ಕರ್ತವ್ಯ ಆರೋಪದ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನ ರಟಕಲ್ ಪೊಲೀಸ್ ಠಾಣೆಯ ಪಿಎಸ್‌ಐ ಗಂಗಮ್ಮ ಅವರನ್ನು ಅಮಾನತು ಮಾಡಲಾಗಿದೆ.
ಎರಡು ಕುಟುಂಬದ ಮಧ್ಯೆ ತಲೆದೋರಿದ ಜಮೀನು ವಿವಾದ ಇತ್ಯರ್ಥಪಡಿಸುವ ಮಾತುಕತೆ ವೇಳೆ ಪರಿಶಿಷ್ಟ ಸಮುದಾಯಕ್ಕೆ ಅವಮಾನ ಆಗುವ ರೀತಿಯಲ್ಲಿ ಮಾತನಾಡಿದ್ದಾರೆ ಎನ್ನಲಾದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಈ ಬಗ್ಗೆ ವಿರೋಧ ವ್ಯಕ್ತವಾಗಿ, ಕ್ರಮಕ್ಕೆ ಸಮುದಾಯದ ಮುಖಂಡರು ಆಗ್ರಹಿಸಿದರು.
ಈ ಪ್ರಕರಣ ಸಂಬಂಧ ಪಿಎಸ್‌ಐ ಗಂಗಮ್ಮ ಅವರನ್ನು ಅಮಾನತು ಮಾಡಿ ಈಶಾನ್ಯ ವಲಯ ಐಜಿಪಿ ಅಜಯ್ ಹಿಲೋರಿ ಅವರು ಆದೇಶ ಹೊರಡಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.