ಬೀದರ್‌ | ಜಿಲ್ಲೆಯಲ್ಲಿ ಅಟ್ರಾಸಿಟಿ ಕೇಸ್‍ಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ : ಅಂಕುಶ ಗೋಖಲೆ

Date:

ಬೀದರ್ ಜಿಲ್ಲೆಯಲ್ಲಿ ಇಲ್ಲಿಯವರೆಗೆ ದಲಿತರ ಮೇಲೆ ಅನೇಕ ದೌರ್ಜನ್ಯ ಪ್ರಕರಣಗಳು ನಡೆದರೂ ಯಾವುದೇ ಕ್ರಮಕೈಗೊಳ್ಳದೆ ಜಿಲ್ಲಾಡಳಿತ ದಿವ್ಯ ಮೌನ ವಹಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ನಿಷ್ಕಾ ಳಜಿಯಿಂದ ಜಿಲ್ಲಾಡಳಿತ ನಿಷ್ಕ್ರೀಯಗೊಂಡಿದೆ ಎಂದು ಜನರ ಧ್ವನಿ ಸಂಘಟನೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಅಂಕುಶ ಗೋಖಲೆ ಆರೋಪಿಸಿದರು.

- Advertisement -

ಬೀದರ್ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ʼಬೀದರ್ ಜಿಲ್ಲೆಯಲ್ಲಿ ಅಟ್ರಾಸಿಟಿ ಕೇಸ್‍ಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಇತ್ತೀಚೆಗೆ ಕೊಪ್ಪಳ ಜಿಲ್ಲೆಯ ಮರಕುಂಬಿ ಗ್ರಾಮದಲ್ಲಿ 98 ಜನರ ಮೇಲೆ ಅಟ್ರಾಸಿಟಿ ಕೇಸ್ ದಾಖಲಾಗಿ ಅವರೆಲ್ಲರಿಗೆ ಜೀವಾವಧಿ ಶಿಕ್ಷೆಯಾಗಿದೆ. ಆದರೆ, ಬೀದರ್ ಜಿಲ್ಲೆಯಲ್ಲಿ ಪರಿಶಿಷ್ಟರ ಮೇಲೆ ಅನೇಕ ದೌರ್ಜನ್ಯ ಪ್ರಕರಣಗಳು ನಡೆದರೂ ಸಹ ಯಾವುದೇ ಕ್ರಮ ಕೈಗೊಳ್ಳದೆ ಜಿಲ್ಲಾಡಳಿತ ದಿವ್ಯ ಮೌನ ವಹಿಸಿದೆʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

2023ರ ಏಪ್ರಿಲ್‌ನಲ್ಲಿ ಭಾಲ್ಕಿ ತಾಲ್ಲೂಕಿನ ಮಳಚಾಪೂರ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯುವ ಸಂದರ್ಭದಲ್ಲಿ ದಲಿತರ ಮೇಲೆ ದೌರ್ಜನ್ಯ ನಡೆಯಿತು. ಆದರೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೌರ್ಜನ್ಯ ಎಸಗಿದವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. 2024ರ ಆಗಸ್ಟ್ 21 ರಂದು ಭಾಲ್ಕಿ ತಳವಾಡ (ಕೆ) ಗ್ರಾಮದಲ್ಲಿ ಸವರ್ಣಿಯ ಮಹಿಳೆ ಪರಿಶಿಷ್ಟ ವ್ಯಕ್ತಿಗೆ ಜಾತಿ ನಿಂದನೆ ಮಾಡಿದ್ದಾಳೆ. 2024ರ ಸೆಪ್ಟೆಂಬರ್ 27ರಂದು ಭಾಲ್ಕಿ ತಾಲ್ಲೂಕಿನ ರಾಚಪ್ಪ ಗೌಡಗಾಂವ ಗ್ರಾಮದಲ್ಲಿ ಪರಿಶಿಷ್ಟ ಮಹಿಳೆಯ ಮೇಲೆ ಅಲ್ಲಿನ ಯುವಕರು ಹಲ್ಲೆ ಮಾಡಿದ್ದು, ಭಾಲ್ಕಿ ತಾಲ್ಲೂಕಿನ ಮರೂರ ಗ್ರಾಮದಲ್ಲಿ 13 ಜನ ಸವರ್ಣಿಯರು ಪರಿಶಿಷ್ಟರ ಜಮೀನನ್ನು ಕಬಳಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಚಳಕಾಪೂರ ಗ್ರಾಮದಲ್ಲಿ ಸವರ್ಣಿಯರು ಪರಿಶಿಷ್ಟರ ಓಣಿಗಳಿಗೆ ನುಗ್ಗಿ ಹಲ್ಲೆ ಮಾಡಿರುವ ಅಮಾನುಷ ಘಟನೆ ನಡೆದಿದೆ. ಈ ಎಲ್ಲ ಘಟನೆಗಳು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರ ತವರು ಕ್ಷೇತ್ರದಲ್ಲಿ ಸಂಭವಿಸಿವೆ. ಈ 5 ಘಟನೆಗಳಲ್ಲಿ ಯಾರೊಬ್ಬರಿಗೂ ಸಹ ಅಟ್ರಾಸಿಟಿ ಕೇಸ್ ಅಡಿ ಶಿಕ್ಷೆಯಾಗದೇ ಇರುವುದು ದುರದೃಷ್ಟಕರ ಸಂಗತಿಯಾಗಿದೆ ಎಂದರು.

ಇಷ್ಟು ಘಟನೆಗಳು ಸಂಭವಿಸಿದರೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಸಂತ್ರಸ್ತರ ಮನೆಗಳಿಗೆ ಹೋಗಿ ಸಾಂತ್ವನ ಹೇಳದಿರುವುದು ವಿಪರ್ಯಾಸ. ದೌರ್ಜನ್ಯಕ್ಕೆ ಒಳಗಾದವರನ್ನು ಸಚಿವರು ಅವರ ಮನೆಗೆ ಕರೆಸಿಕೊಂಡು ಸಮಾಧಾನ ಪಡಿಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದರು.

ಈ ಎಲ್ಲ ಘಟನೆಗಳಲ್ಲಿ ಅಟ್ರಾಸಿಟಿ ಕೇಸ್ ಆಗದಂತೆ ಸಂಚು ರೂಪಿಸಿರುವ ಜಿಲ್ಲಾ ನ್ಯಾಯಾಲಯದ ಸರ್ಕಾರಿ ಅಭಿಯೋಜಕ ಹಾಗೂ ಭಾಲ್ಕಿ ಡಿವೈಎಸ್‍ಪಿ ಅವರೇ ನೇರ ಹೊಣೆ. ಈ ಇಬ್ಬರನ್ನು 15 ದಿವಸಗಳ ಒಳಗೆ ಇಲ್ಲಿಂದ ವರ್ಗಾವಣೆ ಮಾಡದಿದ್ದಲ್ಲಿ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಜಿಲ್ಲೆಯ ʼಬಿಳಿ ಬಂಗಾರʼ ಬೆಳೆಗಾರರಿಗೆ ಸಿಗದ ಪ್ರೋತ್ಸಾಹ : ಹೊರ ರಾಜ್ಯಕ್ಕೆ ಹತ್ತಿ ಮಾರಾಟ!

ಈ ಸಂದರ್ಭದಲ್ಲಿ ಜನರ ಧ್ವನಿ ಸಂಘಟನೆ ಜಿಲ್ಲಾ ಅಧ್ಯಕ್ಷ ರಾಜಕುಮಾರ ಶಿಂಧೆ, ಪ್ರಮುಖರಾದ ತಿಪ್ಪಣ್ಣ ವಾಲಿ, ಮಾರುತಿ ಕಾಂಬಳೆ, ರವಿ ಕೋಟೇರ್, ದತ್ತಾತ್ರಿ ನಾಗವಂಶಿ ಸೇರಿದಂತೆ ಇತರರು ಪತ್ರಿಕಾಗೋಷ್ಠಿಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಬೀದರ್‌ | ಬರದಲ್ಲೂ ಪಪ್ಪಾಯಿ ಬೆಳೆದು ₹25 ಲಕ್ಷ ಗಳಿಕೆ: ರೈತ ವೆಂಕಟರೆಡ್ಡಿ ತೋಟಕ್ಕೆ ಶಾಸಕರ ಭೇಟಿ

ಬರ ಪರಿಸ್ಥಿತಿಯ ನಡುವೆಯೂ ಆಧುನಿಕ ಕೃಷಿ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...