ಉಡುಪಿ | ನಕಲಿ ಪತ್ರಕರ್ತರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

Date:

  • ವಾಹನಗಳಿಗೆ ಪ್ರೆಸ್‌ ಸ್ಟಿಕ್ಕರ್‌ ಅಂಟಿಸಿಕೊಂಡು ಅಕ್ರಮ ಚಟುವಟಿಕೆ
  • ಹಣ ವಸೂಲಿ, ಬೆದರಿಕೆ ಕಾರ್ಯಗಳಲ್ಲಿ ತೊಡಗಿರುವ ನಕಲಿ ಪತ್ರಕರ್ತರು

ಕೆಲವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಒತ್ತಾಯಿಸಿದೆ.

- Advertisement -

ಪತ್ರಕರ್ತರ ಸಂಘದ ನಿಯೋಗವು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೇ ಮಚ್ಚೀಂದ್ರ ಅವರನ್ನು ಭೇಟಿ ಮಾಡಿ, ಮನವಿ ಪತ್ರ ಸಲ್ಲಿಸಿದೆ. “ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುಮಾರು 170 ಮಂದಿ ಸದಸ್ಯರು ಪ್ರಾಮಾಣಿಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ, ಇತ್ತೀಚೆಗೆ ಜಿಲ್ಲೆಯಲ್ಲಿ ಕೆಲವು ವ್ಯಕ್ತಿಗಳು ಪತ್ರಕರ್ತರ ಸಂಘ ಮತ್ತು ಪತ್ರಕರ್ತರ ಹೆಸರು ಹೇಳಿ ಹಣ ಸಂಗ್ರಹಿಸುವ, ವಸೂಲಿ ಮಾಡುವ ಹಾಗೂ ಬೆದರಿಸುವ ಕೆಲಸದಲ್ಲಿ ತೊಡಗಿದ್ದಾರೆ. ಅಂತಹವರ ವಿರುದ್ಧ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

“ಯಾವುದೇ ಪತ್ರಿಕೆ ಹಾಗೂ ಟಿವಿಯಲ್ಲಿ ಸುದ್ದಿ ಪ್ರಕಟಿಸಲು ಅಥವಾ ಪ್ರಸಾರ ಮಾಡಲು ಹಣ ನೀಡಬೇಕಾದ ಅಗತ್ಯ ಇರುವುದಿಲ್ಲ. ಆದರೂ, ಕೆಲವು ನಕಲಿ ಪತ್ರಕರ್ತರು ಸುದ್ದಿಯ ಹೆಸರಿನಲ್ಲಿ ಹಣ ವಸೂಲಿ ಮಾಡುವ ದಂಧೆಗೆ ಇಳಿದಿರುವ ಬಗ್ಗೆ ಸಂಘಕ್ಕೆ ದೂರುಗಳು ಬಂದಿವೆ. ಈ ರೀತಿ ಪತ್ರಕರ್ತರ ಹೆಸರಿನಲ್ಲಿ ಹಣ ವಸೂಲಿಗೆ ಇಳಿಯುವ ನಕಲಿ ಪತ್ರಕರ್ತರಿಗೆ ಕಡಿವಾಣ ಹಾಕಬೇಕು” ಎಂದು ಆಗ್ರಹಿಸಿದ್ದಾರೆ.

“ಚುನಾವಣೆ ಹಿನ್ನೆಲೆ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ ತಪಾಸಣೆ ಕಾರ್ಯದಲ್ಲಿ ತೊಡಗಿದ್ದು, ಈ ಹಿನ್ನೆಲೆ ಕೆಲವು ವ್ಯಕ್ತಿಗಳು ತಮ್ಮ ವಾಹನಗಳಿಗೆ ಮಿಡಿಯಾ, ಪ್ರೆಸ್ ಸ್ಟಿಕ್ಕರ್ ಹಾಕಿಕೊಂಡು ಅಕ್ರಮ ಚಟುವಟಿಕೆಗಳನ್ನು ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಈ ರೀತಿಯ ವಾಹನಗಳನ್ನು ಚೆಕ್‌ಪೋಸ್ಟ್‌ಗಳಲ್ಲಿ ಅಗತ್ಯ ತಪಾಸಣೆ ಮಾಡಬೇಕು ಮತ್ತು ಅದರಲ್ಲಿ ಯಾವುದೇ ಅಕ್ರಮ ಚಟುವಟಿಕೆ ಕಂಡುಬಂದರೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಪತ್ರಕರ್ತರ ಸಂಘದಿಂದ ಎಲ್ಲ ಸದಸ್ಯರಿಗೂ ಗುರುತಿನ ಚೀಟಿ ಮತ್ತು ವಾಹನಗಳಿಗೆ ಅಧಿಕೃತ ಮಿಡಿಯಾ ಸ್ಟಿಕ್ಕರ್ ನೀಡಲಾಗಿದೆ. ಪತ್ರಕರ್ತರ ಹೆಸರಿನಲ್ಲಿ ಯಾರೇ ಹಣ ವಸೂಲಿಗೆ ಬಂದರೆ ಅಂತವರ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಗಳಿಗೆ ದೂರು ನೀಡಬೇಕು ಮತ್ತು ನಮ್ಮ ಸಂಘದ ಗಮನಕ್ಕೂ ತರಬೇಕು” ಎಂದು ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಎಡಿಸಿ ನಕಲಿ ಸಹಿ ಬಳಸಿ ₹1 ಕೋಟಿಗೂ ಅಧಿಕ ಹಣ ಲೂಟಿ; ‘ಡಿ ಗ್ರೂಪ್‌’ ನೌಕರನ ವಿರುದ್ಧ ಆರೋಪ

ನಿಯೋಗದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಜಂಟಿ ಕಾರ್ಯದರ್ಶಿಗಳಾದ ರಹೀಂ ಉಜಿರೆ, ಪ್ರಮೋದ್ ಸುವರ್ಣ, ಕಾಪು ತಾಲೂಕು ಪ್ರಧಾನ ಕಾರ್ಯದರ್ಶಿ ಪುಂಡಲೀಕ ಮರಾಠೆ, ಜಿಲ್ಲಾ ಸಮಿತಿ ಸದಸ್ಯರಾದ ಮೈಕಲ್ ರೋಡಿಗ್ರಸ್, ಹರೀಶ್ ಬಲಾಯಿಪಾದೆ, ಸಂಘದ ಸದಸ್ಯರಾದ ಶಶಿಧರ ಮಾಸ್ತಿಬೈಲು, ದೀಪಕ್ ಜೈನ್, ದಿನೇಶ್ ಎಂ ಎಚ್, ಚೇತನ್ ಮಟಪಾಡಿ, ಅಶ್ವತ್ ಆಚಾರ್ಯ, ಜಸ್ಟಿನ್ ಡಿಸಿಲ್ವ, ಗೋಪಾಲಕೃಷ್ಣ ಪಾದೂರು, ರಕ್ಷಿತ್ ಬೆಳಪು, ನಾಗರಾಜ ರಾವ್, ಎಚ್ ಬಾಲಚಂದ್ರ ಹಾಗೂ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...