ಮಂಗಳೂರಿನಲ್ಲಿ ಯುವಕನ ಕೊಲೆ, ದ್ವೇಷ ಭಾಷಣವೇ ಕೊಲೆಗೆ ಮುಖ್ಯ ಕಾರಣ – ಎಪಿಸಿಆರ್ ಖಂಡನೆ

Date:

Advertisements

ಮಂಗಳೂರಿನ ಬಂಟ್ವಾಳದಲ್ಲಿ ಇಬ್ಬರು ಯುವಕರ ಮೇಲೆ ನಡೆದ ಭೀಕರ ಹಲ್ಲೆಯಿಂದಾಗಿ ಒಬ್ಬನು ಮೃತನಾಗಿದ್ದು ಇನ್ನೊಬ್ಬ ಯುವಕ ತೀವ್ರವಾಗಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಕೋಮು ದ್ವೇಷದ ರಾಜಕಾರಣಕ್ಕೆ ಯುವಕರು ಬಲಿಯಾಗುತ್ತಿರುವುದಕ್ಕೆ ಇದು ಮತ್ತೊಂದು ನಿದರ್ಶನವಾಗಿದೆ.‌ APCR – ಕರ್ನಾಟಕವು ಈ ದ್ವೇಷದ ಕೊಲೆಯನ್ನು ಖಂಡಿಸುತ್ತದೆ. ಈ ಹೇಯ ಕೃತ್ಯ ನಡೆಸಿರುವ ಅಪರಾಧಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಅಸೋಸಿಯೇಶನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಕರ್ನಾಟಕ ರಾಜ್ಯ ಕಾರ್ಯದರ್ಶಿ ಹುಸೇನ್ ಕೋಡಿಬೆಂಗ್ರೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಇಲ್ಲಿ ಹೀಗೆ ಕೋಮು ದ್ವೇಷ ಪ್ರೇರಿತ ಕೊಲೆ ಹಲ್ಲೆಗಳು ಪುನರಾವರ್ತನೆಯಾಗುತ್ತಿರುವುದಕ್ಕೆ ಪ್ರಮುಖ ಕಾರಣ ಯುವಕರಲ್ಲಿ ಕೋಮು ದ್ವೇಷವನ್ನು ಪ್ರೇರೇಪಿಸುತ್ತಿರುವ ದ್ವೇಷ ಭಾಷಣಕಾರರು. ತಮ್ಮ ದ್ವೇಷ ಭಾಷಣಗಳಿಂದ ಯುವಕರನ್ನು ತಪ್ಪುದಾರಿಗೆ ತಳ್ಳುತ್ತಿರುವ ದ್ವೇಷ ಭಾಷಣಕಾರರನ್ನು ಪೊಲೀಸರು ಗುರುತಿಸಿ ತಕ್ಷಣ ಬಂಧಿಸಬೇಕು. ಇಂತಹ ಕೃತ್ಯ ಪುನಾರವರ್ತಿಸದಂತೆ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಂತಹ ಘಟನೆಗಳು ಮತ್ತೆ ಮತ್ತೆ ಮರುಕಳಿಸುತ್ತಿದ್ದರೂ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸುತ್ತಿಲ್ಲ ಎಂಬುದು ಖೇದಕರ. ಈ ಹಿಂದೆ ನಡೆದ ಮಾಬ್ ಲಿಂಚಿಂಗ್ ಪ್ರಕರಣದಲ್ಲಿ ಪ್ರಮುಖ ಆರೋಪಿಗಳ ಮೇಲೆ ಕಾನೂನು ಕ್ರಮ ಜರುಗಿಸದೇ ಇರುವುದು ಸಹ ಈ ಕ್ರಿಮಿನಲ್ ಕೆಲಸಗಳಿಗೆ ಕುಮ್ಮಕ್ಕು ನೀಡಿದಂತಾಗಿದೆ. ಗೃಹ ಸಚಿವರು ಮತ್ತು ಮಾನ್ಯ ಮುಖ್ಯಮಂತ್ರಿಗಳು ಈ ಬಗ್ಗೆ ವಿಶೇಷ ಕಾಳಜಿ ವಹಿಸಿ ಅಮಾಯಕ ಯುವಕರ ಕುಟುಂಬಕ್ಕೆ ನ್ಯಾಯ ಸಿಗುವಂತೆ ಮಾಡಬೇಕು. ಇಂತಹ ಪ್ರಕರಣಗಳಲ್ಲಿ ತಪಿತ್ತಸ್ಥರನ್ನು ಪತ್ತೆ ಹಚ್ಚಲು ವಿಶೇಷ ತಂಡ ರಚಿಸಬೇಕು ಎಂದು ಹೇಳಿದ್ದಾರೆ.

ಈ ಹಿಂದೆ ಕುಡುಪುವಿನಲ್ಲಿ ಮಾಡಿದಂತೆ ಬೇಜವಾಬ್ದಾರಿಯಾಗಿ ವರ್ತಿಸಿದ ಜಿಲ್ಲಾ ಪೋಲಿಸ್ ಕಮಿಷನರ್ ಅವರು ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಲು ಸಂಪೂರ್ಣವಾಗಿ ವಿಫಲರಾಗಿರುವುದ ಈ ಹತ್ಯೆ ನಡೆಯಲು ಕಾರಣವಾಗಿದೆ. ಆದ್ದರಿಂದ ಪೋಲಿಸ್ ಆಯುಕ್ತನ್ನು ತಕ್ಷಣ ಬದಲಿಸಿ ಬೇರೆಯವರನ್ನು ನೇಮಿಸಬೇಕು. ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆ ನಡೆಸಲು ವಿಶೇಷ ತಂಡ ಹಾಗೂ ತನಿಖಾಧಿಕಾರಿಯನ್ನು ನೇಮಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ( ಎಪಿಸಿಆರ್),ಕರ್ನಾಟಕ ರಾಜ್ಯ ಘಟಕ ಆಗ್ರಹಿಸುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X