ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅನುಭವ ಮಂಟಪದ ಬೃಹತ್ ತೈಲವರ್ಣ ಚಿತ್ರ ಅನಾವರಣಗೊಂಡಿರುವುದು ಹರ್ಷ ತರಿಸಿದೆ ಎಂದು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು
ತಿಳಿಸಿದ್ದಾರೆ.
12ನೆಯ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ವರ್ಣರಹಿತ, ಜಾತಿರಹಿತ ಸಮಾಜ ಕಟ್ಟ ಬಯಸಿದರು. ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರು ಕಟ್ಟಿದ ಅನುಭವ ಮಂಟಪದಲ್ಲಿ ಎಲ್ಲ ವರ್ಗದ ಶರಣರಿಗೆ ಸಮಾನ ಅವಕಾಶ ಕಲ್ಪಿಸಿದರು. ಆ ಅನುಭವ ಮಂಟಪ ಈಗ ಮೊದಲ ಸಂಸತ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆʼ ಎಂದರು.

‘ಬಸವಾದಿ ಶರಣರ ಕೊಡುಗೆಯನ್ನು ಸ್ಮರಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಸುವರ್ಣ ವಿಧಾನಸೌಧದಲ್ಲಿ ಅನುಭವ ಮಂಟಪದ ಬೃಹತ್ ಚಿತ್ರ ಅನಾವರಣ ಮಾಡಿರುವುದು ಅತ್ಯಂತ ಖುಷಿ ತಂದು ಕೊಟ್ಟಿದೆ. ಸಿಎಂ ಸಿದ್ದರಾಮಯ್ಯ ಸೇರಿ ಸಚಿವ ಸಂಪುಟದ ಸಚಿವರು ಹಾಗೂ ಎಲ್ಲ ಶಾಸಕರಿಗೂ ಅಭಿನಂದಿಸುವುದಾಗಿ ಪಟ್ಟದ್ದೇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.