ಕೋಲಾರ | ಫೆ.15ರಂದು ಅರಿವು ಭಾರತ ಸಮಾಜ ಸುಧಾರಣೆಯ ದಶಮಾನೋತ್ಸವ ಕಾರ್ಯಕ್ರಮ

Date:

Advertisements

ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಫೆ.15ರ ಶನಿವಾರ ಅರಿವು ಭಾರತ ಸಮಾಜ ಸುಧಾರಣೆಯ ದಶಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿಗಳಾದ ಎಚ್.ಎನ್.ನಾಗಮೋಹನದಾಸ್‌ ಅವರು ಬೆಳಗ್ಗೆ 10ಗಂಟೆಗೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಒಳ-ಹೊರಗು: ಹತ್ತು ವರ್ಷಗಳ ನೆನಪಿನ ಕೃತಿಯನ್ನು ಬಿಡುಗಡೆ ಮಾಡಲಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ಫೋಟೋ ಪ್ರದರ್ಶನಕ್ಕೆ ಉದ್ಘಾಟನೆ ನೀಡಲಿದ್ದು, ಕೋಲಾರ ನಗರ ಶಾಸಕ ಕೊತ್ತೂರು ಮಂಜುನಾಥ್‌ ಕಾರ್ಯಕ್ರಮದ ಅಧ್ಯಕ್ಷತೆವಹಿಸಲಿದ್ದಾರೆ.

Advertisements
ಅರಿವು ಭಾರತ 1

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಡಾ.ತ್ರಿಲೋಕಚಂದ್ರ ಅವರು ಅರಿವು ಅಭಿಯಾನದ ಕುರಿತು ಮಾತನಾಡಲಿದ್ದು, ಪ್ರಜಾವಾಣಿ ಮೈಸೂರು ಬ್ಯೂರೋ ಮುಖ್ಯಸ್ಥರಾದ ಕೆ.ನರಸಿಂಹ ಮೂರ್ತಿ ಅವರು ಒಳ-ಹೊರಗು ಕೃತಿ ಕುರಿತು ಮಾತನಾಡಲಿದ್ದಾರೆ.

ಮಾಲೂರು ಶಾಸಕ ಕೆ ವೈ ನಂಜೇಗೌಡ, ಬಂಗಾರಪೇಟೆ ಶಾಸಕ ಎಸ್‌ ಎನ್‌ ನಾರಾಯಣಸ್ವಾಮಿ, ಕೆಜಿಎಫ್‌ ಶಾಸಕಿ ರೂಪಕಲಾ ಶಶಿಧರ್‌, ವಿಪ ಸದಸ್ಯರಾದ ನಸೀರ್‌ ಅಹಮದ್‌, ಅನಿಲ್‌ ಕುಮಾರ್‌, ಪ್ರಗತಿಪರ ಚಿಂತಕರಾದ ಅನಂತ್‌ ನಾಯಕ್‌, ದಸಂಸ ಮುಖಂಡ ವಿಜಯ್‌ ಕುಮಾರ್‌, ಭೀಮಸೇನೆ ರಾಜ್ಯಾಧ್ಯಕ್ಷ ಪಂಡಿತ್‌ ಮುನಿವೆಂಕಟಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಅರಿವು ಭಾರತ ಸಂಸ್ಥೆಯ ಮುಖ್ಯಸ್ಥರಾದ ಅರಿವು ಶಿವಪ್ಪ‌ ಅವರು ಸಮಾರಂಭದ ಕುರಿತು ಆಶಯ ನುಡಿಗಳನ್ನಾಡಲಿದ್ದಾರೆ.

ಇದನ್ನೂ ಓದಿದ್ದೀರಾ? ಈ ದಿನ ಸಂಪಾದಕೀಯ | ಮೆಟ್ರೋ ದರ ಏರಿಕೆ- ‘ಸತ್ತಂತೆಯೂ ಅತ್ತಂತೆಯೂ’ ಆಡುತ್ತಿರುವ ಈ ನಾಟಕ ನಿಲ್ಲಲಿ

ಮಧ್ಯಾಹ್ನ 2 ಗಂಟೆಗೆ ಅಸ್ಪೃಶ್ಯ ಆಚರಣೆಗಳು ಮತ್ತು ನಿವಾರೋಪಾಯಗಳು ಹಾಗೂ ಅಸ್ಪೃಶ್ಯತೆ ನಿರ್ಮೂಲನೆಯಲ್ಲಿ ಯುವಜನರ ಪಾತ್ರ ಕುರಿತ ವಿಚಾರಗೋಷ್ಠಿಗಳು ನಡೆಯಲಿದ್ದು, ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅಧ್ಯಕ್ಷತೆವಹಿಸಲಿದ್ದಾರೆ. ನಂತರ 3.30ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X