ದಕ್ಷಿಣ ಕನ್ನಡ | ಬಿಡಬ್ಲ್ಯೂಎಫ್‌ ಸಾಮೂಹಿಕ ವಿವಾಹʼಕ್ಕೆ ಅರ್ಜಿ ಆಹ್ವಾನ

Date:

Advertisements

ಆರ್ಥಿಕವಾಗಿ ಹಿಂದುಳಿದಿರುವ ಮುಸ್ಲಿಮ್ ಸಮುದಾಯದ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡಲು ಅಬುಧಾಬಿಯ ಬ್ಯಾರೀಸ್‌ ವೆಲ್ಫೇರ್‌ ಫೋರಂ (ಬಿಡಬ್ಲ್ಯುಎಫ್) ಮುಂದಾಗಿದೆ. 2024ರ ಫೆಬ್ರವರಿ 3ರಂದು ಮಂಗಳೂರು ಬಳಿಯ ಗಂಜಿಮಠದ ‘ಝಾರಾ ಕನ್ವೆಂಶನ್‌ ಸೆಂಟರ್’ನಲ್ಲಿ ‘ಸರಳ ಸಾಮೂಹಿಕ ವಿವಾಹ’ವನ್ನು ಆಯೋಜಿಸಿದೆ. ಅಗತ್ಯವಿರುವ ವಧುವಿನ ಕುಟುಂಬಗಳು ಅರ್ಜಿ ಸಲ್ಲಿಸಬಹುದು ಎಂದು ಬಿಡಬ್ಲ್ಯೂಎಫ್‌ ಹೇಳಿದೆ.

ಸಾಮೂಹಿಕ ವಿವಾಹ ಆಯೋಜನೆಯ ಬಗ್ಗೆ ಬಿಡಬ್ಲ್ಯೂಎಫ್‌ನ ಅಧ್ಯಕ್ಷ ಮುಹಮ್ಮದ್‌ ಅಲಿ ಉಚ್ಚಿಲ್‌ ಪತ್ರಿಕಾ ಪ್ರಕಟಣೆ ನೀಡಿದ್ದಾರೆ. “ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಕಾಸರಗೋಡು ಜಿಲ್ಲೆಗಳ ವಧುವಿನ ಕುಟುಂಬಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಅನಾಥ, ಅಂಗವಿಕಲ, ಆರ್ಥಿಕ ಸಂಕಷ್ಟ ಹಾಗೂ ಮದುವೆಯ ವಯಸ್ಸು ಮೀರಿರುವ ವಧುವಿಗೆ ಆಧ್ಯತೆ ನೀಡಲಾಗುವುದು” ಎಂದು ತಿಳಿಸಿದ್ದಾರೆ.

“ಆಯ್ದ ವಧುವಿಗೆ ಮದುವೆಯ ವಸ್ತ್ರ, ನಾಲ್ಕು ಪವನ್ ಚಿನ್ನಾಭರಣ ಹಾಗೂ ಮದುವೆಯ ಖರ್ಚನ್ನು ಬಿಡಬ್ಲ್ಯೂಎಫ್‌ ಭರಿಸಲಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್‌ 25 ಕೊನೆಯ ದಿನಾಂಕವಾಗಿದೆ. ಆಸಕ್ತರು ನಿಗದಿತ ಅರ್ಜಿ ನಮೂನೆ ಪಡೆಯಲು ಉಮರ್‌ ಯು.ಹೆಚ್ (ಸಂಚಾಲಕರು, ಸಾಮೂಹಿಕ ವಿವಾಹ ಸಂಘಟನಾ ಸಮಿತಿ, ಎಲ್‌ಎಕ್ಸ್‌ಎಂ ಸೀ ಫುಡ್‌ ಎಕ್ಸ್‌ಪೋರ್ಟ್ಸ್, ನಂ. 14, ಒಂದನೇ ಮಹಡಿ, ಅಡೋನೈ ಟವರ್ಸ್‌, ಕಂಕನಾಡಿ ರಸ್ತೆ, ಹೈಲ್ಯಾಂಡ್‌ ಆಸ್ಪತ್ರೆ ಬಳಿ, ಮಂಗಳೂರು – 575002, ಫೋನ್: 98450 54191) ಅವರನ್ನು ಸಂಪರ್ಕಿಸಬೇಕು” ಎಂದು ಹೇಳಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X