ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಕೊಡಮಾಡುವ (2025ನೇ ಸಾಲಿನ) ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ರಾಷ್ಟ್ರಾದ್ಯಂತ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಪಂಚಾಯತಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜುಲೈ 31 ರೊಳಗೆ ಅರ್ಜಿ ಸಲ್ಲಿಸಬೇಕು.
ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕಂತಿ ಮತ್ತು ನೂತನ ಆವಿಷ್ಕಾರಗಳನ್ನು ಮಾಡಿ ಉತ್ತಮ ಸಾಧನೆ ಮಾಡಿದ 5 ವರ್ಷ ಮೇಲ್ಪಟ್ಟ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತದೆ. ಅರ್ಜಿಯನ್ನು ಆನ್‍ಲೈನ್‌ನಲ್ಲಿ https://awards.gov.in ಮೂಲಕ ಸಲ್ಲಿಸಬೇಕು.
ಮಕ್ಕಳ ಮಾಹಿತಿಯು ದೊರೆತಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ದೂರವಾಣಿ ಸಂಖ್ಯೆ 0824-2440004 ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.