ನಾಳೆಯಿಂದ ‘ಗೃಹಲಕ್ಷ್ಮಿ’ ಯೋಜನೆಯ ಅರ್ಜಿ ಸಲ್ಲಿಕೆಗೆ ಅವಕಾಶ: ಲಕ್ಷ್ಮಿ ಹೆಬ್ಬಾಳ್ಕರ್

Date:

  • ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ನಾಳೆ ಚಾಲನೆ
  • ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರಲ್ಲ

ನಾಳೆಯಿಂದ (ಜೂ.16) ಗೃಹಲಕ್ಷ್ಮಿ ಯೋಜನೆಗೆ ಮಹಿಳೆಯರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

- Advertisement -

ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಬಿಪಿಎಲ್ ಕಾರ್ಡ್, ಅಂತ್ಯೋದಯ ಕಾರ್ಡ್ ನವರಿಗೂ ಈ ಯೋಜನೆ ಲಾಭ ಸಿಗುತ್ತದೆ. ನಾಳೆಯಿಂದ ಅರ್ಜಿ ಸಲ್ಲಿಸಬಹುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಕೆಲವು ತಾಂತ್ರಿಕ ಕಾರಣಗಳಿಂದ ಅರ್ಜಿ ಸಲ್ಲಿಸುವುದು ಸ್ವಲ್ಪ ವಿಳಂಬವಾಗಿದೆ. ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್‌ಗಳಲ್ಲಿ ಅರ್ಜಿ ಸಲ್ಲಿಸಬಹುದು. 1902 ಹೆಲ್ಪ್ ಲೈನ್ ಮೂಲಕ ಏನಾದರೂ ಗೊಂದಲಗಳಿದ್ದರೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು” ಎಂದು ವಿವರಿಸಿದರು.

“ಶುಕ್ರವಾರ ಮಧ್ಯಾಹ್ನ 1.30ಕ್ಕೆ ‘ಗೃಹಲಕ್ಷ್ಮಿ’ ಯೋಜನೆಯ ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ಸಾಂಕೇತಿಕವಾಗಿ ಶಕ್ತಿಭವನದಲ್ಲಿ ಸೇವಾ ಸಿಂಧು ಪೋರ್ಟಲ್‌ನಲ್ಲಿ ಚಾಲನೆ ಚಾಲನೆ ನೀಡಲಿದ್ದಾರೆ. ನಮ್ಮ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಒಂದಾಗಿದ್ದು, ಇದರ ಉಸ್ತುವಾರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಡೆಯುತ್ತದೆ” ಎಂದರು.

ಟ್ಯಾಕ್ಸ್ ಪೇಯರ್ಸ್ ಆಗಿದ್ರೆ ಅರ್ಜಿ ರಿಜೆಕ್ಟ್

“ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕುವ ಪತಿ ಟ್ಯಾಕ್ಸ್ ಪೇಯರ್ಸ್ ಆಗಿದ್ರೆ ಅರ್ಜಿ ರಿಜೆಕ್ಟ್ ಆಗಲಿದೆ. ಇ- ಗವರ್ನೆನ್ಸ್ ಮೂಲಕ ಅರ್ಜಿ ಹಾಕುವ ವ್ಯವಸ್ಥೆ ಮಾಡಿದ್ದೇವೆ. ಅರ್ಜಿದಾರರ ಪತಿ ಟ್ಯಾಕ್ಸ್ ಪೇಯರ್ಸ್ ಆಗಿದ್ರೆ ಅರ್ಜಿ ಸ್ವೀಕಾರ ಆಗುವುದಿಲ್ಲ. ಹೀಗಾಗಿ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ” ಎಂದು ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದ್ದಾರೆ.

ಗಮನಿಸಬೇಕಾದ ಪ್ರಮುಖ ಅಂಶಗಳು

  • ಅರ್ಜಿದಾರರು 16-06-2023 ರಿಂದ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಅರ್ಜಿಗಳನ್ನು ಆನ್‌ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ. (https://sevasindhugs.karnataka.gov.in/gruhalakshmi)
  • ಅರ್ಜಿ ಸಲ್ಲಿಕೆಗೆ SMS ಮೂಲಕ ಹಾಗೂ ಸೇವಾಸಿಂಧು ಪೋರ್ಟಲ್ ಮೂಲಕ Auto generated ಸ್ವೀಕೃತಿಗಳನ್ನು ಪಡೆಯಬಹುದಾಗಿದೆ.
    ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್‌ ಖಾತೆ ವಿವರಗಳು ಅಗತ್ಯವಾಗಿರುತ್ತದೆ.
  • ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅವಲಂಬಿತರಾಗದೆ ಅರ್ಜಿಯನ್ನು ಸ್ವತಃ ಮೇಲೆ ತಿಳಿಸಿದ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿರುತ್ತದೆ.
    ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ.
  • ಮಂಜೂರಾತಿಯ ನಂತರ ನೇರ ನಗದು ವರ್ಗಾವಣೆ ಮಾಡಲಾಗುವುದು.
  • ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ, ಸಂಪೂರ್ಣ ಉಚಿತವಾಗಿರುತ್ತದೆ.
  • ಯೋಜನೆಯ ಕುರಿತಂತೆ ಸಂದೇಹ/ ಕುಂದುಕೊರತೆಗಳಿದ್ದಲ್ಲಿ ಸಹಾಯವಾಣಿ – 1902 ಗೆ ಸಂಪರ್ಕಿಸಬಹುದಾಗಿದೆ.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...

ಉಡುಪಿ | ಇಂದ್ರಾಳಿ ಮಂಚಿ ನೂರಾನಿ ಮಸೀದಿಗೆ ನೂತನ ಆಡಳಿತ ಸಮಿತಿ ರಚನೆ

ಉಡುಪಿ ತಾಲೂಕಿನ ಇಂದ್ರಾಳಿ ಮಂಚಿ ನೂರಾನಿ ಮಸೀದಿಯ ಆಡಳಿತ ಸಮಿತಿಗೆ ನೂತನ...