ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಮೊನ್ನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಗುಂಪು ಹತ್ಯೆಯನ್ನು ಖಂಡಿಸಿ ಹಾಗೂ ಬಾಲಿಶ ಹೇಳಿಕೆ ನೀಡಿರುವ ಗೃಹ ಮಂತ್ರಿಗಳು ರಾಜೀನಾಮೆ ನೀಡಬೇಕು ಎಂದು ಅಗ್ರಹಿಸಿ ಉಡುಪಿಯ ಅಜ್ಜರಕಾಡು ಹುತಾತ್ಮರ ಸ್ಮಾರಕದ ಬಳಿ ಪ್ರತಿಭಟನೆಯನ್ನು ನಡೆಸಿದರು.
ಪ್ರತಿಭಟನೆಯಲ್ಲಿ ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಅಪ್ಸರ್ ಕೊಡ್ಲಿಪೇಟೆ ಭಾಗವಹಿಸಿ ಈ ಗುಂಪು ಹತ್ಯೆಯ ಹಿಂದಿರುವ ಷಡ್ಯಂತರವನ್ನು ಬಯಲಿಗೆಳೆಯಬೇಕು, ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೊಳಪಡಿಸಬೇಕು, ಮೃತ ಅಶ್ರಫ್ ಕುಟುಂಬಕ್ಕೆ ಸರ್ಕಾರ 50 ಲಕ್ಷ ಪರಿಹಾರವನ್ನು ನೀಡಬೇಕು ಹಾಗೂ ಈ ಘಟನೆಗೆ ಸಂಬಂಧಿಸಿದಂತೆ ಬೇಜವಾಬ್ದಾರಿಯುತ ಹೇಳಿಕೆ ನೀಡಿದ ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಎಸ್ ಡಿಪಿಐ ಉಡುಪಿ ವಿಧಾನಸಭಾ ಕ್ಷೇತ್ರ ಸಮಿತಿ ಉಪಾಧ್ಯಕ್ಷರಾದ ರಹೀಂ ಆದಿ ಉಡುಪಿ ಮಾತನಾಡಿದರು. ಉಡುಪಿ ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಝಾಕ್ ವೈ ಎಸ್ ಹಾಗೂ ಜಿಲ್ಲಾ ನಾಯಕರು ಉಪಸ್ಥಿತರಿದ್ದರು.