12ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಬೆಂಬಲಕ್ಕೆ ಮನವಿ

Date:

ಬಾಗೇಪಲ್ಲಿ:-ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕರಾಳ ಕಾರ್ಮಿಕ ಸಂಹಿತೆಗಳು ಸೇರಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನವಿರೋಧಿ ನೀತಿಗಳನ್ನು ವಿರೋಧಿಸಿ ಫೆಬ್ರವರಿ 12 ರಂದು ವಿವಿಧ ಸಂಘಟನೆಗಳಿಂದ ನಡೆಯಲಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಯಶಸ್ವಿಗೊಳಿಸುವಂತೆ ಬಾಗೇಪಲ್ಲಿ ತಾಲ್ಲೂಕು ಕಾರ್ಮಿಕ ಸಂಘಗಳ ಸಮಿತಿ ಮುಖಂಡ ಎಂ.ಪಿ.ಮುನಿ ವೆಂಕಟಪ್ಪ ತಿಳಿಸಿದರು.

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಗುರುವಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ ತಾಲ್ಲೂಕು ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಹಾಗೂ ಸಂಯುಕ್ತ ಕರ್ನಾಟಕ ಹೋರಾಟ ಹಾಗೂ ಬಾಗೇಪಲ್ಲಿ ತಾಲ್ಲೂಕು ಜನಪರ ಚಳವಳಿಗಳ ಒಕ್ಕೂಟ ಜಂಟಿಯಾಗಿ ಕರೆ ನೀಡುತ್ತಿದ್ದೇವೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಹಕ್ಕುಗಳ ಮೇಲೆ ನೇರ ದಾಳಿ ಆಗಿದ್ದು, ಇದು ಕೇವಲ ಆರ್ಥಿಕವಲ್ಲ ರಾಜಕೀಯ ದಾಳಿಯೂ ಆಗಿದೆ ಎಂದು ಎಂದು ಹೇಳಿದರು.

- Advertisement -

29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಸಂಹಿತೆಗಳ ಮೂಲಕ ಯೂನಿಯನ್‌ ರಹಿತ ವಾತಾವರಣ ನಿರ್ಮಿಸಲು ಯತ್ನಿಸಲಾಗುತ್ತಿದೆ. ಇದರ ಪರಿಣಾಮವಾಗಿ ಶೇ. 90 ರಷ್ಟು ಕಾರ್ಮಿಕರು ವೇತನ, ಇಎಸ್‌ಐ, ಪಿಎಫ್, ಗ್ರಾಚ್ಯುಟಿ, ಬೋನಸ್ ಸೇರಿದಂತೆ ಮೂಲಭೂತ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ ಎಂದರು.

ಜೀವನೋಪಾಯ ವೇತನದ ಭರವಸೆ ನೀಡದೇ ಕನಿಷ್ಠ ವೇತನದ ಬದಲಿಗೆ ತಳಮಟ್ಟದ ಕೂಲಿಯನ್ನು ನಿಗದಿಪಡಿಸಲಾಗಿದ್ದು, ಎಲ್ಲಾ ವಲಯಗಳಲ್ಲಿ ವೇತನ ಹೆಚ್ಚಳಕ್ಕೆ ಅಡೆತಡೆ ನಿರ್ಮಿಸಲಾಗಿದೆ. ಮಾಲೀಕರ ಲಾಭಾಂಶ ಹೆಚ್ಚಿದರೂ ಕಾರ್ಮಿಕರ ವೇತನದ ಪಾಲು ಗಣನೀಯವಾಗಿ ಇಳಿಕೆಯಾಗಿದೆ ಸಂಘ ರಚಿಸುವ ಹಕ್ಕು ಸಾಮೂಹಿಕ ಚೌಕಾಸಿ ಶಕ್ತಿ ಹಾಗೂ ಮುಷ್ಕರದ ಹಕ್ಕಿನ ಮೇಲೂ ಕಠಿಣ ನಿರ್ಬಂಧ ಹೇರಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ..? ನಗರಸಭೆ ಅಧಿಕಾರಿಗಳು ಸಿಬ್ಬಂದಿ ವಿರುದ್ಧ ಶಾಸಕ ಕೊತ್ತೂರು ಮಂಜುನಾಥ್ ಸಿಡಿಮಿಡಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

ಮಣಿಪುರ | ಜನಾಂಗೀಯ ಕಿಚ್ಚಿಗೆ ದ್ವೇಷ ರಾಜಕಾರಣದ ತುಪ್ಪ;...

ಮಣಿಪುರದಲ್ಲಿ ಕಳೆದ ಮೂರು ವರ್ಷಗಳಿಂದ ಮುಗಿಯದ ಜನಾಂಗೀಯ ರಕ್ತಪಾತಕ್ಕೆ, ಸಮುದಾಯಗಳ ನಡುವಿನ ಹಳೆಯ ವೈರತ್ವವನ್ನು ಮೀರಿ, ಸರ್ಕಾರದ ಪಕ್ಷಪಾತದ ರಾಜಕಾರಣ, ಆಡಳಿತಾತ್ಮಕ ವೈಫಲ್ಯ ಮತ್ತು ವಿಭಜನಾತ್ಮಕ ನೀತಿಗಳೂ ಕಾರಣವಾಗಿವೆ. ಉರಿಯುವ ಬೆಂಕಿಗೆ ತುಪ್ಪ...

ಈ ಸಂದರ್ಭದಲ್ಲಿ ಡಿ.ಟಿ.ಮುನಿಸ್ವಾಮಿ,ಚನ್ನರಾಯಪ್ಪ,ಬಿಳ್ಳೂರು ನಾಗರಾಜು,ವಾಲ್ಮೀಕಿ ಅಶ್ವತ್ಥಪ್ಪ,ಜಿ.ಕೃಷ್ಣಪ್ಪ, ದೇವಿಕುಂಟೆ ಶ್ರೀನಿವಾಸ್, ಮುಸ್ತಫಾ, ಸೋಮಶೇಖರ್, ಮುನಿಯಪ್ಪ ಹಾಗೂ ಬಿಸಿಯೂಟ ಮಹಿಳಾ ನೌಕರರು ಹಾಜರಿದ್ದರು.

WhatsApp Image 2025 06 24 at 16.24.21 6207fd1d
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪದವೀಧರರ ಸಮಸ್ಯೆಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಕಣಕ್ಕೆ ಇಳಿದಿದ್ದೇನೆ: ಮೋಹನ ಲಿಂಬಿಕಾಯಿ

ನಾಲ್ಕು ದಶಕಗಳಿಂದ ವಿವಿಧ ಸಂಘಟನೆಗಳ ಮೂಲಕ ಸಾಮಾಜಿಕ ಸೇವಾ ಕಾರ್ಯಗಳಲ್ಲಿ ತೊಡಗಿದ್ದೇನೆ,...

ಗದಗ | ಅಂಚೆ ಸೇವೆಗಳು ಮನೆ ಬಾಗಿಲಿಗೆ: ಅಂಚೆ ಅಧೀಕ್ಷಕ ಎಸ್. ಎಸ್. ಶಿರಹಟ್ಟಿ

ಪತ್ರ ವ್ಯವಹಾರ ಸೇರಿದಂತೆ ಅಂಚೆ ಇಲಾಖೆಯ ವಿವಿಧ ಸೇವೆಗಳನ್ನು ಗ್ರಾಹಕರು ತಮ್ಮ...

ಧಾರವಾಡ | ಕಾವ್ಯದ ಮೌಲಿಕ ಸಂಗತಿಗಳು ಸಾಮಾಜಿಕ, ರಾಜಕೀಯ ಮುಖಾಮುಖಿಗೊಳಿಸಿದ ಕವಿ ಪಂಪ: ಡಾ. ವೈ.ಎಂ. ಭಜಂತ್ರಿ

ಪಂಪ ಭಾರತ ಇಡೀ ಕಾವ್ಯವನ್ನು ಸಂಕ್ಷಿಪ್ತವಾಗಿ ಪರಿಚಯಿಸಿ, ಈ ಕಾವ್ಯದ ಬಹು...