ಮಾಸಿಕ ಪ್ರೋತ್ಸಾಹಧನ ಹೆಚ್ಚಳಕ್ಕೆ ಆಗ್ರಹಿಸಿ ಕಲಬುರಗಿ, ಯಾದಗಿರಿಯಲ್ಲಿ ಆಶಾ ಕಾರ್ಯಕರ್ತೆಯರ ಧರಣಿ

Date:

ಆಶಾ ಕಾರ್ಯಕರ್ತೆಯರಿಗೆ ₹10 ಸಾವಿರ ಗೌರವ ಧನ ನೀಡುವ ಆದೇಶವನ್ನು ತಕ್ಷಣ ಜಾರಿಗೊಳಿಸಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಬೀದರ್‌, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಮಂಗಳವಾರ ಬೃಹತ್‌ ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನೆಯಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತೆಯರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಎಐ ಕರಾಳ ಮುಖ: ಮುಂದಿನ ಹತ್ತು ವರ್ಷಗಳಲ್ಲಿ ನಾಗರಿಕತೆಗೆ...

ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ ವಿನಾಶಕ್ಕಾಗಿಯಲ್ಲ. ಅಷ್ಟಕ್ಕೂ ಮುಂದಿನ ಒಂದು ದಶಕವು ಮಾನವ ನಾಗರಿಕತೆಯ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ನಿರ್ಣಾಯಕ ಅವಧಿಯಾಗಲಿದೆ ಎಂಬುದು ಖಚಿತ. ಸಾಕಷ್ಟು...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ಜನವರಿಯಲ್ಲಿ ಬೆಂಗಳೂರಿನಲ್ಲಿ 40 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಹೋರಾಟ ಕೈಗೊಂಡಾಗ, ಗೌರವಧನವನ್ನು ₹10 ಸಾವಿರಕ್ಕೆ ಹೆಚ್ಚಿಸುವುದಾಗಿ ಸರ್ಕಾರ ಭರವಸೆ ಕೊಟ್ಟಿತ್ತು. ಆದರೆ, ಈವರೆಗೂ ಅದು ಈಡೇರಿಲ್ಲ. ಹಾಗಾಗಿ ಏಪ್ರಿಲ್‌ 1ರಿಂದ ಅನ್ವಯವಾಗುವಂತೆ ಗೌರವಧನವನ್ನು ₹10 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವೇ ಹೊರಡಿಸಿದ ಆದೇಶವನ್ನು ತಾವೇ ಜಾರಿ ಮಾಡುತ್ತಿಲ್ಲ. ಇದು ಅನ್ಯಾಯದ ಧೋರಣೆ. ಹಳ್ಳಿಗಳಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಯೊಂದು ಜವಾಬ್ದಾರಿ ಹೊತ್ತುಕೊಂಡು ಕೆಲಸ ಮಾಡುತ್ತಿದ್ದಾರೆ. ಆದರೂ ಸರ್ಕಾರ ಸೇವೆ ನಿರ್ಲಕ್ಷ್ಯ ಮಾಡುತ್ತಿದೆ. ಈ ಕೂಡಲೇ ಆದೇಶ ಜಾರಿ ಮಾಡದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆʼ ಎಂದು ಎಚ್ಚರಿಕೆ ನೀಡಿದರು.

ಏಪ್ರಿಲ್‌ 1ರಿಂದ ಅನ್ವಯವಾಗುವಂತೆ ಗೌರವಧನವನ್ನು ₹10 ಸಾವಿರಕ್ಕೆ ಹೆಚ್ಚಿಸಬೇಕು. ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣೆಯನ್ನು ಅವೈಜ್ಞಾನಿಕವಾಗಿ ಮೌಲ್ಯಮಾಪನ ಮಾಡುವುದನ್ನು ಕೈಬಿಡಬೇಕು. ಸೂಕ್ತ ವೇತನದೊಂದಿಗೆ ಆಶಾ ಸುಗಮಕಾರರನ್ನು ಮುಂದುವರಿಸಬೇಕು. ಸೇವಾನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು. ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ನೌಕರರ ಮಾದರಿಯಲ್ಲಿ ಆಶಾ ಕಾರ್ಯಕರ್ತೆಯರಿಗೂ ₹1,000 ಪ್ರೋತ್ಸಾಹಧನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಹಕ್ಕೊತ್ತಾಯ ಮಂಡಿಸಿದರು.

ಕಲಬುರಗಿ ಜಿಲ್ಲಾ ಗೌರವಾಧ್ಯಕ್ಷ ವಿ.ಜಿ.ದೇಸಾಯಿ ಸೇರಿದಂತೆ ಪ್ರಮುಖರಾದ ಗೀತಾ ಮಳ್ಳಿ, ಶಿವಲಿಂಗಮ್ಮ, ಸಂಗೀತಾ ಸಾವಳಗಿ, ಜಯಶ್ರೀ, ವಿಜಯಲಕ್ಷ್ಮೀ ತಾಯಮ್ಮ, ಶಾರದಾ ಈಜೇರಿ, ಲಕ್ಷ್ಮೀ ಮಂದೇವಾಲ, ಯಾಸಮೀನ ಅಂಕಲಗಾ, ಸುಗಂಧಾ ಅನ್ನೋಳ್ಳಿ, ಪ್ರಭಾ ಶಹಾಬಾದ, ಮಂಜುಳಾ ವಾಡಿ, ಸಾವಿತ್ರಿ ಇಂಗಳಗಿ, ರೇಣುಕಾ, ನಾಗವೇಣಿ ಚಿಂಚೋಳಿ, ಯಶೋಧಾ, ಲಕ್ಷ್ಮೀ ಸುಲೆಪೇಟ, ಲಕ್ಷ್ಮೀ ಚಿಮ್ಮನಚೂಡ, ಸಾಬಮ್ಮ, ವಿಜಯಲಕ್ಷ್ಮೀ, ಲಕ್ಷ್ಮೀ ಮಲಖೇಡ, ಲಕ್ಷ್ಮೀ ಕುರಕುಂಟಾ, ಸವಿತಾ ಅಫಜಲಪುರ, ಭಾರತಿ, ಗೌರಮ್ಮ, ಲಕ್ಷ್ಮೀ ಗೊಬ್ಬುರ, ಮಮತಾಜ, ಸೇರಿದಂತೆ, ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕಿನ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.

ಯಾದಗಿರಿಯಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ :

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಯಾದಗಿರಿ ಜಿಲ್ಲಾ ಸಮಿತಿಯಿಂದ ನಗರದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

IMG 20250812 WA0057
ಯಾದಗಿರಿಯಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು

ಸಂಘದ ಜಿಲ್ಲಾಧ್ಯಕ್ಷೆ ಡಿ.ಉಮಾದೇವಿ, ಸಂಘದ ಕಾರ್ಯದರ್ಶಿ ದೇವಕ್ಕಿ ವನದುರ್ಗ, ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ರಾಮಲಿಂಗಪ್ಪ ಬಿ.ಎನ್ ಸೇರಿದಂತೆ ಪುಷ್ಪಲತಾ, ನೀಲಮ್ಮ, ತಾಯಮ್ಮ , ಶಾಂತವ್ವ, ನಿಂಗಮ್ಮ, ಅಮೃತ, ದಾನಮ್ಮ, ಗೀತಾ, ಮೀನಾಕ್ಷಿ, ಗೌರಮ್ಮ, ಶಾರದಾದೇವಿ ಹಾಗೂ ನೂರಾರು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಇದನ್ನೂ ಓದಿ : ಬೀದರ್‌ | ಸರ್ಕಾರಿ ಸೌಲಭ್ಯದಿಂದ ವಂಚಿತರಾದ ಅಂಗವಿಕಲ ಸಹೋದರಿಯರಿಗೆ ಬೇಕಿದೆ ಸಹಾಯಹಸ್ತ!

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಈ ಬಾರಿ ಕಬ್ಬಿಗೆ ಟನ್‌ಗೆ ₹ 5,500 ದರ ನಿಗದಿಗೆ ರೈತ ಸಂಘದ ಅಧ್ಯಕ್ಷ ಚೂನಪ್ಪ‌ಪೂಜಾರಿ ಆಗ್ರಹ

"ಮಳೆ‌ ಕೊರತೆಯಿಂದ‌ ಎಲ್ಲ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಈ ಬಾರಿ...

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...

ಹಾವೇರಿ | ವಿರೋಧ ಪಕ್ಷದ ರೀತಿಯಲ್ಲಿ‌ ಕೆಲಸ ಮಾಡೋಣ : ಉಡಚಪ್ಪ ಮಾಳಗಿ ಕರೆ

ಜಿಲ್ಲೆಯಲ್ಲಿ‌ ವಿರೋಧ ಪಕ್ಷವೇ ಇಲ್ಲ. ಇಲ್ಲ ಅನೇಕ ಸಮಸ್ಯೆಗಳು ಇವೆ. ದಲಿತರ...