ಐಎಎಸ್-ಕೆಎಎಸ್ ಪರೀಕ್ಷಾ ಪೂರ್ವ ತರಬೇತಿಗೆ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Date:

Advertisements
  • ಬೆಂಗಳೂರಿನ ಕರ್ನಾಟಕ ಹಜ್‌ ಭವನದಲ್ಲಿ ವಸತಿ ಸಹಿತ ತರಬೇತಿ
  • ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸಲು ಸೆ.16 ಕೊನೆಯ ದಿನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಗೆ ಉಚಿತ ವಸತಿ ಸಹಿತ ಐಎಎಸ್-ಕೆಎಎಸ್ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡುವ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

2023-24ನೇ ಸಾಲಿನಲ್ಲಿ ಬೆಂಗಳೂರಿನ ಕರ್ನಾಟಕ ಹಜ್‌ ಭವನದಲ್ಲಿ ನಡೆಯಲಿರುವ ಐಎಎಸ್‌/ಕೆಎಎಸ್‌ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ಪಡೆಯಲು ಬಯಸುವವರು ಅರ್ಜಿ ಸಲ್ಲಿಸಬಹುದು. ತರಬೇತಿಯು ಸುಮಾರು 10 ತಿಂಗಳ ಅವಧಿಯದ್ದಾಗಿರುತ್ತದೆ.

ಅಭ್ಯರ್ಥಿಗಳು ಮುಸ್ಲಿಂ, ಕ್ರಿಶ್ಚಿಯನ್, ಜೈನ, ಬೌದ್ಧ, ಸಿಖ್ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದವರಾಗಿರಬೇಕು. ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ಅರ್ಜಿ ಸಲ್ಲಿಸುವವರು ಕನಿಷ್ಠ ಪದವಿ ವಿದ್ಯಾರ್ಹತೆ ಪಾಸು ಮಾಡಿರಬೇಕು. ಅಭ್ಯರ್ಥಿಯ ವಯಸ್ಸು ಕನಿಷ್ಠ 21 ರಿಂದ 35 ವರ್ಷ ಮೀರಿರಬಾರದು.

Advertisements

ಈಗಾಗಲೇ ಇಲಾಖೆ-ಖಾಸಗಿ ಸಂಸ್ಥೆಗಳಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆದು ಸ್ವಯಂ ಅಧ್ಯಯನ ನಡೆಸುತ್ತಿರುವ ಅಭ್ಯರ್ಥಿಗಳು ವಸತಿ ವ್ಯವಸ್ಥೆ ಕಲ್ಪಿಸಲಾಗುವುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸೆ.16, 2023 ಕೊನೆಯ ದಿನಾಂಕವಾಗಿದ್ದು, ಸೇವಾ ಸಿಂಧೂ ಪೋರ್ಟಲ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ 8722299990 ಗೆ ಕರೆ ಮಾಡಿ ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ತಿಳಿಸಿದೆ.

ಸಂಪೂರ್ಣ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ : ಐಎಎಸ್-ಕೆಎಎಸ್ ಪರೀಕ್ಷಾ ಪೂರ್ವ ತರಬೇತಿ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

Download Eedina App Android / iOS

X