ಅಥಣಿ | ರಸ್ತೆ ಗುಂಡಿಗಳಲ್ಲಿ ಸಂಚರಿಸಲು ವಾಹನ ಸವಾರರು ಹೈರಾಣು: ಜನಪ್ರತಿನಿಧಿ, ಅಧಿಕಾರಿಗಳಿಗೆ ಹಿಡಿಶಾಪ

Date:

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಶಿನಾಳ ರಸ್ತೆಯ ಪಾಟೀಲ ತೋಟದ ರಸ್ತೆ ಗುಂಡಿಗಳಿಂದ ತುಂಬಿದ್ದು, ಬೈಕ್ ಸವಾರರಿಗೆ ಈ ಗುಂಡಿಗಳು ಕಾಣದಂತಾಗಿದ್ದು, ವಾಹನಗಳನ್ನು ಸಂಚರಿಸಲು ಹೈರಾಣಾಗುತ್ತಿದ್ದಾರೆ.

- Advertisement -

ಅಥಣಿ ತಾಲೂಕಿನಲ್ಲಿ ಹಲವು ಗ್ರಾಮಗಳಿಗೆ ತೆರಳಬೇಕಾದ ರಸ್ತೆಗಳು ಹದುಗೆಟ್ಟು ಹೋಗಿರುತ್ತವೆ. ಇಂತಹ ರಸ್ತೆಗಳ ದುರಸ್ತಿಗೆ ಸಂಬಂಧಪಟ್ಟವರು ಗಮನ ಹರಿಸುತ್ತಿಲ್ಲವೆಂಬುದು ಸ್ಥಳೀಯರ ಆರೋಪವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ...

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

“ತಗ್ಗು ಗುಂಡಿಯಂತಹ ರಸ್ತೆಗಳಲ್ಲಿ ವಾಹನಗಳನ್ನು ಚಲಾಯಿಸಲು ಸವಾರರು ಹೈರಾಣಾಗುತ್ತಿದ್ದರೂ ಕೂಡ ಸಂಬಂಧಪಟ್ಟವರು ಜಾಣಕುರುಡರಂತೆ ವರ್ತಿಸುತ್ತಿದ್ದಾರೆ. ಹಾಗಾಗಿ ಈ ರಸ್ತೆಗಳು ಹದಗೆಟ್ಟಿದ್ದರೂ ಕೂಡ ಹೇಳೋರಿಲ್ಲ, ಕೇಳೋರೂ ಇಲ್ಲ ಎನ್ನುವಂತಾಗಿದೆ” ಕಳವಳ ವ್ಯಕ್ತಪಡಿಸಿದ್ದಾರೆ.

“ಐಬಿ ರಸ್ತೆಯಲ್ಲಿಯೂ ತಗ್ಗುಗುಂಡಿಗಳು ಬಿದ್ದಿದ್ದು, ಪ್ಯಾಚ್ ವರ್ಕ್ ಮಾಡಿದ್ದು, ಪೂರ್ಣ ರಸ್ತೆ ನಿರ್ಮಾಣ ಮಾಡಿಲ್ಲ. ಈ ರಸ್ತೆಯಲ್ಲಿ ಸಂಚರಿಸುವವರಿಗೆ ತಗ್ಗುಗುಂಡಿ, ಧೂಳು ತುಂಬಿಕೊಳ್ಳುವ ರಸ್ತೆಗಳನ್ನು ನೋಡಬಹುದು” ಎಂದರು.

“ಇಂತಹ ಹದತಗೆಟ್ಟಿರುವ ರಸ್ತೆಯಲ್ಲಿ ಬೈಕ್‌ಗಳು ಸ್ಕಿಡ್‌ ಆಗಿ ಬಿದ್ದು, ಸವಾರರಿಗೆ ಅನಾಹುತಗಳು ಎದುರಾದರೆ ಯಾರು ಹೊಣೆ? ಹಾಳಾದ ರಸ್ತೆಯ ಅಕ್ಕಪಕ್ಕಗಳಲ್ಲಿ ಬೀದಿ ವ್ಯಾಪಾರಿಗಳು ತಳ್ಳುವ ಗಾಡಿ ಮೇಲೆ ಬಜ್ಜಿ, ವಡಾಪಾವ್, ಹೋಟೆಲ್‌ಗಳು ಟೀ ಶಾಪ್‌ಗಳು, ಫ್ರೂಟ್ಸ್ ವ್ಯಾಪಾರಿಗಳು, ಪಾನಿಪೂರಿಯಂತಹ ವ್ಯಾಪಾರ ಮಾಡುತ್ತಿರುವ ವ್ಯಾಪಾರಸ್ಥರು ಈ ರಸ್ತೆ ಧೂಳಿನಿಂದ ಹೈರಾಣಾಗುತ್ತಿದ್ದಾರೆ” ಎಂಬುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಅಥಣಿ ತಾಲೂಕಿನ ರಸ್ತೆ ಗುಂಡಿ

“ಈ ಬಗ್ಗೆ ಮಾಧ್ಯಮ ಹಾಗೂ ಪತ್ರಿಕೆಗಳಲ್ಲಿ ವರದಿಗಳನ್ನು ಪ್ರಕಟಿಸಿದರೂ ಕೂಡ ಯಾರೂ ತಲೆಕೆಡಿಸಿಕೊಳ್ಳುತ್ತಿಲ್ಲ. ವಾಹನ ಸವಾರರು ಸಂಚರಿಸುವಾಗ ರಸ್ತೆ ದುರಸ್ತಿಪಡಿಸುವಂತೆ ಆಗ್ರಹಿಸಿ ಸಂಬಂಧಪಟ್ಟವರಿಗೆ ಹಿಡಿಶಾಪ ಹಾಕುತ್ತ ಸಂಚರಿಸುತ್ತಿದ್ದಾರೆ. ಸಂಬಂಧಪಟ್ಟವರು ಇನ್ನಾದರೂ ಮಾಧ್ಯಮ ವರದಿಗಳಿಗೆ ಗಮನಹರಿಸಿ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ದಿ ಇಂಟೆಲೆಕ್ಚುವಲ್ ಶಾಲಾ ಮಕ್ಕಳಿಂದ ವಿಜ್ಞಾನ ವಸ್ತುಪ್ರದರ್ಶನ: ಗಮನ ಸೆಳೆದ ಮಾದರಿಗಳು

“ಸಂಬಂಧಪಟ್ಟವರು ತಾಲೂಕು ಆಡಳಿತ, ಜಿಲ್ಲಾಡಳಿತ, ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ರಾಜ್ಯಪಾಲರು, ರಾಷ್ಟ್ರಪತಿಗಳು, ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಪ್ರಧಾನ ಮಂತ್ರಿಗಳು, ಸಾರಿಗೆ ಸಚಿವರು, ಶಾಸಕರು ತಾಲೂಕಿನ ಎಲ್ಲ ರಸ್ತೆಗಳನ್ನು ಸರಿಪಡಿಸುತ್ತಾರೆಯೋ? ಅಥವಾ ತಗ್ಗು ಗುಂಡಿಯಂತಹ ರಸ್ತೆಗಳು ಮತ್ತೆ ಯತಾಸ್ಥಿತಿ ಮುಂದುವರೆಯುತ್ತವೆಯೇ? ಎಂಬುದನ್ನು ಕಾದು ನೋಡಬೇಕಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಅನಾಥನೆಂದು ಹೇಳಿ ಟಿಕೆಟ್ ಪಡೆದು ಗೆದ್ದರು, ಅಭಿವೃದ್ಧಿಗೆ ಕೊಡುಗೆಯೇ ಇಲ್ಲ:ಪ್ರದೀಪ್ ಈಶ್ವರ್ ವಿರುದ್ಧ ಹರಿದಾಯ್ದ ಜಿ.ಎಲ್. ಶಂಕರ್

ಚಿಂತಾಮಣಿ ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್...

ಕೋಲಾರ | ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶರೈತರ ಹಕ್ಕುಗಳ ಅರಿವಿನಿಂದ ಅರಣ್ಯ ಅಧಿಕಾರಿಗಳಿಗೆ ನಡುಕ: ಆರ್. ಶ್ರೀನಿವಾಸನ್

ರೈತರು ನಿದ್ದೆ ಮಾಡುವ ಸಂದರ್ಭವನ್ನು ಬಳಸಿಕೊಂಡು ಬೆಳಗಿನ ಜಾವ ಪೊಲೀಸ್ ಬೆಂಗಾವಲಿನಲ್ಲಿ...

OBC ವಿದ್ಯಾವಂತ ನಿರುದ್ಯೋಗಿಗಳ ಕುರಿತು ಅಧ್ಯಯನ; ಪ್ರವೀಣ ಪತ್ತಾರಗೆ ಕವಿವಿ ಪಿಎಚ್‌ಡಿ

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಮಾಜಶಾಸ್ತ್ರ ವಿಭಾಗದ ಸಂಶೋಧಕರಾದ ಪ್ರವೀಣ ಪತ್ತಾರ ಅವರು...

ಆಲಗೂರ ಪುನರ್ವಸತಿ ಕೇಂದ್ರವನ್ನು ಮರಳಿ ಗ್ರಾಮ ಪಂಚಾಯತಿಗೆ ಸೇರಿಸಲು ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರಸಭೆ ವ್ಯಾಪ್ತಿಗೆ ಸೇರಿಸಲಾಗಿರುವ ಆಲಗೂರ ಪುನರ್ವಸತಿ ಕೇಂದ್ರವನ್ನು...