ಬೀದರ್‌ | ದರೋಡೆಗೆ ಸಂಚು ರೂಪಿಸಿದ್ದ ನಾಲ್ವರ ಬಂಧನ

Date:

ಭಾಲ್ಕಿ-ಹುಮನಾಬಾದ್ ರಸ್ತೆಯ ಧರಿ ಸಿದ್ದೇಶ್ವರ್ ಮಂದಿರದ ಬಳಿ ಮಾರಕಾಸ್ತ್ರ ಹಿಡಿದು ದರೋಡೆಗೆ ಸಂಚು ರೂಪಿಸಿದ್ದ ನಾಲ್ವರು ಆರೋಪಿಗಳನ್ನು ಖಟಕ ಚಿಂಚೋಳಿ ಪೊಲೀಸರು ಬಂಧಿಸಿದ್ದಾರೆ.

- Advertisement -

“ಬಂಧಿತ ನಾಲ್ಕು ಜನ ಆರೋಪಿಗಳಿಂದ ಹರಿತವಾದ ತಲ್ವಾರ್, ಮಚ್ಚು, ಕಬ್ಬಿಣದ ಪೈಪ್ ಹಾಗೂ ಖಾರದ ಪುಡಿ ವಶ ಪಡಿಸಿಕೊಳ್ಳಲಾಗಿದೆ. ನಾಲ್ಕರಲ್ಲಿ ಇಬ್ಬರ ಮೇಲೆ ಈ ಮೊದಲು ಮಾರಣಾಂತಿಕ ಹಲ್ಲೆ, ಸುಲಿಗೆ, ಮನೆ ಕಳ್ಳತನ ಪ್ರಕಣಗಳು ದಾಖಲಾಗಿದ್ದು, ತಪ್ಪಿಸಿಕೊಂಡ ಓರ್ವ ಆರೋಪಿತನ ಮೇಲೆ ಗುಂಡಾ ಕಾಯ್ದೆ ಅಡಿಯಲ್ಲಿ ಕಳೆದ ವರ್ಷ ಕ್ರಮ ಕೈಕೊಳ್ಳಲಾಗಿತ್ತು” ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಸೋಮವಾರ ತಡರಾತ್ರಿ ದರೋಡೆಗೆ ಸಂಚು ರೂಪಿಸಿದ್ದ ಐದು ಜನ ಆರೋಪಿಗಳು ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದು ವಾಹನಗಳಿಗೆ ಸಂಚು ಹಾಕುತ್ತಿದ್ದ ಖಚಿತ ಮಾಹಿತಿ ಮೇರೆಗೆ ಭಾಲ್ಕಿ ಗ್ರಾಮೀಣ ಠಾಣೆ ಪಿಎಸ್‌ಐ ಹಣಮಂತ ಹಾಗೂ ಸಿಬ್ಬಂದಿ ನಡೆದ ಕಾರ್ಯಾಚರಣೆಯಲ್ಲಿ ಐವರ ಪೈಕಿ ನಾಲ್ವರನ್ನುಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸುಸ್ತಿ ಸಾಲಗಳ ಬಡ್ಡಿ ಮನ್ನಾ; ಅವಧಿ ವಿಸ್ತರಿಸಲು ರೈತ ಸಂಘ ಆಗ್ರಹ

ಈ ಸಂಬಂಧ ಖಟಕ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಲ್ಕು ಜನ ಡಕಾಯತರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ ಅಧಿಕಾರಿ, ಸಿಬ್ಬಂದಿಯವರ ಪ್ರಶಂಸನಿಯ ಕಾರ್ಯಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ ನಗದು ಬಹುಮಾನ ನೀಡಿ ಶ್ಲಾಘಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್ ದಕ್ಷಿಣ | ಜಿಪಂ ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿಗೆ ಅನ್ಯಾಯ: ಜನಪ್ರತಿನಿಧಿಗಳಿಗೆ ಎಚ್ಚರಿಕೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರು ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಲ್ಲಿ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...