ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣ; ʼಬೆಳಗಾವಿ ಚಲೋʼ ಕೈಬಿಡಬೇಕೆಂದು ಸತೀಶ್​ ಜಾರಕಿಹೊಳಿ ಮನವಿ

Date:

Advertisements

ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮವಾಗುತ್ತದೆ. ಇಲ್ಲಿಗೆ ಯಾವುದೇ ಸಂಘಟನೆ ಬಂದರೂ ಹೊಡೆತ ಬೀಳುವುದು ನಮಗೆ ಎಂಬುದನ್ನು ಗಮನಿಸಬೇಕಾಗುತ್ತದೆ. ಹಾಗಾಗಿ, ʼಬೆಳಗಾವಿ ಚಲೋʼ ಕೈ ಬಿಡಬೇಕು ಎಂದು ಸಚಿವ ಸತೀಶ್​ ಜಾರಕಿಹೊಳಿ ಮನವಿ ಮಾಡಿದ್ದಾರೆ.

ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪೊಲೀಸರು ಮತ್ತು ಜಿಲ್ಲಾಧಿಕಾರಿ ಮಾಹಿತಿ ಕೊಟ್ಟಿದ್ದಾರೆ. ಇಬ್ಬರ ನಡುವೆ ನಡೆದ ಜಗಳವಷ್ಟೇ ಅದು. ಯಾವುದೇ ಸಂಘಟನೆ, ಭಾಷೆಗೆ ಹೋಗಬಾರದು ಎಂಬುದು ನಮ್ಮ ಮನವಿ‌. ಈ ರೀತಿಯ ಘಟನೆಗಳು ಹೊಸದೇನೂ ಅಲ್ಲ. ಇಡೀ ರಾಜ್ಯದಲ್ಲಿ ಪ್ರತಿದಿನ ಒಂದು ಕಡೆ ನಡೆಯುತ್ತವೆ. ಆದರೆ, ಅದು ಅಲ್ಲಿಯೇ ಮುಗಿಯುತ್ತದೆ. ಪೊಲೀಸ್ ಠಾಣೆಗೆ ಬಸ್ಸನ್ನೇ ತೆಗೆದುಕೊಂಡು ಹೋದ ಉದಾಹರಣೆಗಳೂ ಸಾಕಷ್ಟಿವೆ. ಪೊಲೀಸರು ಮತ್ತು ಕಾನೂನಿಗೆ ಆ ವಿಚಾರವನ್ನು ಬಿಡಬೇಕು. ಕನ್ನಡ-ಮರಾಠಿ ಸಂಘಟನೆಯೆಂದು ಬಿಂಬಿಸಬಾರದು” ಎಂದರು.

“ಪೊಲೀಸರು ಎರಡೂ ಕಡೆ ತನಿಖೆ ಮಾಡುತ್ತಿದ್ದಾರೆ. ಆದರೆ, ಪೋಕ್ಸೊ ಪ್ರಕರಣ ದಾಖಲಿಸಬಾರದಿತ್ತು. ನೂರು ಜನರ ಮುಂದೆ ನಡೆದಿರುವ ಘಟನೆ ಇದು. ಹಾಗಾಗಿ, ಆ ಪ್ರಶ್ನೆ ಬರುವುದಿಲ್ಲ. ಇದರಲ್ಲಿ ಪೊಲೀಸರಿಂದ ತಪ್ಪಾಗಿದೆ ಎಂಬುದೂ ಕೂಡ ನನ್ನ ಭಾವನೆ. ಮುಂದೆ ಕಾನೂನಿನಲ್ಲಿ ಸರಿಮಾಡಲು ಅವಕಾಶವಿದೆ. ಅದೊಂದು ಸಾಮಾನ್ಯ ಕೇಸ್ ಆಗಬೇಕು” ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಉಡುಪಿ | ಸರಕಾರದ ಹೆಸರು ಕೆಡಿಸುವ ಅಕ್ರಮ ಚಟುವಟಿಕೆಗಳಿಗೆ ಆಸ್ಪದ ನೀಡುವುದಿಲ್ಲ – ಕೃಷ್ಣ ಶೆಟ್ಟಿ

“ಎರಡೂ ಕಡೆಯ ಬಸ್​ಗಳಿಗೆ ಮಸಿ ಬಳಿಯುವ ಕೆಲಸವಾಗಿದೆ. ಕೊನೆಯದಾಗಿ ತೊಂದರೆಯಾಗುವುದು ಬೆಳಗಾವಿ ಮತ್ತು ಸರ್ಕಾರಕ್ಕೆ. ಇಂಥ ಘಟನೆಗಳು ನಡೆಯುವುದರಿಂದ ನೇರವಾಗಿ ಬೆಳಗಾವಿಗೆ ನಷ್ಟವಾಗುತ್ತದೆ. ಬೆಳೆಯುತ್ತಿರುವ ಬೆಳಗಾವಿಯನ್ನು ನಾವು ಪ್ರೋತ್ಸಾಹಿಸಬೇಕೇ ಹೊರತು ಇಂಥ ಘಟನೆಗಳನ್ನು ಪ್ರೋತ್ಸಾಹಿಸಬಾರದು” ಎಂದು ಹೇಳಿದರು.

“ಜಲಲ್ಪುರದಲ್ಲಿ ಇಂದು ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ನಾಳೆ ಮೃತದೇಹಗಳು ಬರಲಿವೆ. ನಮ್ಮ ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್, ಗೋಕಾಕ್ ಡಿವೈಎಸ್‌ಪಿ ಅವರು ಈಗಾಗಲೇ ಜಲಲ್ಪುರ ಪೊಲೀಸರ ಜತೆಗೆ ಮಾತನಾಡಿದ್ದಾರೆ. ಇಂದು ಬೆಳಿಗ್ಗೆಯೇ ಜಲಲ್ಪುರದಿಂದ ಮೃತದೇಹಗಳು ಬೆಳಗಾವಿ ಕಡೆ ಬರುತ್ತಿವೆ” ಎಂದು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

Download Eedina App Android / iOS

X