ವಕೀಲರ ಮೇಲೆ ಹಲ್ಲೆ; ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಗೃಹ ಸಚಿವರಿಗೆ ಮನವಿ

Date:

ವಕೀಲ ರವಿಕುಮಾ‌ರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ ತುಮಕೂರು ನಗರ ಪೋಲೀಸ್ ವೃತ್ತ ನಿರೀಕ್ಷಕರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಕೀಲರ ಸಂಘದಿಂದ ಶಿರಸ್ತೇದಾ‌ರ್ ಎಂ ಬಿ ರಘುರವರ ಮೂಲಕ ಗೃಹಸಚಿವ ಡಾ ಜಿ ಪರಮೇಶ್ವರ್ ಅವರಿಗೆ ಗುರುವಾರ ಮನವಿ ಸಲ್ಲಿಸಿದ್ದಾರೆ.

- Advertisement -

“ಅಮಾಯಕ ವಕೀಲರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯ ಎಲ್ಲೆಡೆ ಮಿತಿಮೀರಿದೆ. ಇಂತಹ ಗೂಂಡಾಗಿರಿಯನ್ನು ವಕೀಲರ ಸಂಘ ಸಹಿಸುವುದಿಲ್ಲ. ತುಮಕೂರಿನ ವಕೀಲ ರವಿಕುಮಾ‌ರ್ ಅವರು ಮಾಡಿದ ತಪ್ಪಾದರು ಏನು? ಅವರನ್ನು ಪೋಲೀಸ್ ವೃತ್ತ ನಿರೀಕ್ಷಕರು ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಾರೆ. ಅಲ್ಲದೆ ವಕೀಲ ರವಿ ಕುಮಾರ್ ಅವರ ಮೇಲೆ ಹಲ್ಲೆ ಮಾಡಿರುವುದಾದರೂ ಏಕೆ? ಈ ವಿಚಾರವಾಗಿ ಹಿರಿಯ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು” ಎಂದು ವಕೀಲ ಸಂಘದ ಅಧ್ಯಕ್ಷ ಬಿ ಟಿ ನಟರಾಜು ಆಗ್ರಹಿಸಿದರು.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ವಿನಾಕಾರಣ ವಕೀಲರ ಮೇಲೆ ಹಲ್ಲೆ ನಡೆಸಿರುವ ಪೊಲೀಸ್ ಅಧಿಕಾರಿಗಳು ಸ್ಪಷ್ಟನೆ ನೀಡಬೇಕು. ಹಲ್ಲೆ ನಡೆಸಿರುವ ಪೊಲೀಸ್ ಅಧಿಕಾರಿಗಳ ವಿರುದ್ದ ಗೃಹ ಸಚಿವರು ಸೂಕ್ತ ರೀತಿಯಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ವಕೀಲರ ಸಂಘದಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ವಕೀಲರ ಸಂಘದಿಂದ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿದ್ದೀರಾ: ಬುಡಕಟ್ಟು ಸಮುದಾಯ ಮತ್ತು ಮಹಿಳೆಯರ ಮತಗಳೇ ಜಾರ್ಖಂಡ್‌ನಲ್ಲಿ ನಿರ್ಣಾಯಕ: ಅದೇ ಬಿಜೆಪಿಗೆ ಸವಾಲು

ಈ ಸಂದರ್ಭದಲ್ಲಿ ವಕೀಲರ ಸಂಘದ ಪದಾಧಿಕಾರಿ ಕೆ ಸಿ ಚಂದ್ರಶೇಖ‌ರ್, ರಿಜ್ವಾನ್‌ಅಲಿ, ಬಿ ಎಸ್ ಸುರೇಶ್, ಪ್ರತಾಪ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...