ಉಡುಪಿ | ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

Date:

  • ವಾಹನಗಳಿಗೆ ಪ್ರೆಸ್‌ ಸ್ಟಿಕ್ಕರ್‌ ಅಂಟಿಸಿಕೊಂಡು ಅಕ್ರಮ ಚಟುವಟಿಕೆ
  • ಹಣ ವಸೂಲಿ, ಬೆದರಿಕೆ ಕಾರ್ಯಗಳಲ್ಲಿ ತೊಡಗಿರುವ ನಕಲಿ ಪತ್ರಕರ್ತರು

ಕೆಲವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಒತ್ತಾಯಿಸಿದೆ.

ಪತ್ರಕರ್ತರ ಸಂಘದ ನಿಯೋಗವು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೇ ಮಚ್ಚೀಂದ್ರ ಅವರನ್ನು ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿದೆ. “ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುಮಾರು 170 ಮಂದಿ ಸದಸ್ಯರು ಪ್ರಾಮಾಣಿಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಇತ್ತೀಚೆಗೆ ಜಿಲ್ಲೆಯಲ್ಲಿ ಕೆಲವು ವ್ಯಕ್ತಿಗಳು ಪತ್ರಕರ್ತರ ಸಂಘ ಮತ್ತು ಪತ್ರಕರ್ತರ ಹೆಸರು ಹೇಳಿ ಹಣ ಸಂಗ್ರಹಿಸುವ, ವಸೂಲಿ ಮಾಡುವ ಹಾಗೂ ಬೆದರಿಸುವ ಕೆಲಸದಲ್ಲಿ ತೊಡಗಿದ್ದಾರೆ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

“ಯಾವುದೇ ಪತ್ರಿಕೆ ಹಾಗೂ ಟಿವಿಯಲ್ಲಿ ಸುದ್ದಿ ಪ್ರಕಟಿಸಲು ಅಥವಾ ಪ್ರಸಾರ ಮಾಡಲು ಹಣ ನೀಡಬೇಕಾದ ಅಗತ್ಯ ಇರುವುದಿಲ್ಲ. ಆದರೂ, ಕೆಲವು ನಕಲಿ ಪತ್ರಕರ್ತರು ಸುದ್ದಿಯ ಹೆಸರಿನಲ್ಲಿ ಹಣ ವಸೂಲಿ ಮಾಡುವ ದಂಧೆಗೆ ಇಳಿದಿರುವ ಬಗ್ಗೆ ಸಂಘಕ್ಕೆ ದೂರುಗಳು ಬಂದಿವೆ. ಈ ರೀತಿ ಪತ್ರಕರ್ತರ ಹೆಸರಿನಲ್ಲಿ ಹಣ ವಸೂಲಿಗೆ ಇಳಿಯುವ ನಕಲಿ ಪತ್ರಕರ್ತರಿಗೆ ಕಡಿವಾಣ ಹಾಕಬೇಕು” ಎಂದು ಆಗ್ರಹಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚುನಾವಣೆ ಹಿನ್ನೆಲೆ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ ತಪಾಸಣೆ ಕಾರ್ಯದಲ್ಲಿ ತೊಡಗಿದ್ದು, ಈ ಹಿನ್ನೆಲೆ ಕೆಲವು ವ್ಯಕ್ತಿಗಳು ತಮ್ಮ ವಾಹನಗಳಿಗೆ ಮಿಡಿಯಾ, ಪ್ರೆಸ್ ಸ್ಟಿಕ್ಕರ್ ಹಾಕಿಕೊಂಡು ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಈ ರೀತಿಯ ವಾಹನಗಳನ್ನು ಚೆಕ್‌ಪೋಸ್ಟ್‌ಗಳಲ್ಲಿ ಅಗತ್ಯ ತಪಾಸಣೆ ಮಾಡಬೇಕು ಮತ್ತು ಅದರಲ್ಲಿ ಯಾವುದೇ ಅಕ್ರಮ ಚಟುವಟಿಕೆ ಕಂಡುಬಂದರೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಪತ್ರಕರ್ತರ ಸಂಘದಿಂದ ಎಲ್ಲ ಸದಸ್ಯರಿಗೂ ಗುರುತಿನ ಚೀಟಿ ಮತ್ತು ವಾಹನಗಳಿಗೆ ಅಧಿಕೃತ ಮಿಡಿಯಾ ಸ್ಟಿಕ್ಕರ್ ನೀಡಲಾಗಿದೆ. ಪತ್ರಕರ್ತರ ಹೆಸರಿನಲ್ಲಿ ಯಾರೇ ಹಣ ವಸೂಲಿಗೆ ಬಂದರೆ ಅಂತವರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಗಳಿಗೆ ದೂರು ನೀಡಬೇಕು ಮತ್ತು ನಮ್ಮ ಸಂಘದ ಗಮನಕ್ಕೂ ತರಬೇಕು” ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಎಡಿಸಿ ನಕಲಿ ಸಹಿ ಬಳಸಿ ₹1 ಕೋಟಿಗೂ ಅಧಿಕ ಹಣ ಲೂಟಿ; ‘ಡಿ ಗ್ರೂಪ್‌’ ನೌಕರನ ವಿರುದ್ಧ ಆರೋಪ

ನಿಯೋಗದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಜಂಟಿ ಕಾರ್ಯದರ್ಶಿಗಳಾದ ರಹೀಂ ಉಜಿರೆ, ಪ್ರಮೋದ್ ಸುವರ್ಣ, ಕಾಪು ತಾಲೂಕು ಪ್ರಧಾನ ಕಾರ್ಯದರ್ಶಿ ಪುಂಡಲೀಕ ಮರಾಠೆ, ಜಿಲ್ಲಾ ಸಮಿತಿ ಸದಸ್ಯರಾದ ಮೈಕಲ್ ರೋಡಿಗ್ರಸ್, ಹರೀಶ್ ಬಲಾಯಿಪಾದೆ, ಸಂಘದ ಸದಸ್ಯರಾದ ಶಶಿಧರ ಮಾಸ್ತಿಬೈಲು, ದೀಪಕ್ ಜೈನ್, ದಿನೇಶ್ ಎಂ ಎಚ್, ಚೇತನ್ ಮಟಪಾಡಿ, ಅಶ್ವತ್ ಆಚಾರ್ಯ, ಜಸ್ಟಿನ್ ಡಿಸಿಲ್ವ, ಗೋಪಾಲಕೃಷ್ಣ ಪಾದೂರು, ರಕ್ಷಿತ್ ಬೆಳಪು, ನಾಗರಾಜ ರಾವ್, ಎಚ್ ಬಾಲಚಂದ್ರ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹಾಡಹಗಲೇ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರ ಬರ್ಬರ ಹತ್ಯೆ

ರಾಜ್ಯ ರಾಜಧಾನಿ ಬೆಂಗಳೂರಿನ ಸಾರಕ್ಕಿ ಮಾರ್ಕೆಟ್ ಬಳಿಯ ಪಾರ್ಕ್‌ನಲ್ಲಿ ಕುಳಿತಿದ್ದ ಇಬ್ಬರನ್ನು...

ಹುಬ್ಬಳ್ಳಿ | ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲೇ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ

ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಕ್ಯಾಂಪಸ್‌ನೊಳಗೆ ನುಗ್ಗಿ ವಿದ್ಯಾರ್ಥಿನಿಯೋರ್ವಳಿಗೆ ಯುವಕನೋರ್ವ ಮನಬಂದಂತೆ ಚಾಕುವಿನಿಂದ...

ದಾವಣಗೆರೆ | ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸೌಭಾಗ್ಯ ಬೀಳಗಿಮಠ 101ನೇ ರ್‍ಯಾಂಕ್‌; ಜಿಲ್ಲಾಧಿಕಾರಿಯಿಂದ ಸನ್ಮಾನ

ದ್ವಿತೀಯ ಪಿಯುಸಿ ವರೆಗೆ ದಾವಣಗೆರೆಯಲ್ಲಿ ವ್ಯಾಸಂಗ ಮಾಡಿ ಬಿಎಸ್ಸಿ ಕೃಷಿಯೊಂದಿಗೆ ಯುಪಿಎಸ್‌ಸಿ...