ಕೊಡಗು | ಮೇ.13ರಂದು ವಿರಾಜಪೇಟೆಯ ತೋರದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’

Date:

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಅರೆಭಾಷೆ ಸಂಸ್ಕೃತಿ ಮತ್ತು ಅಭಿವೃದ್ಧಿ ಸಂಘ ಕೆದಮುಳ್ಳೂರು(ತೋರ) ವಿರಾಜಪೇಟೆ ಇವರ ಸಂಯುಕ್ತಾಶ್ರಯದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ-2026’ ಕಾರ್ಯಕ್ರಮವು ಮೇ 13ರಂದು ಬೆಳಗ್ಗೆ 9 ಗಂಟೆಗೆ ತೋರ ಸಮುದಾಯ ಭವನದಲ್ಲಿ ನಡೆಯಲಿದೆ.

- Advertisement -

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಟಿ.ಎಂ. ಧರ್ಮಜ ಉತ್ತಪ್ಪ, ವಿರಾಜಪೇಟೆ ಗೌಡ ಸಮಾಜದ ಅಧ್ಯಕ್ಷರಾದ ಮುಕ್ಕಾಟಿ ವಾಸು ಗಣಪತಿ, ಕೆದಮುಳ್ಳೂರು ಅರೆಭಾಷೆ ಸಂಸ್ಕೃತಿ ಮತ್ತು ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಪೊಕ್ಕುಳಂಡ್ರ ಎಸ್. ದಿನೇಶ್ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಇದೇ ವೇಳೆ ಕೆದಮುಳ್ಳೂರು ಸಮಾಜ ಸೇವಕರಾದ ಗೌಡುದಾರೆ ಚೋಟು ಬಿದ್ದಪ್ಪ, ಮಡಿಕೇರಿ ಕೊಡಗು ಗೌಡ ಸಮಾಜದ ನಿರ್ದೇಶಕರಾದ ತೋಟಂಬೈಲು ಕುಮಾರ, ನರಿಯಂದಡ ಅಯ್ಯಪ್ಪ ಯುವಕ ಸಂಘದ ಅಧ್ಯಕ್ಷರಾದ ಬೊಳಿಯಂಡ್ರ ಹರಿಪ್ರಸಾದ್, ಕೆದಮುಳ್ಳೂರು ಜಾನಪದ ವಿಭಾಗದ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಕೆ.ಬಿ. ಅಮ್ಮುಣಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ.

ಈ ಸುದ್ದಿ ಓದಿದ್ದೀರಾ?ಕೊಡಗು | ಮಾನವ-ವನ್ಯಜೀವಿ ಸಂಘರ್ಷ ತಡೆಗೆ ತಜ್ಞರ ಮಟ್ಟದಲ್ಲಿ ಚರ್ಚೆ ಅಗತ್ಯ: ಈಶ್ವರ ಖಂಡ್ರೆ

ಕಾರ್ಯಕ್ರಮದ ಸದಸ್ಯ ಸಂಚಾಲಕರಾಗಿ ಸೂದನ ಎಸ್. ಈರಪ್ಪ, ಪೂಳಕಂಡ ಸಂದೀಪ್ ಎಂ., ಮೋಹನ್ ಪೊನ್ನಚನ ಕಾರ್ಯನಿರ್ವಹಿಸಲಿದ್ದು, ಸದಸ್ಯರಾದ ಚಂದ್ರಶೇಖರ್ ಪೇರಾಲು, ಪಿ.ಎಸ್. ಕಾರ್ಯಪ್ಪ, ಕುದುಪಜೆ ಕೆ. ಪ್ರಕಾಶ್, ತೇಜಕುಮಾರ್ ಕುಡೆಕಲ್ಲು, ಲೋಕೇಶ್ ಊರುಬೈಲು, ಡಾ. ಎನ್.ಎ. ಜ್ಞಾನೇಶ್, ಚಂದ್ರಾವತಿ ಬಡ್ಡಡ್ಕ, ಲತಾ ಪ್ರಸಾದ್ ಕುದ್ಪಾಜೆ ಹಾಗೂ ವಿನೋದ್ ಮೂಡಗದ್ದೆ ಭಾಗವಹಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ?ಕೊಡಗು | ಮೇ.26ರಂದು ವಿರಾಜಪೇಟೆಯಲ್ಲಿ ನುಡಿ ಉತ್ಸವ: ಭಾಷಾ ನೀತಿ ಕುರಿತ ವಿಚಾರ ಸಂಕಿರಣ

ಉತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ನಡೆಯಲಿದ್ದು, ಸ್ಥಳೀಯರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿ ಪಡೆದ ಹಾಸ್ಯ ಕಲಾವಿದ ಜೀವನ್ ಕೆರಮೋಲೆ ಅವರಿಂದ ‘ನಗೆ ಚಟಾಕಿ’ ವಿಶೇಷ ಹಾಸ್ಯ ಕಾರ್ಯಕ್ರಮ ಆಯೋಜಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...

ಕಲಬುರಗಿ | ಸಿಇಸಿ ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ: ಎಸ್‌ಐಆರ್ ಸ್ಥಗಿತಕ್ಕೆ ಸಿಪಿಐ ಒತ್ತಾಯ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿಯ...

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...