ಅರಹಳ್ಳಿ ಸೊಸೈಟಿ ಚುನಾವಣೆ ಸೋಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಪ್ರಚಾರಕ್ಕೆ ಚಾಲನೆ

Date:

ಕೋಲಾರ: ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಮಗ್ರ ಯೋಜನಾ ವರದಿ (ಡಿಪಿಆರ್‌) ತಯಾರಿಸಲು ಲೋಕೋಪಯೋಗಿ ಇಲಾಖೆಗೆ ರಾಜ್ಯ ಸರ್ಕಾರ ಸೂಚನೆ ನೀಡಿದೆ ಎಂದು ಶಾಸಕ ಕೊತ್ತೂರು ಮಂಜುನಾಥ್‌ ಹೇಳಿದರು.

- Advertisement -

ನಗರದಲ್ಲಿ ಬುಧವಾರ ಸೋಮೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಪಿಆರ್‌ಗೆ ಅಂದಾಜು ವೆಚ್ಚ ಸಿದ್ಧವಾಗುತ್ತಿದ್ದು ಅದನ್ನು ಸದ್ಯದಲ್ಲೇ ಸರ್ಕಾರಕ್ಕೆ ಸಲ್ಲಿಸಲಾಗುವುದು. ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಸ್ಯಾನಿಟೋರಿಯಂ ಜಾಗ ಸೇರಿದಂತೆ ಎರಡು ಕಡೆ ಸ್ಥಳ ಪರಿಶೀಲಿಸಿದ್ದೇವೆ. ಸದ್ಯದಲ್ಲೇ ಸೂಕ್ತ ಜಾಗ ಅಂತಿಮಗೊಳಿಸಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಕೋಲಾರ ನಗರದ ರಿಂಗ್‌ ರಸ್ತೆಗೆ ಡಿಪಿಆರ್‌ ಆಗಿದೆ. ಹೊಸ ಎಪಿಎಂಸಿ ಮಾರುಕಟ್ಟೆಗೆ 63 ಎಕರೆ ಜಾಗಕ್ಕೆ ಈಗಾಗಲೇ ಒಪ್ಪಿಗೆ ಸಿಕ್ಕಿದೆ. ಇನ್ನು 40 ಎಕರೆ ಜಾಗ ಕೊಡಲು ಪ್ರಕ್ರಿಯೆ ನಡೆಯುತ್ತಿದೆ. ಅದಕ್ಕೂ ಸದ್ಯದಲ್ಲೇ ಒಪ್ಪಿಗೆ ಸಿಗಲಿದೆ. ಜಿಲ್ಲಾಧಿಕಾರಿಯಾಗಿದ್ದ ದಿವಂಗತ ಡಿ.ಕೆ.ರವಿ ಅವರು 17 ಎಕರೆ ಜಾಗವನ್ನು ಗಿಡ ಬೆಳೆಸಲು ಅರಣ್ಯ ಇಲಾಖೆಗೆ ನೀಡಿದ್ದರು. ಅಗತ್ಯವಿದ್ದಾಗ ವಾಪಸ್‌ ಪಡೆಯುವ ಷರತ್ತು ಕೂಡ ವಿಧಿಸಿದ್ದರು. ಹೀಗಾಗಿ, ಆ ಜಾಗ ಪಡೆದು ಅರಣ್ಯ ಇಲಾಖೆಗೆ ಬೇರೆ ಜಾಗ ಕೊಡುತ್ತೇವೆ. ಈವರೆಗೆ ಯಾರ ಕೈಯಲ್ಲೂ ಎಪಿಎಂಸಿಗೆ ಜಾಗ ಕೊಡಿಸುವ ಕೆಲಸ ನಡೆದಿರಲಿಲ್ಲ. ಈಗ ನಮ್ಮ ಅವಧಿಯಲ್ಲಿ ಜಾಗ ಕೊಡುತ್ತಿದ್ದೇವೆ ಎಂದರು.

ಕೋಲಾರ ನಗರ ಹಾಗೂ ತಾಲ್ಲೂಕಿನಲ್ಲಿ ನಾವೇನು ಕೆಲಸ ಮಾಡುತ್ತಿದ್ದೇವೆ ಎಂದು ನಾವು ಹೇಳುವುದಿಕ್ಕಿಂತ ಜನರೇ ಮಾತನಾಡುತ್ತಿದ್ದಾರೆ. ವೈದ್ಯಕೀಯ ಕಾಲೇಜು, ರಿಂಗ್‌ ರಸ್ತೆ, ಎಪಿಎಂಸಿಗೆ ಜಾಗದ ಬಗ್ಗೆ ಆದ್ಯತೆ ನೀಡಿದ್ದೇವೆ ಆರೋಗ್ಯ ಭಾಗ್ಯ ರೈತರಿಗೆ ಉತ್ತಮ ಬೆಲೆ ದೊರಕಿಸಿಕೊಡುವುದು ನಮ್ಮ ಮುಖ್ಯ ಉದ್ದೇಶವಾಗಿದೆ ಎಂದು ಹೇಳಿದರು.

ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಉಪಚುನಾವಣೆ ಕುರಿತು ಪ್ರತಿಕ್ರಿಯಿಸಿ ಎರಡೂ ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ. ಹಿಂದೆಯೂ ಈ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆದ್ದಿತ್ತು. ಚುನಾವಣೆ ಎಂದ ಮೇಲೆ ಗೊಂದಲ ಜಗಳ ಸಹಜ ಎಂದು ನುಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲೂರಿಗೆ ಏಪ್ರಿಲ್‌ 1ಕ್ಕೆ ಬರಬೇಕಿತ್ತು. ಅದನ್ನು ಮುಂದೂಡಲಾಗಿದ್ದು, ಏ.15ರ ನಂತರ ಭೇಟಿ ನೀಡಲಿದ್ದಾರೆ. ಕೋಲಾರಕ್ಕೂ ನಂತರದ ದಿನಗಳಲ್ಲಿ ಬರಲಿದ್ದಾರೆ. ದೇವನಹಳ್ಳಿ, ವೇಮಗಲ್‌, ನರಸಾಪುರ, ಮಾಲೂರು, ಹೊಸೂರು ಹೆದ್ದಾರಿ ರಸ್ತೆಗೂ ಆಗ ಚಾಲನೆ ನೀಡಲಿದ್ದಾರೆ. ಈಗಾಗಲೇ ನಾಲ್ಕು ಪಥಗಳ ಈ ರಸ್ತೆಗೆ ಟೆಂಡರ್‌ ಆಗಿದ್ದು, 150 ಎಂಜಿನಿಯರ್‌ಗಳು ಸಮೀಕ್ಷೆಯಲ್ಲಿ ತೊಡಗಿದ್ದಾರೆ ಎಂದರು.

ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸುವುದಷ್ಟೇ ಕೆ.ಸಿ.ವ್ಯಾಲಿ ಯೋಜನೆಯ ಉದ್ದೇಶವಾಗಿದೆ. ಹಿಂದೆ ನಮ್ಮಲ್ಲಿ 2 ಸಾವಿರ ಅಡಿ ಕೊಳವೆ ಬಾವಿ ತೋಡಿದರೂ ನೀರು ಬರುತ್ತಿರಲಿಲ್ಲ. ಹೀಗಾಗಿ, ಎರಡನೇ ಹಂತದ ಶುದ್ಧೀಕರಣ ಮಾಡಿ ನೀರು ತಂದೆವು ಎಂದು ಹೇಳಿದರು.

ಅರಹಳ್ಳಿ ವಿವಿಧೋದ್ದೇಶದ ಪ್ರಾಥಮಿಕ ಕೃಷಿ ಗ್ರಾಮೀಣ ಸಂಘದ ಚುನಾವಣೆ ಇದೆ. ಕಾಂಗ್ರೆಸ್‌ ಬೆಂಬಲಿತ 12 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದು, ಸೋಮೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಿದ್ದಾರೆ. ಎಲ್ಲರೂ ಸೊಸೈಟಿ ನಿರ್ದೇಶಕರಾಗಲು ಅರ್ಹರಿದ್ದು, ಕೆಲಸ ಮಾಡುವಂಥವರು. ಇವರಿಗೆ ಷೇರುದಾರರು ಮತ ನೀಡಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಬಿಜೆಪಿ ಹಾಗೂ ಜೆಡಿಎಸ್‌ನವರು ಕೂಡ ದೇವರ ಮೊರೆ ಹೋಗಿದ್ದಾರೆ ಎಂಬ ಪ್ರಶ್ನೆಗೆ, ಬಿಜೆಪಿ–ಜೆಡಿಎಸ್‌ನವರು ದೇವರ ಮೊರೆ ಹೋಗಿರುವುದು ಸಂತೋಷದ ವಿಚಾರ. ಆದರೆ ದೇವರು ಷೇರುದಾರರಿಗೆ ಆಶೀರ್ವಾದ ಮಾಡಲಿದ್ದು ಅವರು ನಮ್ಮ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದರು.

ಇದನ್ನು ಓದಿದ್ದೀರಾ..? ವೇಮಗಲ್- ಕುರುಗಲ್ ಪಟ್ಟಣ ಪಂಚಾಯತಿ ಬಜೆಟ್ ಮಂಡನೆ ಸ‌ಭೆ

ಈ ಸಂದರ್ಭದಲ್ಲಿ ವಿಧಾನ ಪರಿಷತ್‌ ಸದಸ್ಯ ಎಂ.ಎಲ್‌.ಅನಿಲ್‌ ಕುಮಾರ್‌, ಡಿಸಿಸಿ ಬ್ಯಾಂಕ್ ನಿರ್ದೇಶಕ ಖಾಜಿಕಲ್ಲಹಳ್ಳಿ ಮುನಿರಾಜು, ಹಾಫ್ ಕಾಮ್ಸ್ ಮಾಜಿ ಅಧ್ಯಕ್ಷ ಅರಹಳ್ಳಿ ಗೋಪಾಲಕೃಷ್ಣ, ಸೊಸೈಟಿ ಹಾಲಿ ಅಧ್ಯಕ್ಷ ಶ್ರೀನಿವಾಸ್, ಕೋಲಾರ ಗ್ರಾಮಾಂತರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ, ಮುಖಂಡರಾದ ಕಿಲಾರಿಪೇಟೆ ಮಣಿ, ಗಂಗಣ್ಣ, ಅಮರನಾಥ್, ಕೊಂಡರಾಜನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿಜಯನಗರ ಮಂಜುನಾಥ್‌ ಸೇರಿದಂತೆ ಅಭ್ಯರ್ಥಿಗಳು ಕಾಂಗ್ರೆಸ್ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ‘ಕಬ್ಬದುಳುಮೆ’ ಕಾವ್ಯಲೋಕದ ಓದಿನ ಹೊಸಪರಿ

ಹಳಗನ್ನಡ ಪಠ್ಯಗಳ ಸಂಧಿಬಂಧಗಳನ್ನು ಒಡೆದು ಒಳಗಿನ ತಿಳಿವನ್ನು ಅರಗಿಸಿಕೊಳ್ಳುವ ನಿರಂತರ ಬೇಸಾಯವಾದ...

ರಾಯಚೂರು | ಭೂಮಾಪಕ–ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ. ನಿಷೇಧಿತ ಪ್ರದೇಶ

ಭೂದಾಖಲೆಗಳ ಇಲಾಖೆಯಲ್ಲಿನ ಉಳಿಕೆ ಮೂಲ ವೃಂದದ ಭೂಮಾಪಕರ ಹುದ್ದೆಗಳು ಹಾಗೂ ಕಂದಾಯ...

ಎಂಆರ್‌ಪಿಎಲ್‌ನಲ್ಲಿ ಭಾರೀ ಸ್ಫೋಟ: ಓರ್ವ ಸಾವು; ಸುರಕ್ಷತಾ ಲೋಪದ ಸಮಗ್ರ ತನಿಖೆಗೆ ಆಗ್ರಹ

ಜೋಕಟ್ಟೆ ಸಮೀಪದ ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್‌ (ಎಂಆರ್‌ಪಿಎಲ್) ಘಟಕದಲ್ಲಿ...