ವಿಜಯಪುರ | ಅಕ್ರಮ ಮದ್ಯ ಮಾರಾಟ ತಡೆಯುವಂತೆ ಆಗ್ರಹ

Date:

ಜಿಲ್ಲೆಯಲ್ಲಿ ಪ್ರತಿ ಹಳ್ಳಿ ಹಳ್ಳಿಗಳಲ್ಲಿ ಗಲ್ಲಿ ಗಲ್ಲಿಗಳಲ್ಲಿ ದಿನಸಿ ಅಂಗಡಿ ಕಿರಾಣಿ ಮತ್ತು ಪಾನ್ ಶಾಪ್ ಡಾಬಾಗಳಲ್ಲಿ ವಿಪರೀತವಾಗಿ ಮಧ್ಯವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದ್ದು, ಕ್ರಮಕೈಗೊಳ್ಳುವಂತೆ ಆಗ್ರಹಿಸಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದೆ.

- Advertisement -

ಎಲ್ಲೆಂದರಲ್ಲಿ ಮದ್ಯ ಸಿಗುತ್ತಿರುವ ಕಾರಣ ಜಿಲ್ಲೆಯ ಬಹುತೇಕ ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳು ಮದ್ಯ ವ್ಯಸನಿಗಳಾಗುತ್ತಿರುವುದು ಖೇದಕರ ಸಂಗತಿ. ಅನುಮತಿ ಪಡೆದಿರುವ ಮತ್ತು ಪಡೆಯದಿರುವ ಬಹುತೇಕ ಮದ್ಯದ ಅಂಗಡಿಗಳು ಬೆಳಗ್ಗೆ 6 ಗಂಟೆಗೆ ಆರಂಭವಾಗುತ್ತವೆ. ಇದು ಶಾಲಾ ಮಕ್ಕಳ ಮೇಲೆ ತೀವ್ರತರಹದ ಪರಿಣಾಮವನ್ನು ಬೀರುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬೆಳಗ್ಗೆ ಮಕ್ಕಳು ಶಾಲೆ ಟ್ಯೂಷನ್ ಸೇರಿದಂತೆ ವಿವಿಧ ರೀತಿಯ ಕಲಿಕಾ ಅಭ್ಯಾಸಗಳಿಗಾಗಿ ಹೊರಡುತ್ತಿರುವಾಗ ಮಧ್ಯದ ಅಂಗಡಿಗಳು ತೆರೆದಿರುವುದು ಮಧ್ಯ ಕುಡಿದು ಗಾಳಿಯಲ್ಲಿ ತೋರಾಡುತ್ತಿರುವ ದೃಶ್ಯಗಳು, ಜಗಳಾಡುವ ದೃಶ್ಯಗಳು ಮಕ್ಕಳ ಮನಸ್ಸಿನ ಮೇಲೆ ವಿಪರೀತವಾಗಿ ಪರಿಣಾಮವನ್ನು ಬೀರುತ್ತಿವೆ. ಇದು ಅವರ ಕಲಿಕಾ ಮೌಲ್ಯಗಳ ಮೇಲೆ ವ್ಯತರಿಕ್ತವಾದ ಪರಿಣಾಮವನ್ನು ಬೀರುತ್ತಿದೆ. ಆದ್ದರಿಂದಾಗಿ ಅನುಮತಿ ಪಡೆದಿರುವ ಮತ್ತು ಅನುಮತಿ ಪಡೆಯದೇ ಇರುವ ಜಿಲ್ಲೆಯ ಎಲ್ಲಾ ಮದ್ಯದ ಅಂಗಡಿಗಳಿಂದ ಅಬಕಾರಿ ಇಲಾಖೆಯು ಪ್ರತಿ ತಿಂಗಳು ಹಪ್ತಾ ವಸೂಲಿ ಮಾಡುತ್ತಿರುವ ವಿಷಯ ಹೊಸ ಸಂಗತಿಯಾಗಿ ಏನು ಉಳದಿಲ್ಲ. ಅಬಕಾರಿ ಇಲಾಖೆಯ ಅಧಿಕಾರಿಗಳ ಕುಮ್ಮಕ್ಕು ಮತ್ತು ಲಂಚ ಬಾಕ ಪ್ರವೃತ್ತಿಯಿಂದ ಇದು ನಿರಂತರವಾಗಿ ನಡೆಯುತ್ತಿದೆ.

ಪ್ರತಿ ಅಂಗಡಿಗಳಿಂದ ತಿಂಗಳಿಗೆ 25 ರಿಂದ 30 ಸಾವಿರ ರೂಪಾಯಿ ಹಪ್ತಾ ವಸೂಲಿ ಮಾಡುತ್ತಾರೆ ಎಂದು ಜಿಲ್ಲೆಯ ಸಾರ್ವಜನಿಕರಲ್ಲಿ ತೀವ್ರ ತರಹದ ಚರ್ಚೆಯಲ್ಲಿರುವ ಸಂಗತಿಯಾಗಿದೆ. ಆದ್ದರಿಂದಾಗಿ, ಅಬಕಾರಿ ಇಲಾಖೆಯ ಅಧಿಕಾರಿಗಳ ಹಪ್ತಾ ವಸೂಲಿ ದಂಧೆಯನ್ನು ಮೋಟಕುಗೊಳಿಸಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವ ಮಳಿಗೆಗಳು ಮತ್ತು ಡಾಬಾಗಳನ್ನು ಬಂದು ಮಾಡಿ. ಜಿಲ್ಲೆಯ ಮಕ್ಕಳ ಭವಿಷ್ಯದ ಶೈಕ್ಷಣಿಕ ಬದುಕಿನ ಉಳಿಸಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮನವಿ ಪತ್ರದಲ್ಲಿ ಬರೆದು ಮನವಿ ಮಾಡಿದ್ದಾರೆ.

ಈ ವೇಳೆ ರಾಜ್ಯ ಸಂಘಟನೆ ಕಾರ್ಯದರ್ಶಿ ಶಿವಾನಂದ ಯಡಹಳ್ಳಿ, ರಾಕೇಶ್ ಇಂಗಳಗಿ, ಹಮೀದ್ ಇನಾಮ್ದಾರ್, ಪ್ರವೀಣ್ ಕನಸೆ, ವಿಕ್ರಮ್ ವಾಗ್ಮೊರೆ ಹಾಗೂ ಶ್ರೀಶೈಲ ಮಠ ಮೈಬೂಬ್ ತಾಂಬೋಳಿ, ರಾಘವೇಂದ್ರ ಚಲವಾದಿ, ಸಾದಿಕ್ ಪಟವೆಗಾರ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...