ಸೋಲೂರು ಹೋಬಳಿಯನ್ನು ಮಾಗಡಿಯಲ್ಲೇ ಉಳಿಸಿಕೊಳ್ಳಲು ಮನವಿ

Date:

ಸೋಲೂರು ಹೋಬಳಿಯನ್ನು ಮಾಗಡಿ ತಾಲೂಕಿನಲ್ಲಿಯೇ ಉಳಿಸಿಕೊಳ್ಳಲು ಆರಂಭದಲ್ಲಿಯೇ ನಾನು ಧ್ವನಿ ಎತ್ತಿದ್ದು, ಅದಕ್ಕೆ ಯಾರಿಂದಲೂ ಸೂಕ್ತ ಸ್ಪಂದನೆ ಸಿಗಲಿಲ್ಲ. ಈಗ ಸೋಲೂರು ಬೇಕು ಅಂತ ಪ್ರತಿಭಟನೆ ಮಾಡಿ ಏನು ಪ್ರಯೋಜನ? ರೈಲು ಹೋದ ಮೇಲೆ ಟಿಕೆಟ್ ಕೊಂಡಂತೆ ಆಗಿದೆ ನಿಮ್ಮ ಸ್ಥಿತಿ ಎಂದು ಶಾಸಕ ಎಚ್‌ ಸಿ ಬಾಲಕೃಷ್ಣ ಅಸಹಾಯಕತೆ ವ್ಯಕ್ತಪಡಿಸಿದರು.

- Advertisement -

ಮಾಗಡಿ ತಾಲೂಕು ಕಚೇರಿಯಲ್ಲಿ ಸೋಮವಾರ ನಡೆದ ಜನಸಂಪರ್ಕ ಸಭೆಯಲ್ಲಿ ಮನವಿ ಸ್ವೀಕರಿಸಿ ಮಾತನಾಡಿದ ಅವರು, “ಸೋಲೂರು ಹೋಬಳಿ ಉಳಿಸಿಕೊಳ್ಳಲು ಎತ್ತಿದ ಧ್ವನಿಗೆ ಜನರಿಂದ ಸೂಕ್ತ ಸ್ಪಂದನೆ ಸಿಗಲಿಲ್ಲ” ಎಂದು ಅಸಮಾಧಾನ ಹೊರ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

“ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಕಂಡು ಸೋಲೂರನ್ನು ಮಾಗಡಿ ತಾಲೂಕಿನಲ್ಲಿಯೇ ಉಳಿಸಿಕೊಡುವಂತೆ ಮನವಿ ಮಾಡಿದ್ದೆ. ಜನರು ಬೆಂಬಲಿಸಲಿಲ್ಲ. ಬದಲಾಗಿ ಅಸಹಕಾರ ತೋರಿದರು. ಈ ವಿಚಾರದಲ್ಲಿ ತಲೆ ಹಾಕದಂತೆ ಕೆಲವರು ನೇರವಾಗಿ ಹೇಳಿದರು. ಹಾಗಾಗಿ ನಾನೂ ತಟಸ್ಥನಾದೆ” ಎಂದು ಹೇಳಿದರು.

“ಕೇವಲ ಮಾಗಡಿ ಜನ ಹೋರಾಟ ಮಾಡಿದರೆ ಪ್ರಯೋಜನವಾಗುವುದಿಲ್ಲ. ಸೋಲೂರು ಭಾಗದ ಜನರೂ ಒಗ್ಗಟ್ಟಿನಿಂದ ಪ್ರತಿಭಟನೆ ಮಾಡಬೇಕು. ಆಗ ಮಾತ್ರ ಸೋಲೂರು ಹೋಬಳಿಯನ್ನು ಮಾಗಡಿಯಲ್ಲೇ ಉಳಿಸಿಕೊಳ್ಳಲು ಸರ್ಕಾರದ ಮೇಲೆ ಒತ್ತಡ ಹಾಕಬಹುದು” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ನವೆಂಬರ್ ತಿಂಗಳ ಮೊದಲ ಭಾನುವಾರ ಸೋಲೂರು ಪ್ರವಾಸಿ ಮಂದಿರದಲ್ಲಿ ಸೋಲೂರು ಹೋಬಳಿಯ ಕನಿಷ್ಟ ಐದು ಸಾವಿರ ಜನರನ್ನು ಸೇರಿಸಿ ಪ್ರತಿಭಟನೆ ಸಭೆ ಆಯೋಜಿಸಿ. ಅಲ್ಲಿ ಜನಗಳ ತೀರ್ಮಾನ ನೋಡಿ ಸರ್ಕಾರದ ಮೇಲೆ ಒತ್ತಡ ಹಾಕುವ ಕೆಲಸ ಮಾಡೋಣ” ಎಂದು ಬಾಲಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಸಾಮಾಜಿಕ, ಶೈಕ್ಷಣಿಕ ಮರು ಸಮೀಕ್ಷೆ: ಗಣತಿದಾರರ ವಿರೋಧ

“ಸೋಲೂರು ಹೋಬಳಿಯನ್ನು ಮಾಗಡಿ ತಾಲೂಕಿನಲ್ಲೇ ಉಳಿಸುವಂತೆ ಆಕ್ಷೇಪಣೆ ಪತ್ರಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಶಾಸಕರು ಸರ್ಕಾರದ ಮೇಲೆ ಒತ್ತಡ ತಂದು ಸೋಲೂರು ಹೋಬಳಿಯನ್ನು ಮಾಗಡಿಯಲ್ಲೇ ಉಳಿಸುವ ಕೆಲಸ ಮಾಡಬೇಕು. ಇಲ್ಲವಾದರೆ ರೈತರು ಪ್ರತಿ ಕೆಲಸಕ್ಕೂ ದೊಡ್ಡಬಳ್ಳಾಪುರಕ್ಕೆ ತೆರಳುವ ಅನಿವಾರ್ಯತೆ ನಿರ್ಮಾಣವಾಗಲಿದೆ. ನಾವು ದೊಡ್ಡ ಮಟ್ಟದಲ್ಲಿ ಹೋರಾಟ ಮಾಡುತ್ತೇವೆ. ನಮ್ಮ ಜತೆಗೆ ನೀವೂ ನಿಲ್ಲಬೇಕು” ಎಂದು ಪ್ರಗತಿಪರ ರೈತ ಕನ್ನಡ ಕುಮಾರ್ ಮನವಿ ಮಾಡಿದರು.

ಸೋಲೂರು ಹೋಬಳಿಯನ್ನು ಮಾಗಡಿ ತಾಲೂಕಿನಲ್ಲೇ ಉಳಿಸುವಂತೆ ನೂರಾರು ರೈತರು, ಸಾರ್ವಜನಿಕರು, ಶಾಸಕ ಹಾಗೂ ತಹಶೀಲ್ದಾರ್‌ ಶರತ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...