ರಾಯಚೂರು | ವಸತಿಶಾಲೆ ಕಾರ್ಮಿಕರ ಬಾಕಿ ವೇತನ ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಟಿಯುಸಿಐ ಒತ್ತಾಯ

Date:

ರಾಯಚೂರು ಜಿಲ್ಲೆಯ ವಸತಿಶಾಲೆ ಕಾರ್ಮಿಕರ ಬಾಕಿ ವೇತನ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂದು ಟಿಯುಸಿಐ ವತಿಯಿಂದ ರಾಯಚೂರು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಮನವಿ ಸಲ್ಲಿಸಿದರು.

- Advertisement -

“ಕಳೆದ 15-20 ವರ್ಷಗಳಿಂದ ವಸತಿಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಕಡಿಮೆ ವೇತನ ನೀಡಲಾಗುತ್ತಿದೆ. ಸೌಲಭ್ಯಗಳಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಕಾರ್ಮಿಕ ಇಲಾಖೆ ತುಟ್ಟಿ ಭತ್ಯೆ ಹೆಚ್ಚುವರಿ ಕೆಲಸಕ್ಕೆ ಓಟಿ ನೀಡದೇ ಕೆಲಸ ಮಾಡಿಸಿಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

“ಕಾರ್ಮಿಕರಿಗೆ ನೀಡುವ ವೇತನವನ್ನೂ ಸರಿಯಾಗಿ ನೀಡಿಲ್ಲ. ಇದೀಗ ಕಳೆದ 5 ತಿಂಗಳ ಬಾಕಿ ವೇತನ ಪಾವತಿ ಮಾಡಿಲ್ಲ. ಜತೆಗೆ ಕಳೆದ 2017ರಿಂದ ಪ್ರತಿ ವರ್ಷ ಹೆಚ್ಚಳಗೊಂಡಿದ್ದ 7 ವರ್ಷಗಳ ಹಿಂಬಾಕಿ ವೇತನವನ್ನೂ ಪಾವತಿಸಿಲ್ಲ. ಕಾರ್ಮಿಕರಿಗೆ ಹಬ್ಬ ಹರಿದಿನಗಳಲ್ಲಿ ಇತರೆ ಕೆಲಸ ಕಾರ್ಯಕ್ಕಾಗಿ ರಜೆ ಪಡೆಯಲು ಸಾಧ್ಯವಾಗುತ್ತಿಲ್ಲ. ವಾರದ ರಜೆ ಮತ್ತು ಹಬ್ಬದ ದಿನಗಳಲ್ಲಿ ರಜೆ ನೀಡಬೇಕು” ಎಂದು ಒತ್ತಾಯಿಸಿದರು.

“ಕೆಲಸದ ಸಂದರ್ಭದಲ್ಲಿ ಹೆಚ್ಚುವರಿ ಕೆಲಸ ಮಾಡಿಸಿಕೊಳ್ಳುತ್ತಿದ್ದು, ಓಟಿ ವೇತನ ನೀಡುತ್ತಿಲ್ಲ. ಅದನ್ನು ಕೂಡಲೇ ನೀಡಬೇಕು. ಮಾಸಿಕ ವೇತನವನ್ನು ಮೊದಲ ವಾರದಲ್ಲಿ ಪಾವತಿಯಾಗುವಂತೆ ಕ್ರಮ ವಹಿಸಬೇಕು. ಪಿಎಫ್ ಮತ್ತು ಇಎಸ್‌ಐ ಸೌಲಭ್ಯ ಕಲ್ಪಿಸಬೇಕು. 15 ವರ್ಷದ ಸೇವಾ ಪ್ರಮಾಣ ಪತ್ರ ನೀಡಬೇಕು. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ವಿಧಿಸಿದ ಷರತ್ತುಗಳನ್ನು ರದ್ದು ಮಾಡಬೇಕು ಹಾಗೂ ನಿವೃತ್ತಿ ನಂತರ ಪಿಂಚಣಿ, ಇಡಿಗಂಟು ನೀಡಬೇಕು” ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ತುಮಕೂರಿಗೆ ಹೆಚ್ಚುವರಿ ರೈಲು ಸಂಚಾರಕ್ಕೆ ಆಗ್ರಹಿಸಿ ಕೇಂದ್ರ ಸಚಿವ ವಿ ಸೋಮಣ್ಣಗೆ ಮನವಿ

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಜಿ ಅಮರೇಶ, ಜಿಲ್ಲಾಧ್ಯಕ್ಷ ಹುಸೇನಪ್ಪ, ಲಾಳೆಸಾಬ್, ಶಿವರಾಜ ಆಲ್ಕೋಡ್, ಹುಸೇನಪ್ಪ ಸಿರವಾರ, ಹನುಮಂತ ಮಸ್ಕಿ, ಮಹಮ್ಮದ್ ಇಬ್ರಾಹಿಂ, ರಫಿ ಸಿಂಗನೋಡಿ, ರಂಗನಾಥ, ಕಮಲಮ್ಮ, ಸೋಮಣ್ಣ, ದೇವಮ್ಮ ಸೇರಿದಂತೆ ಬಹುತೇಕರು ಇದ್ದರು.

ವರದಿ : ಹಫೀಜುಲ್ಲ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ ಕಂಗಾಲಾದ ಬಡ ಕಾರ್ಮಿಕರು

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM...

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ...