ವಿಶ್ವ ಶಿಟೊರಿಯೋ ಕರಾಟೆ ಮಂಡಳಿ ನಿರ್ದೇಶಕರಾಗಿ ಅರುಣ್ ಮಾಚಯ್ಯ ಆಯ್ಕೆ

Date:

ವಿಶ್ವ ಶಿಟೋರಿಯೋ ಕರಾಟೆ ಮಂಡಳಿಯ ನೂತನ ಸ್ಟ್ಯಾಂಡಿಂಗ್ ನಿರ್ದೇಶಕರಾಗಿ ಅಖಿಲ ಭಾರತ ಶಿಟೋರಿಯೋ ಕರಾಟೆ ಸಂಸ್ಥೆಯ ಅಧ್ಯಕ್ಷ, ಭಾರತದ ಹಿರಿಯ ಕರಾಟೆಪಟು ಕೊಡಗಿನ ಚೆಪ್ಪುಡಿರ ಎಸ್ ಅರುಣ್ ಮಾಚಯ್ಯ ಆಯ್ಕೆಯಾಗಿದ್ದಾರೆ.

ಇಂಡೋನೇಷ್ಯಾದಲ್ಲಿ ನಡೆಯುತ್ತಿರುವ 10ನೇ ಅಂತರಾಷ್ಟ್ರೀಯ ಶಿಟೋರಿಯೋ ಕರಾಟೆ ಚಾಂಪಿಯನ್ಶಿಪ್‌ನ ಅಂಗವಾಗಿ ವಿಶ್ವ ಶಿಟೋರಿಯೋ ಕರಾಟೆ ಮಂಡಳಿಯ ಚುನಾವಣಾ ಪ್ರಕ್ರಿಯೆ ಸಭೆ ನಡೆದಿದೆ. ಸಭೆಯಲ್ಲಿ ಅರುಣ್ ಮಾಚಯ್ಯ ಅವರನ್ನು ಏಷ್ಯಾ ಮತ್ತು ಪೆಸಿಫಿಕ್ ಖಂಡದ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ, ಈ ಬಗ್ಗೆ ಕರಾಟೆ ಮಂಡಳಿಯ ಅಧ್ಯಕ್ಷ ಕೆನ್ ಜೋ ಈವಾಟ್ ಅವರು ಪ್ರಕಟಿಸಿದ್ದಾರೆ.

ಅರುಣ್ ಮಾಚಯ್ಯ ಅವರು ಮುಂದಿನ ಮೂರು ವರ್ಷಗಳ ಕಾಲ ವಿಶ್ವ ಶಿಟೋರಿಯೋ ಕರಾಟೆ ಮಂಡಳಿಯ ಸ್ಟ್ಯಾಂಡಿಂಗ್ ನಿರ್ದೇಶಕರಾಗಿ ವಿಶ್ವಮಟ್ಟದಲ್ಲಿ ಏಷ್ಯಾ ಮತ್ತು ಪೆಸಿಫಿಕ್ ಖಂಡವನ್ನು ಪ್ರತಿನಿಧಿಸಲಿದ್ದಾರೆ. ಈ ಹಿಂದೆಯೂ ಇವರು 1996ರಿಂದ 2002ರವರೆಗೆ ಇದೇ ಹುದ್ದೆಯನ್ನು ಅಲಂಕರಿಸಿದ್ದರು. ಇದೀಗ 2ನೇ ಬಾರಿಗೆ ಆಯ್ಕೆಯಾಗಿದ್ದಾರೆ. ಅಲ್ಲದೆ ವಿಶ್ವ ಕರಾಟೆ ಮಂಡಳಿಯಲ್ಲಿ 2ನೇ ಬಾರಿಗೆ ನಿರ್ದೇಶಕರಾಗಿರುವ ಭಾರತದ ಮೊದಲ ಕರಾಟೆಪಟು ಎಂಬ ಹೆಗ್ಗಳಿಕೆಗೂ ಅರುಣ್ ಮಾಚಯ್ಯ ಪಾತ್ರರಾಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಳೆದ ಐದು ದಶಕಗಳಿಂದ ಕರಾಟೆ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿ ಅದರ ಉನ್ನತಿಗೆ ಕಾರಣರಾಗಿರುವ ಅರುಣ್ ಮಾಚಯ್ಯ ಅವರು, ಪ್ರಸ್ತುತ ಅಖಿಲ ಭಾರತ ಶಿಟಾರಿಯೋ ಕರಾಟೆ ಸಂಸ್ಥೆಯ ಮತ್ತು ದಕ್ಷಿಣ ಭಾರತ ಕರಾಟೆ ಫೆಡರೇಷನ್ ಅಧ್ಯಕ್ಷರಾಗಿ, ಕರಾಟೆ ಇಂಡಿಯಾ ಆರ್ಗನೈಜೇಷನ್ ಹಿರಿಯ ಉಪಾಧ್ಯಕ್ಷರಾಗಿ, ಅಖಿಲ ಕರ್ನಾಟಕ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಅಂತರಾಷ್ಟ್ರೀಯ ಕರಾಟೆ ತೀರ್ಪುಗಾರರಾಗಿರುವ ಸಿ.ಎಸ್. ಅರುಣ್ ಮಾಚಯ್ಯ ಅವರು ಕರಾಟೆಯಲ್ಲಿ 8ನೇ ಡ್ಯಾನ್ ಬ್ಲಾಕ್ ಬೆಲ್ಟ್ ಪದವೀಧರಾಗಿದ್ದಾರೆ. 2022ರಲ್ಲಿ ಲಂಡನಿನ ಬರ್ಮಿಂಗ್ಹ್ಯಾಮ್ ನಲ್ಲಿ ನಡೆದ ಕಾಮನ್ವೆಲ್ತ್ ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡದ ಪ್ರತಿನಿಧಿಯಾಗಿ ಭಾಗವಹಿಸಿದ್ದ ಅರುಣ್ ಮಾಚಯ್ಯ, ಈ ಹಿಂದೆ ವಿಶ್ವದ ಹಲವೆಡೆ ನಡೆದ ಹಲವಾರು ಅಂತರರಾಷ್ಟ್ರೀಯ ಚಾಂಪಿಯನ್ಶಿಪ್ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಚಲೋ | ಪ್ರಜ್ವಲ್-ರೇವಣ್ಣಗೆ ‘ಓನ್ಲೀ ಜೈಲ್ – ನೋ ಬೇಲ್’ ಎಂದು ಸರ್ಕಾರ ಹೇಳಬೇಕು: ಸುಭಾಷಿಣಿ ಅಲಿ

ಹಾಸನದಲ್ಲಿ ನಡೆದಿರುವ ಲೈಂಗಿಕ ದಬ್ಬಾಳಿಕೆಯನ್ನು ಖಂಡಿಸಿ, ಸಂತ್ರಸ್ತೆಯರಿಗೆ ಧೈರ್ಯ ತುಂಬಲು ನಾವಿಲ್ಲಿದ್ದೇವೆ....

ಪ್ರಜ್ವಲ್ ಲೈಂಗಿಕ ಹಗರಣ | ಹೋರಾಟದ ನಡಿಗೆ ಹಾಸನದ ಕಡೆಗೆ; ಪ್ರತಿಭಟನಕಾರರ ಪ್ರಮುಖ ಬೇಡಿಕೆಗಳು

ನೂರಾರು ಮಹಿಳೆಯರ ಮೇಲೆ ಅತ್ಯಾಚಾರ, ದೌರ್ಜನ್ಯ ಮಾಡಿದ ಆರೋಪವನ್ನು ಹೊತ್ತಿರುವ, ದೇಶದಿಂದ...

ಬೀದರ್‌ | ʼಜೈಶ್ರೀರಾಮ್‌ʼ ಹಾಡು ಹಾಕಿದಕ್ಕೆ ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳ ನಡುವೆ ಗಲಾಟೆ

ಧರ್ಮವೊಂದಕ್ಕೆ ಸಂಬಂಧಿಸಿದ ಗೀತೆಗೆ ನೃತ್ಯ ಮಾಡುತ್ತಿರುವಾಗ ಎರಡು ಸಮುದಾಯದ ವಿದ್ಯಾರ್ಥಿಗಳು ಪರಸ್ಪರ...

ಪ್ರಜ್ವಲ್‌ ರೇವಣ್ಣ ಪ್ರಕರಣ ಯಾವುದೇ ಡಿಟರ್ಜೆಂಟ್‌ನಿಂದ ಹೋಗುವ ಕಲೆಯಲ್ಲ: ಮಾಜಿ ರಾಜ್ಯಸಭಾ ಸದಸ್ಯ ಜವರೇಗೌಡ

ದೇವೇಗೌಡ ಅವರ ಕುಟುಂಬದಿಂದ ಸಮಾಜದ ಮೇಲಾಗಿರುವ ಅತ್ಯಾಚಾರ, ದುರ್ನಡತೆಯನ್ನು ಯಾವುದೇ ನಾಗರಿಕರೂ...