ಚಿತ್ರದುರ್ಗ | ಸೇನೆಯಲ್ಲಿ ಉದ್ಯೋಗ ಕೊಡಿಸುತ್ತೇನೆಂದು 150 ಜನರಿಗೆ ವಂಚನೆ; ಆರೋಪಿ ಬಂಧನ

Date:

ಭಾರತೀಯ ಸೇನೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 150 ಯುವಕರಿಂದ ಒಂದು ಕೋಟಿ ರೂ.ಗೂ ಅಧಿಕ ಹಣ ಪಡೆದು ವಂಚಿಸಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿ ಮೂಲದ ಶಿವರಾಜ್ ವಟಗಲ್ ಮತ್ತು ಆತನ ಸಂಗಾತಿ ಭೀಮವ್ವ ವಿರುದ್ಧ ಚಿತ್ರದುರ್ಗದ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

- Advertisement -

ಮೂಲತಃ ದಾವಣಗೆರೆ ಜಿಲ್ಲೆಯವನಾದ ಆರೋಪಿ ಶಿವರಾಜ್ ವಟಗಲ್ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಿದ್ದೇನೆ ಎಂದು ಸುಳ್ಳು ಹೇಳಿ ಯುವಕರನ್ನು ನಂಬಿಸುತ್ತಿದ್ದ. ನಂಬಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದ. ಭಾರತೀಯ ಸೇನೆ, ವಾಯುಸೇನೆ ಹಾಗೂ ನೌಕಾಪಡೆಯಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಹಣ ತೆಗೆದುಕೊಳ್ಳುತ್ತಿದ್ದ. ಈತನಿಂದ ವಂಚನೆಗೆ ಒಳಗಾದ ಪ್ರಕಾಶ್ ಎಂಬುವವರು  ಶಿವರಾಜ್ ವಟಗಲ್ ವಿರುದ್ಧ ಚಿತ್ರದುರ್ಗದ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮತ್ತು ಮಿಲಿಟರಿ ಗುಪ್ತಚರ ದಳ ಜಂಟಿಯಾಗಿ ಕಾರ್ಯಾಚರಣೆಗಿಳಿದಿತ್ತು. ಅಕ್ಟೋಬರ್ 20ರಂದು ಚಿತ್ರದುರ್ಗದಲ್ಲಿ ವಂಚಕ ಶಿವರಾಜ್​ ಮತ್ತು ಆತನ ಸಂಗಾತಿ ಭೀಮವ್ವರನ್ನು ಬಂಧಿಸಿ, ಆತನ ಬಳಿ ಇದ್ದ ನಕಲಿ ಗುರುತಿನ ಚೀಟಿಗಳು ಮತ್ತು ಸೇನಾ ನೇಮಕಾತಿ ಸಂಬಂಧಿತ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ದಾವಣಗೆರೆ, ಚಿತ್ರದುರ್ಗ ಮಾತ್ರವಲ್ಲದೇ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಶಿವರಾಜ ವಂಚನೆ ಮಾಡಿರುವುದು ಬಯಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ...

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಗದಗ | ಕರ್ನಾಟಕ ಏಕೀಕರಣಕ್ಕಾಗಿ ನಾರಾಯಣರಾವ್ ಕೋಡುಗೆ ಅಪಾರ: ಹನುಮಂತಪ್ಪ ಅಬ್ಬಿಗೇರಿ

"ಕರ್ನಾಟಕ ಏಕೀಕರಣಕ್ಕಾಗಿ ಗದಗ ಜಿಲ್ಲೆಯ ಹುಯಿಲಗೋಳ ನಾರಾಯಣರಾವ್ ಅವರ ಕೊಡುಗೆ ಅಪಾರವಾಗಿದೆ....