‘ಬೆಂಗಳೂರು ಕಂಬಳ’ಕ್ಕೆ ಚಾಲನೆ ನೀಡಲಿದ್ದಾರೆ ಅಶ್ವಿನಿ ಪುನೀತ್​ ರಾಜ್‌ಕುಮಾರ್

Date:

ಇತಿಹಾಸದಲ್ಲಿ ಮೊದಲ ಬಾರಿಗೆ ನಡೆಯಲಿರುವ ‘ಬೆಂಗಳೂರು ಕಂಬಳ’ಕ್ಕೆ ಕ್ಷಣಗಣನೆ ಆರಂಭವಾಗಿದೆ. ನವೆಂಬರ್ 25 ಹಾಗೂ 26ರಂದು ಕಂಬಳ ನಡೆಯಲಿದ್ದು, ಕೋಣಗಳು ಅರಮನೆ ಮೈದಾನದಲ್ಲಿ ಬೀಡುಬಿಟ್ಟಿವೆ. ಸುಮಾರು 200 ಜೊತೆ ಕೋಣಗಳು ಸ್ಪರ್ಧೆಯಲ್ಲಿ ಭಾಗಿಯಾಗಲಿದ್ದು, ಅರಮನೆ ಮೈದಾನದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

‘ಪವರ್​ ಸ್ಟಾರ್​ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್​ ರಾಜ್‌ಕುಮಾರ್ ಅವರು ಕಂಬಳ ಕರೆಗೆ​ ಚಾಲನೆ ನೀಡಲಿದ್ದಾರೆ’ ಎಂದು ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ​ಶಾಸಕ ಅಶೋಕ್ ಕುಮಾರ್ ರೈ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಇಂದು ‘ಕಂಬಳ’ದ ಸಿದ್ಧತೆಗಳ ಬಗ್ಗೆ ಮಾತನಾಡಿದ ಅವರು, ಅಶ್ವಿನಿ ಪುನೀತ್​ ರಾಜ್‌ಕುಮಾರ್ ಅವರು ಕಂಬಳ ಕರೆಗೆ​ ಚಾಲನೆ ನೀಡಲಿದ್ದು, ಸಂಜೆ 5.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಪುಟ ಸಚಿವರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

‘ಕರಾವಳಿ ಭಾಗದ ಎಲ್ಲ ಸಂಘ-ಸಂಸ್ಥೆ, ಜಾತಿಯವರ ಜೊತೆ ಸಮಾಲೋಚನೆ ನಡೆಸಿ ಒಗ್ಗಟ್ಟಿನಿಂದ ಬೆಂಗಳೂರಿನಲ್ಲಿ ಕಂಬಳ ನಡೆಸಬೇಕು ಎಂಬ ತೀರ್ಮಾನ ಮಾಡಿದ್ದೇವೆ. ಇದು ನಮ್ಮ ಸಂಕಲ್ಪವೂ ಆಗಿದೆ. ಶನಿವಾರ (ನ.25)ರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಆರಂಭವಾಗುತ್ತದೆ’ ಎಂದು ಅಶೋಕ್ ಕುಮಾರ್ ತಿಳಿಸಿದ್ದಾರೆ.

‘ಸಾಯಂಕಾಲ ಸಭಾ ಕಾರ್ಯಕ್ರಮ ನಡೆಯುತ್ತದೆ. ಶನಿವಾರ ಬೆಳಗ್ಗೆ 11 ಗಂಟೆಯ ಬಳಿಕ ನಟ ನಟಿಯರು ಭಾಗಿಯಾಗುತ್ತಾರೆ. ರವಿವಾರ (ನ.26) ರಂದು ಸಂಜೆ 5.30ಕ್ಕೆ ಕಂಬಳ ಕಾರ್ಯಕ್ರಮ ಮುಗಿಯುತ್ತದೆ’ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಜನರ ದುಡ್ಡು ಜನರ ಜೇಬಿಗೆ ಹಾಕಿದರೆ ಬಿಜೆಪಿಯವರಿಗೆ ಯಾಕೆ ಹೊಟ್ಟೆ ಉರಿ: ಸಿಎಂ ಸಿದ್ದರಾಮಯ್ಯ

‘ಬೆಂಗಳೂರು ಕಂಬಳವು ಆರು ವಿಭಾಗಗಳಲ್ಲಿ ನಡೆಯುತ್ತದೆ. ಕಂಬಳದ ಇತಿಹಾಸದಲ್ಲಿ ತೃತೀಯ ಬಹುಮಾನ ಇರಲಿಲ್ಲ. ಈ ಸಲ ಮೂರನೇ ಸ್ಥಾನಕ್ಕೂ ಕೂಡ 4 ಗ್ರಾಂ ಚಿನ್ನ 25 ಸಾವಿರ ಬಹುಮಾನ ನೀಡಲು ನಿರ್ಧರಿಸಿದ್ದೇವೆ. ಮೊದಲನೇ ಬಹುಮಾನ 16 ಗ್ರಾಂ ಚಿನ್ನ 1 ಲಕ್ಷ ನಗದು ನೀಡಲಾಗುತ್ತದೆ. ಎರಡನೇ ಬಹುಮಾನ 8 ಗ್ರಾಂ ಚಿನ್ನ 50 ಸಾವಿರ ನಗದು ನೀಡಲಾಗುತ್ತೆ. ಕೋಣ ಓಡಿಸಿ ವಿಜಯಶಾಲಿ ಆದವರಿಗೂ ಕೂಡ ಬಹುಮಾನ ವಿತರಿಸಲಿದ್ದೇವೆ’ ಎಂದು ಬೆಂಗಳೂರು ಕಂಬಳ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ರೈ ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಕಂಬಳ ಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಶೆಟ್ಟಿ, ಕಂಬಳ ತಜ್ಞ ಗುಣಪಾಲ ಕಡಂಬ ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಇಬ್ಬರ ಬಂಧನ

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಉಗಾರ ರಸ್ತೆಗೆ ಹೊಂದಿಕೊಂಡ...

ಬೆಂ.ಗ್ರಾಮಾಂತರ | ಕೃಷಿ ಹೊಂಡಕ್ಕೆ ಜಾರಿ ಬಿದ್ದ ಮಗಳು; ರಕ್ಷಿಸಲು ಹೋದ ಪೋಷಕರೂ ಸಾವು

ಕೃಷಿ ಹೊಂಡದಲ್ಲಿ ಕೈತೊಳೆಯಲು ಹೋಗಿ ಜಾರಿ ಬಿದ್ದ ಮಗಳನ್ನು ರಕ್ಷಿಸಲು ಹೋದ...

ನಮ್ಮದೇ ಬದುಕು ಬಿಂಬಿಸುವ ‘ಬನೇಲ್ ಅಂಡ್ ಆಡಮ್’- ನೋಡಬೇಕಾದ ಚಿತ್ರ

ಸೆನೆಗಲ್ಲಿನ ಯಾವುದೋ ಮೂಲೆಯ ಪುಟ್ಟ ಸಮುದಾಯವನ್ನು ಸಮಕಾಲೀನ ವಿಷಯಗಳೊಂದಿಗೆ ಬೆಸೆಯುವ, ಪ್ರಚಂಚದ...

ಉಡುಪಿ | ಸರ್ಕಾರ ಒಪ್ಪದೆ ಜಾತಿಗಣತಿ ವರದಿಯ ಮಾಹಿತಿ ಬಹಿರಂಗ ಪಡಿಸಲು ಸಾಧ್ಯವಿಲ್ಲ: ಜಯಪ್ರಕಾಶ್ ಹೆಗ್ಡೆ

"ರಾಜ್ಯದ 5.98 ಕೋಟಿ ಜನಸಂಖ್ಯೆಯನ್ನು ಸಮೀಕ್ಷೆ ಮಾಡಿದ ಸಾಮಾಜಿಕ ಶೈಕ್ಷಣಿಕ ಜನಗಣತಿ...