ಅರಕಲಗೂಡು | ಎ ಮಂಜು ಪರ ರೇವಣ್ಣ ಮತಯಾಚನೆ

Date:

ಕೇವಲ ಹತ್ತೂವರೆ ತಿಂಗಳಿನಲ್ಲಿ ದೇವೇಗೌಡರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ ಕಾಂಗ್ರೆಸ್ ಇಡೀ ದೇಶದಲ್ಲಿ ಸರ್ವನಾಶವಾಗುತ್ತದೆ. ಕಳೆದೆರಡು ವರ್ಷದಿಂದ ಕಾಂಗ್ರೆಸ್ ಏನು ಮಾಡುತ್ತಿದೆಯೆಂದು ನಿಮಗೆಲ್ಲಾ ಗೊತ್ತಿದೆ ಎಂದು ಎಚ್‌.ಡಿ ರೇವಣ್ಣ ಕಿಡಿಕಾರಿದರು.

ಹಾಸನ ಜಿಲ್ಲೆಯ ಅರಕಲಗೂಡು ವಿಧಾನಸಭಾ ಕ್ಷೇತ್ರದ ಬಿದರೂರು ಗ್ರಾಮದಲ್ಲಿ ಜೆಡಿಎಸ್‌ ಅಭ್ಯರ್ಥಿ ಎ ಮಂಜು ಪರವಾಗಿ ಮತಯಾಚಿಸಿ, ಅವರು ಮಾತನಾಡಿದರು. “ಅರಸೀಕೆರೆ ಹಾಗೂ ಅರಕಲಗೂಡು ಕ್ಷೇತ್ರದ ಶಾಸಕರನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳಬೇಕೆಂದು ಕೈ ನಾಯಕರು ಹೋರಾಟ ಮಾಡಿದರು. ಒಬ್ಬರಿಗೆ ಟಿಕೆಟ್ ನೀಡಿ ಇನ್ನೊಬ್ಬರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಿಲ್ಲ. ಬಿಜೆಪಿಯವರು 40‌ ಪರ್ಸೆಂಟ್, 20‌ ಪರ್ಸೆಂಟ್ ಎನ್ನುತ್ತ ಅವರುಗಳೇ ತಾತ ಮುತ್ತಾತಂದಿರು ಕೂತು ತಿನ್ನುವಷ್ಟು ಹಣ ಮಾಡಿಕೊಂಡಿದ್ದಾರೆ. ತುಮಕೂರಿನಲ್ಲಿ ಕಾಂಗ್ರೆಸ್‌ನ ಎಲ್ಲ ಮುಖಂಡರೂ ಸೇರಿ ದೇವೇಗೌಡರನ್ನು ಸೋಲಿಸಿದರು” ಎಂದು ಕಾಂಗ್ರೆಸ್‌ ವಿರುದ್ಧ ಹರಿಹಾಯ್ದರು.

“ತಮ್ಮ 90ನೇ ವಯಸ್ಸಿನಲ್ಲಿಯೂ ದೇವೇಗೌಡರು ಹೋರಾಟ ಮಾಡುತ್ತಿದ್ದಾರೆ ಎಂದರೆ ದೇವೇಗೌಡರಿಗೆ ಶಿವನ ಶಕ್ತಿಯಿದೆ. ಬಿದರೂರಿನ ಬಸವೇಶ್ವರ ದೇವರಿಗೆ ಪೂಜೆ ಸಲ್ಲಿಸಿ ದೇವೇಗೌಡರು ಮುಖ್ಯಮಂತ್ರಿಯಾಗಿದ್ದರು. ಅದೇ ರೀತಿ ಬಸವೇಶ್ವರ ಸನ್ನಿಧಿಯಲ್ಲಿ ಇಂದು ಕೇಳಿಕೊಳ್ಳುತ್ತಿದ್ದೇನೆ ಎ ಮಂಜು ಅವರಿಗೆ ಮತ ನೀಡಿ, ಅತಿ ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಬೇಕು. ದೇವೇಗೌಡರ ಜೊತೆ ನಾವೆಲ್ಲರೂ ನಿಲ್ಲಬೇಕು” ಎಂದರು.

“ದೇವೇಗೌಡರು ರಾಜಕೀಯವಾಗಿ ಈ ಮಟ್ಟಕ್ಕೆ ಬೆಳೆಯಬೇಕೆಂದರೆ ಕುಂಚಿಟಿಗ ಸಮಾಜದ ಪಾತ್ರ ಬಹಳಷ್ಟಿದೆ. ಈ ಗ್ರಾಮದ ಜನತೆಗೆ ಯಾವುದೇ ಕೆಲಸ ಆಗಬೇಕು ಎಂದರೂ ಅದನ್ನು ಖಂಡಿತಾ ನೆರವೇರಿಸಿಕೊಡುವೆ” ಎಂದು ಆಶ್ವಾಸನೆ ನೀಡಿದರು.

ಜೆಡಿಎಸ್‌ ಅಭ್ಯರ್ಥಿ ಎ.ಮಂಜು ಮಾತನಾಡಿ, “ಬಿಜೆಪಿ ಮತ್ತು ಕಾಂಗ್ರೆಸ್ ರಾಜ್ಯದಲ್ಲಿ ಸಾಕಷ್ಟು ವರ್ಷಗಳ ಕಾಲ ಆಡಳಿತ ಮಾಡಿದರೂ ಜನಪರ ಆಡಳಿತ ನಡೆಸಿಲ್ಲ. ಜೆಡಿಎಸ್‌ ಈ ಬಾರಿ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆಗಳನ್ನು ಜಾರಿಗೆ ತರುತ್ತೇವೆ. ಹಾಗಾಗಿ ಈ ಬಾರಿ ಜೆಡಿಎಸ್‌ ಅಧಿಕಾರಕ್ಕೆ ಬರಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಬಿಜೆಪಿ-ಜೆಡಿಎಸ್‌ ಮೈತ್ರಿಯ ಸುಳಿವುಕೊಟ್ಟ ಪ್ರೀತಂ ಗೌಡ

“ನಾನು ಶಾಸಕ ಹಾಗೂ ಸಚಿವನಾಗಿದ್ದ ಸಂದರ್ಭದಲ್ಲಿ ಸಾಕಷ್ಟು ಅನುದಾನ ತಂದು ಕ್ಷೇತ್ರದ ಅಭಿವೃದ್ಧಿಗೆ ಸಾಕ್ಷಿಯಾಗಿದ್ದೇನೆ. ನನ್ನ ಕ್ಷೇತ್ರದ ಜನರು ಸ್ವಾಭಿಮಾನಿಗಳು. ಮತ್ತೊಮ್ಮೆ ನನ್ನನ್ನು ಆಶೀರ್ವದಿಸುವರು”  ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಆಪರೇಷನ್ ಹಸ್ತದ ಬಗ್ಗೆ ಲಕ್ಷ್ಮಣ್ ಸವದಿ ಮಾರ್ಮಿಕ ಹೇಳಿಕೆ

ಬಹಳಷ್ಟು ಮಂದಿ ಜೆಡಿಎಸ್‌-ಬಿಜೆಪಿ ತೊರೆದು ಕಾಂಗ್ರೆಸ್‌ಗೆ ಬರುಲು ಸಿದ್ದರಾಗಿದ್ದಾರೆ. ಎಲ್ಲದಕ್ಕೂ ಕಾಲ...

ಚಾಮರಾಜನಗರ | ಚೈನ್ನೈ ಮೂಲದ ವೈದ್ಯೆ ಅನುಮಾನಾಸ್ಪದ ಸಾವು

ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ವೈದ್ಯೆ ಡಾ. ಸಿಂಧುಜಾ (28) ಅನುಮಾನಾಸ್ಪವಾಗಿ...

ಬೀದರ್‌ | ಸೀತಾಫಲ ಹಣ್ಣಿಗೆ ಭಾರೀ ಬೇಡಿಕೆ; ಬೇಕಿದೆ ಮಾರುಕಟ್ಟೆ ಸೌಲಭ್ಯ

ಸೀತಾಫಲ ಹಣ್ಣು ತಿನ್ನಲು ತುಂಬಾ ರುಚಿಕರ ಹಾಗೂ ಅಷ್ಟೇ ಸ್ವಾದಿಷ್ಟ, ರೋಗ...

ಕಾವೇರಿ ವಿವಾದ | ತಮಿಳು ನಟ ಸಿದ್ಧಾರ್ಥ್‌ ಕ್ಷಮೆ ಕೇಳಿದ ನಟ ಶಿವರಾಜ್‌ಕುಮಾರ್

ತಮಿಳು ನಟ ಸಿದ್ಧಾರ್ಥ್‌ ಅವರ ಸುದ್ದಿಗೋಷ್ಠಿಗೆ ಬೆಂಗಳೂರಿನಲ್ಲಿ ಕನ್ನಡ ಪರ ಸಂಘಟನೆಗಳ...