ಪ್ರತ್ಯೇಕ ಪ್ರಕರಣ | ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

Date:

  • ಹಾಸನದಲ್ಲಿ ಜೆಡಿಎಸ್‌ ಕಾರ್ಯಕರ್ತರಿಂದ ಕಾಂಗ್ರೆಸ್‌ ಕಾರ್ಯಕರ್ತನಿಗೆ ಹಲ್ಲೆ
  • ಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್‌ ಕಾರ್ಯಕರ್ತನಿಗೆ ಹಲ್ಲೆ

ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಬುಧವಾರ ಮತದಾನ ನಡೆಯುತ್ತಿದ್ದು, ಹಾಸನ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಜೆಡಿಎಸ್‌, ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ತಕರ್ತರ ನಡುವೆ ಮಾರಾಮಾರಿ ನಡೆದಿದೆ.

ಚುನಾವಣೆಯ ಹಿನ್ನೆಲೆ ಬಳ್ಳಾರಿ ಜಿಲ್ಲಾ ರಾಜಕೀಯ ಕಣ ಕಾವೇರಿದೆ. ಅದಕ್ಕೆ ಸಾಕ್ಷಿಯಾಗಿ ಮತದಾನದ ದಿನದಂದು ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಸಂಜೀವರಾಯನಕೋಟೆ ಗ್ರಾಮದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಉಂಟಾಗಿದೆ.

ಘಟನೆಯಲ್ಲಿ ಕಾಂಗ್ರೆಸ್ ಸ್ಥಳೀಯ ಮುಖಂಡ ಉಮೇಶ್ ಗೌಡ ಎಂಬುವರ ತಲೆಗೆ ಗಾಯವಾಗಿದೆ. ಉಮೇಶ್ ಗೌಡ ಇತ್ತಿಚೆಗೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಮತದಾನಕ್ಕೆ ತೆರಳುವ ವೇಳೆ ಕ್ಷುಲ್ಲಕ ಕಾರಣಕ್ಕೆ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದು ಗಲಾಟೆ ಉಂಟಾಗಿದೆ. ಈ ಸಂದರ್ಭದಲ್ಲಿ ಉಮೇಶ್ ಗೌಡ ಅವರಿಗೆ ತಲೆಗೆ ಕಲ್ಲೇಟು ಬಿದ್ದಿದೆ. ಸ್ಥಳಕ್ಕೆ ಧಾವಿಸಿದ ಬಳ್ಳಾರಿ ಗ್ರಾಮೀಣ ಪೋಲಿಸರು ಪರಿಸ್ಥಿತಿ ತಿಳಿಗೊಳಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಉಮೇಶ್‌ ಗೌಡ ಅವರನ್ನು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ.

ಅರಸೀಕೆರೆ
ಅರಸೀಕೆರೆ ಕಾಂಗ್ರೆಸ್‌ ಕಾರ್ಯಕರ್ತ ರಾಜು

ಅರಸೀಕೆರೆ ಕಾಂಗ್ರೆಸ್‌ ಕಾರ್ಯಕರ್ತನ ತಲೆಗೆ ಗಾಯ

ಹಾಸನ ಜಿಲ್ಲೆಯಾದ್ಯಂತ ಬೆಳಿಗ್ಗೆಯಿಂದ ಶಾಂತಿಯುತವಾಗಿ ಮತದಾನ ಪ್ರಕ್ರಿಯೆ ನಡೆಯುತ್ತಿತ್ತು. ಆದರೆ, ಮಧ್ಯಾಹ್ನದ ಬಳಿಕ ಅರಸೀಕೆರೆ ತಾಲೂಕಿನ ಮಾಲೆಕಲ್‌ ತಿರುಪತಿ ಬಳಿ ಜೆಡಿಎಸ್‌ ಕಾರ್ಯಕರ್ತರಿಂದ ಕಾಂಗ್ರೆಸ್‌ ಕಾರ್ತಕರ್ತನ ಮೇಲೆ ದಾಳಿ ನಡೆದಿದೆ.

ಮಾಲೆಕಲ್‌ ತಿರುಪತಿಯ ರಾಜು (26) ಗಾಯಗೊಂಡ ಯುವಕ. ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದಿದ್ದು, ಕಾಂಗ್ರೆಸ್‌ ಕಾರ್ಯಕರ್ತನ ತಲೆಗೆ ಗಂಭೀರ ಗಾಯವಾಗಿದೆ. ಬಳಿಕ ಆತನನ್ನು ಅರಸೀಕೆರೆಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಪ್ರತ್ಯೇಕ ಪ್ರಕರಣ: ಮತದಾನ ಮಾಡಲು ಬಂದಿದ್ದ ಇಬ್ಬರು ಸಾವು

ಅರಸೀಕೆರೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ ಎಂ ಶಿವಲಿಂಗೇಗೌಡ ಅವರು ಇತ್ತೀಚೆಗೆ ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದರು. ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದ ಸಂತೋಷ್‌ಗೆ ಕೊನೆ ಕ್ಷಣದಲ್ಲಿ ಟಿಕೆಟ್ ಸಿಗದ ಕಾರಣ ಬಿಜೆಪಿ ತೊರೆದು ಜೆಡಿಎಸ್‌ ಸೇರ್ಪಡೆಯಾಗಿ, ಜೆಡಿಎಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಬಿಜೆಪಿ ಸೇರಿದ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಮಂಜುನಾಥ್‌

ಶಾಸಕರ ಕಡೆಗಣನೆಗೆ ಬೇಸತ್ತು ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ...

 ರೈತ ಮುಖಂಡರ ಮೇಲೆ ಬಿಜೆಪಿಗರಿಂದ ದಾಳಿ; ಅಭಿಯಾನ ತೀವ್ರಗೊಳಿಸಲು ಮುಂದಾದ ರೈತರು

ರೈತ ವಿರೋಧಿ ಪಕ್ಷಗಳನ್ನು ಸೋಲಿಸಿ ಎಂದು ಚಾಮರಾಜನಗರದಲ್ಲಿ ಪ್ರಚಾರ ಜಾಥಾ ನಡೆಸುತ್ತಿದ್ದ...

ಬೆಂಗಳೂರು | 23 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

23 ವರ್ಷದ ಯುವತಿಯನ್ನು ಅಪಹರಿಸಿ, ಆಕೆಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ...