ಬೆಳಗಾವಿ | ಮಹಿಳೆಯನ್ನು ಬೆತ್ತಲೆಗೊಳಿಸಿ ಹಲ್ಲೆ; ವಿಕೃತಿ ಮೆರೆದ ಏಳು ಮಂದಿ ಬಂಧನ

Date:

Advertisements

ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿರುವ ಅಮಾನವೀಯ ಅಮಾನುಷ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣದಲ್ಲಿ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಘಟನೆ ನಡೆದಿದೆ ಸಂತ್ರಸ್ತ ಮಹಿಳೆಯ ಮಗ ಅದೇ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ. ಯುವತಿಯ ಕುಟುಂಬಸ್ಥರು ಅವರ ಪ್ರೀತಿಯನ್ನು ಒಪ್ಪದ ಕಾರಣ, ಇಬ್ಬರೂ ಊರು ಬಿಟ್ಟು ಹೋಗಿದ್ದರು. ಇದರಿಂದ ಕೋಪಗೊಂಡ ಯುವತಿಯ ಕುಟುಂಬಸ್ಥರು ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಹಲ್ಲೆಗೈದು ವಿಕೃತಿ ಮೆರೆದಿದ್ದಾರೆ ಎಂದು ತಿಳಿದುಬಂದಿದೆ.

ಯುವತಿ ಪ್ರಿಯಾಂಕಾ ಕುಟುಂಬಸ್ಥರು ಬೇರೆ ಯುವಕನೊಂದಿಗೆ ಮದುವೆ ನಿಶ್ಚಯ ಮಾಡಿ, ‘ಯಾದಿ ಮೇಲೆ ಶಾದಿ’ ಮಾಡಲು ಮುಂದಾಗಿದ್ದರು. ಹೀಗಾಗಿ, ಪ್ರಿಯಾಂಕಾ ತಾನು ಪ್ರೀತಿಸುತ್ತಿದ್ದ ಯುವಕ ದುಂಡಪ್ಪ ಜೊತೆ ಭಾನುವಾರ ಮಧ್ಯರಾತ್ರಿ ಊರು ಬಿಟ್ಟು ಹೋಗಿದ್ದರು. ಇದನ್ನು ತಿಳಿದ ಆಕೆಯ ಕುಟುಂಬಸ್ಥರು, ಯುವಕನ ಮನೆಗೆ ನುಗ್ಗಿ, ಮನೆಯಲ್ಲಿ ಮಲಗಿದ್ದ ಯುವಕನ ತಾಯಿ ಕಮಲವ್ವ ಅವರನ್ನು ಎಳೆದುಕೊಂಡು ಬಂದು ಹಲ್ಲೆ ಮಾಡಿದ್ದಾರೆ ಎಂದು ವರದಿಯಾಗಿದೆ.

Advertisements

ಘಟನೆ ಸಂಬಂಧ ಬೆಳಗಾವಿಯ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದಲ್ಲಿ ಒಂಬತ್ತು ಮಂದಿಯನ್ನು ಆರೋಪಿಗಳೆಂದು ಉಲ್ಲೇಖಿಸಲಾಗಿದೆ. ಅವರಲ್ಲಿ, ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

“ಪರಾರಿಯಾಗಿರುವ ಇಬ್ಬರು ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ” ಎಂದು ಬೆಳಗಾವಿ ನಗರ ಪೊಲೀಸ್ ಕಮಿಷನರ್​​ ಸಿದ್ದರಾಮಪ್ಪ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X