ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ʼರೈತ ಸಮೃದ್ಧಿ ಯೋಜನೆʼ ಸದುಪಯೋಗಪಡಿಸಿಕೊಳ್ಳಿ : ಕೃಷಿ ಸಚಿವ ಚಲುವರಾಯಸ್ವಾಮಿ
ಸಾರ್ವಜನಿಕರು ಯಾವುದೇ ದೂರು ನೀಡಲು ಚಿಕ್ಕಬಳ್ಳಾಪುರ ಜಿಲ್ಲೆಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ದೂರವಾಣಿ ಸಂಖ್ಯೆ: 9364062514 ಗೆ ಸಂಪರ್ಕಿಸಬಹುದೆಂದು ನೂತನ ಲೋಕಾಯುಕ್ತ ಎಸ್ಪಿ ಆ್ಯಂಟನಿ ಜಾನ್ ಜೆ.ಕೆ ತಿಳಿಸಿದ್ದಾರೆ.