ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್‌ಗೆ ಕಳುಹಿಸಬೇಕು: ‌ಡಿಸಿಎಂ ಡಿಕೆ ಶಿವಕುಮಾರ್

Date:

  • ಖರ್ಗೆ ಕುರಿತ ಆರಗ ಜ್ಞಾನೇಂದ್ರ ಹೇಳಿಕೆಗೆ ಡಿಕೆಶಿ ಕಿಡಿ
  • ವರಿಷ್ಠರು ಕರೆದಿರುವ ಕರ್ನಾಟಕದ ಸಭೆ ವಿಶೇಷವೇನಲ್ಲ

ಮಲ್ಲಿಕಾರ್ಜು ಖರ್ಗೆ ಅವರ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಬಿಜೆಪಿ ಮುಖಂಡ ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್ ಗೆ ಕಳುಹಿಸಬೇಕು ಎಂದು ಡಿಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಹರಿಹಾಯ್ದರು.

- Advertisement -

ನವದೆಹಲಿಯಲ್ಲಿ ಸುದ್ದಿಗಾರರ ಜೊತೆ ಬುಧವಾರ ಮಾತನಾಡಿದ ಅವರು, “ನಿಮಾನ್ಸ್ ಆಸ್ಪತ್ರೆ ಬೆಂಗಳೂರಿನಲ್ಲಿ ಉತ್ತಮವಾಗಿದೆ. ಅದು ಫರ್ಸ್ಟ್ ಕ್ಲಾಸ್ ಆಗಿದೆ. ಅಲ್ಲಿಗೆ ಆರಗ ಜ್ಞಾನೇಂದ್ರ ಅವರನ್ನು ಕಳುಹಿಸೋಣ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಮಂತ್ರಿಗಳು ಸೇರಿ ಕರ್ನಾಟಕದ ಸುಮಾರು 50 ಮಂದಿ ನಾಯಕರ ಸಭೆಯನ್ನು ವರಿಷ್ಠರು ಕರೆದಿದ್ದಾರೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಎಲ್ಲ ರಾಜ್ಯದ ಮುಖಂಡರ ಸಭೆ ನಡೆಸುತ್ತಿದ್ದಾರೆ. ಕರ್ನಾಟಕದ ಸಭೆ ವಿಶೇಷವೇನಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಆರಗ ಜ್ಞಾನೇಂದ್ರರಂತಹ ಅರೆ ಜ್ಞಾನಿಗಳು ಶಾಸಕರಾಗಿರುವುದೇ ದುರ್ದೈವ: ರಮೇಶ್‌ ಬಾಬು

“ರಾಹುಲ್ ಗಾಂಧಿ ಅವರು ಈ ಹಿಂದೆಯೇ ಸಭೆ ಕರೆದಿದ್ದರು. ಕಾರಣಾಂತರಗಳಿಂದ ನಡೆಯಲಿಲ್ಲ. ಅದು ಈಗ ದೆಹಲಿಯಲ್ಲಿ ನಡೆಯುತ್ತಿದೆ. ಸಚಿವರ ಪ್ರತ್ಯೇಕ ಸಭೆ, ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚೆಯಾಗಲಿದೆ” ಎಂದು ಹೇಳಿದರು.

ರಾಜಧಾನಿಯಲ್ಲಿ ವಾಹನ ಸಂಚಾರ ದಟ್ಟಣೆ ನಿವಾರಣೆಗೆ ಸುರಂಗ ರಸ್ತೆ ಮತ್ತು ಮೇಲು ಸೇತುವೆ ರಸ್ತೆ ನಿರ್ಮಾಣ ಮಾಡಬೇಕಿದೆ. ಈ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಜತೆ ಚರ್ಚಿಸುವೆ ಎಂದು ಇದೇ ವೇಳೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...