ಕಲಬುರಗಿ | ಹೊನಗುಂಟಾ ಗ್ರಾಮಕ್ಕೆ ಸೂಕ್ತ ಸಮಯಕ್ಕೆ ಬಸ್ ಕಲ್ಪಿಸಲು ಆಗ್ರಹ

Date:

ಶಹಾಬಾದ್‌ ತಾಲೂಕಿನ ಹೊನಗುಂಟ ಗ್ರಾಮಕ್ಕೆ ಸೂಕ್ತ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹಿಸಿ ಶಹಬಾದ್‌ ಪಟ್ಟಣದ ನೆಹರು ವೃತ್ತದಲ್ಲಿ ಎಐಡಿಎಸ್‍ಒ ನೇತ್ರತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

- Advertisement -

ಎಐಡಿಎಸ್‍ಒ ಶಹಾಬಾದ್ ತಾಲೂಕು ಉಪಾಧ್ಯಕ್ಷ ದೇವರಾಜ್ ಎಸ್. ಮಾತನಾಡಿ, ʼಕಳೆದ ಹಲವು ವರ್ಷಗಳಿಂದ ಹೊನಗುಂಟಾ ಗ್ರಾಮಕ್ಕೆ ಸೂಕ್ತ ಸಮಯಕ್ಕೆ ಬಸ್ ವ್ಯವಸ್ಥೆ ಇಲ್ಲದ ಕಾರಣ ಗ್ರಾಮದ ನೂರಾರು ವಿದ್ಯಾರ್ಥಿಗಳು‌ ಪ್ರಯಾಣಿಸಲು ಪರದಾಡುತ್ತಿದ್ದಾರೆ. ಶಹಾಬಾದ, ಕಲಬುರಗಿ, ಜೇವರ್ಗಿ, ಚಿತ್ತಾಪೂರ ಸೇರಿದಂತೆ ವಿವಿಧೆಡೆ ಕಾಲೇಜುಗಳಿಗೆ ತೆರಳಲು ತೊಂದರೆಯಾಗುತ್ತಿದೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ʼಬಸ್‌ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ತರಗತಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಶೈಕ್ಷಣಿಕ ವರ್ಷದ ಆರಂಭದಲ್ಲಿ ಬಸ್ ಸಮಸ್ಯೆ ಕುರಿತು ಸಾರಿಗೆ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನೆವಾಗುತ್ತಿಲ್ಲʼ ಎಂದು ಅಸಮಧಾನ ವ್ಯಕ್ತಪಡಿಸಿದರು.

ಎಐಡಿಎಸ್‍ಓ ಜಿಲ್ಲಾ ಸಮಿತಿ ಸದಸ್ಯರಾದ ಸ್ಪೂರ್ತಿ ಅರ್.ಜಿ. ಮಾತನಾಡಿ, ʼಸೂಕ್ತ ಸಮಯಕ್ಕೆ ಬಸ್‌ ಬಾರದ ಕಾರಣ ವಿದ್ಯಾರ್ಥಿಗಳು ಹಣ ಕೊಟ್ಟು ಖಾಸಗಿ ವಾಹನಗಳಿಗೆ ಹೋಗಬೇಕಾದ ಪರಿಸ್ಥಿತಿ ಬಂದೊದಗಿದೆ. ವಿದ್ಯಾರ್ಥಿಗಳ ಬಳಿ ಉಚಿತ ಬಸ್ ಪಾಸ್ ಇದ್ದರೂ ಹಣ ಖರ್ಚು ಮಾಡಬೇಕಾಗುತ್ತಿದೆ. ಅದರಲ್ಲಿ ಬಡ ವಿದ್ಯಾರ್ಥಿಗಳಿಗೆ ಹಣ ಕೊಟ್ಟು ಖಾಸಗಿ ವಾಹನಗಳಿಗೆ ತೆರಳಲು ಆಗುತ್ತಿಲ್ಲʼ ಎಂದರು.

ʼಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಹೊನಗುಂಟಾ ಗ್ರಾಮದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ಹಂತದ ಹೋರಾಟಕ್ಕೆ ಅಧಿಕಾರಿಗಳೇ ನೇರ ಹೊಣೆಯಾಗುತ್ತಾರೆʼ ಎಂದು ಎಚ್ಚರಿಸಿದರು.

ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಜಗದೀಶ್. ಚೌರ್ ಮನವಿ ಸ್ವೀಕರಿಸಿ ಬಸ್‌ ಘಟಕದ ನಿಯಂತ್ರಣಾಧಿಕಾರಿ ಜೊತೆ ಮಾತನಾಡಿ ನಾಳೆಯಿಂದಲೇ ಬಸ್ ಸೌಲಭ್ಯ ಒದಗಿಸಲಾಗುವುದುʼ ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬಿಗ್‌ ಬ್ರೇಕಿಂಗ್‌: ಎಚ್‌ಡಿಕೆ ಪ್ರಾಸಿಕ್ಯೂಷನ್‌ಗೆ ಎಸ್‌ಐಟಿ ಮನವಿಯನ್ನು 10 ತಿಂಗಳಿಂದ ಬಚ್ಚಿಟ್ಟಿದ್ದ ರಾಜ್ಯಪಾಲ

ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ತುಳಜರಾಮ ಎನ್.ಕೆ, ಶಹಾಬಾದ್ ಕಾರ್ಯದರ್ಶಿ ಅಜಯ್ ಗುರುಜಾಲ್‌ಕರ್, ಸದಸ್ಯರಾದ ಸಿದ್ಧಾರ್ಥ, ಬಾಬುಪವಾರ್, ಚೇತನ್ ಹಾಗೂ ವಿದ್ಯಾರ್ಥಿಗಳಾದ ಮಿಲಿನ್, ಲಿಂಗರಾಜ್, ರೇಖಾ, ಸ್ನೇಹಾ, ಜ್ಯೋತಿ, ಸಂತೋಷ, ದ್ರಾವಿಡ್ ಸೇರಿ ಹಲವಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...