ಬಿಬಿಎಂಪಿಯಲ್ಲಿ ಮಾರ್ಷಲ್‌ ನೌಕರಿ ಕೊಡಿಸುವುದಾಗಿ ವಂಚಿಸಿದ್ದ ಆರೋಪಿಯ ಬಂಧನ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯಲ್ಲಿ ಮಾರ್ಷಲ್ ನೌಕರಿಯನ್ನು ಕೊಡಿಸುವುದಾಗಿ 200ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಂದ ಹಣ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹಲಸೂರುಗೇಟ್ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- Advertisement -

ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಇಲಾಖೆ (ಎಕ್ಸ್‌) ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದು, “ಬಿಬಿಎಂಪಿಯಲ್ಲಿ ಮಾರ್ಷಲ್ ನೌಕರಿಯನ್ನು ಕೊಡಿಸುವುದಾಗಿ 200ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಂದ ಹಣ ಪಡೆದು, ವಂಚಿಸುತ್ತಿದ್ದ ಆರೋಪಿಯನ್ನು ಹಲಸೂರುಗೇಟ್ ಠಾಣೆ ಪೊಲೀಸ್ ಇನ್ಸ್‌ಪೆಕ್ಟರ್ ಹನುಮಂತ ಭಜಂತ್ರಿ ಹಾಗೂ ಸಿಬ್ಬಂದಿ ಬಂಧಿಸಿದ್ದಾರೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಆರೋಪಿಯು ಬಿಬಿಎಂಪಿಯಲ್ಲಿ ತಾನು ಕೆಲಸ ಮಾಡಿಕೊಂಡಿರುವುದಾಗಿ ಸಂತ್ರಸ್ತರಿಗೆ ಹೇಳಿ ನಂಬಿಸಿದ್ದಾನೆ. ಬಿಬಿಎಂಪಿಯಲ್ಲಿ ನೇರ ನೇಮಕಾತಿ ಮೂಲಕ ಮಾರ್ಷಲ್‌ ನೌಕರಿಗೆ, ನೇಮಕ ಮಾಡಿಕೊಳ್ಳಲಾಗುತ್ತಿದೆ. ₹3,000 ಹಣವನ್ನು ನೀಡಿದರೆ, ನೇಮಕಾತಿ ಮಾಡಿಸುವುದಾಗಿ ನಂಬಿಸಿ, 200ಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳಿಂದ ₹3,000 ಹಣವನ್ನು ಫೋನ್ ಪೇ ಮೂಲಕ ಪಡೆದುಕೊಂಡಿದ್ದಾನೆ” ಎಂದು ತಿಳಿಸಿದೆ.

“ಅಲ್ಲದೇ, ನೇಮಕಾತಿ ಆದೇಶದ ನಕಲಿ ಪ್ರತಿಗಳನ್ನು ಸೃಷ್ಟಿಸಿ, ಅವುಗಳನ್ನೇ ಅಸಲಿ ಆದೇಶ ಪತ್ರಗಳೆಂದು ಬಿಂಬಿಸಿ, ವಾಟ್ಸಆಪ್ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಕಳುಹಿಸಿಕೊಟ್ಟಿದ್ದಾನೆ” ಎಂದು ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 18 ಮಾದರಿಯಲ್ಲಿ ​​​ಸೈಬರ್​​ ಕ್ರೈಂ; ಬರೋಬ್ಬರಿ ₹470 ಕೋಟಿ ವಂಚನೆ

ಈ ಕುರಿತು ಹಲಸೂರುಗೇಟ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದೂರಿನ ಮೇರೆಗೆ ತನಿಖೆ ಕೈಗೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿ, ಆತನಿಂದ ಅಗತ್ಯ ದಾಖಲೆಗಳನ್ನು‌ ವಶಪಡಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...